Download Our App

Follow us

Home » ಜಿಲ್ಲೆ » ಹೊಸಕೋಟೆಯಲ್ಲಿ ಕೃಷಿ ಹೊಂಡಕ್ಕೆ ಬಿದ್ದು ಒಂದೇ ಕುಟುಂಬದ ಮೂವರು ದುರ್ಮರಣ..!

ಹೊಸಕೋಟೆಯಲ್ಲಿ ಕೃಷಿ ಹೊಂಡಕ್ಕೆ ಬಿದ್ದು ಒಂದೇ ಕುಟುಂಬದ ಮೂವರು ದುರ್ಮರಣ..!

ಹೊಸಕೋಟೆ : ಕಾಲು ಜಾರಿ ಹೊಂಡಕ್ಕೆ ಬಿದ್ದು ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ ಘಟನೆ ಹೊಸಕೋಟೆಯಲ್ಲಿ ನಡೆದಿದೆ. 65 ವರ್ಷದ ಮರಿಯಪ್ಪ, 60 ವರ್ಷದ ಮುನಿಯಮ್ಮ, 40 ವರ್ಷದ ಮಗಳು ಭಾರತಿ ಮೃತಪಟ್ಟ ದುರ್ದೈವಿಗಳಾಗಿದ್ದಾರೆ.

ಹೊಸಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯ ಕರಿಬೀರನಹೊಸಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಕೈ ತೊಳೆಯಲು ಹೋಗಿ ಕಾಲು ಜಾರಿ ಕೃಷಿ ಹೊಂಡಕ್ಕೆ ಬಿದ್ದು ಸಾವನ್ನಪ್ಪಿದ್ದಾರೆ.

ಕರಿಬೀರನಹೊಸಹಳ್ಳಿ ಸಮೀಪ ಉತ್ಸವ ನಡೆಯುತ್ತಿತ್ತು. ಕಾರ್ಯಕ್ರಮಕ್ಕೆ ಹೋಗಿ‌ ಬರುವಾಗ ಕೈತೊಳೆಯಲು ಹೋಗಿ ಈ ದುರಂತ ಸಂಭವಿಸಿದೆ. ಹೊಸಕೋಟೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ದೇಹಗಳನ್ನ ಹೊರತೆಗೆದು ಹೊಸಕೋಟೆ ಸರ್ಕಾರಿ ಆಸ್ಪತ್ರೆ ಶವಾಗಾರಕ್ಕೆ ರವಾನಿಸಿದ್ದಾರೆ.

ಇದನ್ನೂ ಓದಿ : ಎರಡ್ಮೂರು ದಿನಗಳಲ್ಲಿ ಆಕಾಂಕ್ಷಿಗಳ ಹೆಸರನ್ನು ಹೈಕಮಾಂಡ್​ಗೆ ಕಳಿಸುತ್ತೇವೆ : ಬಿ.ವೈ ವಿಜಯೇಂದ್ರ..!

Leave a Comment

DG Ad

RELATED LATEST NEWS

Top Headlines

ವಿದ್ಯುತ್ ಸಂಪರ್ಕ ನೀಡಲು 16.5 ಲಕ್ಷ ರೂ. ಲಂಚಕ್ಕೆ ಬೇಡಿಕೆ – ರೆಡ್​ ಹ್ಯಾಂಡ್​ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ AEE-JE ಅಧಿಕಾರಿಗಳು..!

ಬೆಂಗಳೂರು : ಲಂಚ ಸ್ಚೀಕರಿಸುವಾಗ AEE, JE ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಅವಲಹಳ್ಳಿ ಬೆಸ್ಕಾಂ AEE ರಮೇಶ್ ಬಾಬು, JE ನಾಗೇಶ್

Live Cricket

Add Your Heading Text Here