Download Our App

Follow us

Home » ಸಿನಿಮಾ » ಚಿಕಿತ್ಸೆ ಫಲಕಾರಿಯಾಗದೆ ಖ್ಯಾತ ನಟಿ ರಿಷ್ತಾ ನಿಧನ..!

ಚಿಕಿತ್ಸೆ ಫಲಕಾರಿಯಾಗದೆ ಖ್ಯಾತ ನಟಿ ರಿಷ್ತಾ ನಿಧನ..!

ಖ್ಯಾತ ಮಾಡೆಲ್, ನಟಿ ರಿಷ್ತಾ ಲಬೊನಿ ಶಿಮಾನ ನಿಧನರಾಗಿದ್ದಾರೆ. 39ರ ಹರೆಯದ ನಟಿ ಸಾವಿನ ಸುದ್ದಿ ಅಭಿಮಾನಿಗಳಿಗೆ ಆಘಾತ ತಂದಿದೆ. ಬಾಂಗ್ಲಾದೇಶದ ಖ್ಯಾತ ನಟಿಯಾಗಿ ಗುರುತಿಸಿಕೊಂಡಿರುವ ರಿಷ್ತಾ ಬ್ರೈನ್ ಹ್ಯಾಮ್ರೇಜ್‌ನಿಂದ ಆಸ್ಪತ್ರೆ ದಾಖಲಾಗಿದ್ದರು. ಕಳೆದ 14 ದಿನಗಳಿಂದ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ರಿಷ್ತಾ ನಿನ್ನೆ ಮುಜೀಬ್ ಮೆಡಿಕಲ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ನಟಿ ಸಾವಿನ ಸುದ್ದಿಯನ್ನು ಸಹೋದರ ಇಜಾಜ್ ಬಿನ್ ಖಚಿತಪಡಿಸಿದ್ದಾರೆ.

ಮೇ 20ರ ವರೆಗೆ ಹಲವು ಕಾರ್ಯಕ್ರಮಗಲ್ಲಿ ಪಾಲ್ಗೊಂಡಿದ್ದ ರಿಷ್ತಾ, ಮೇ 21ರ ರಾತ್ರಿ ತೀವ್ರವಾಗಿ ಅಸ್ವಸ್ಥಗೊಂಡಿದ್ದರು. ಏಕಾಏಕಿ ಅಸ್ಪಸ್ಥಗೊಂಡ ನಟಿಯನ್ನು ಢಾಕಾದಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತಪಾಸಣೆ ನಡೆಸಿದ ವೈದ್ಯರು ತಕ್ಷಣೆ ಮತ್ತೊಂದು ಆಸ್ಪತ್ರೆಗೆ ಸ್ಥಳಾಂತರಿಸುವಂತೆ ಸೂಚಿಸಿದ್ದರು. ನಟಿಗೆ ಹೆಚ್ಚಿನ ಚಿಕಿತ್ಸೆಯ ಅಗತ್ಯವಿದೆ ಎಂದಿದ್ದರು. ನಂತರ ಮುಜೀಬ್ ಮೆಡಿಕಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಿನ್ನೆ ಚಿಕಿತ್ಸೆ ಫಲಿಸದೆ ರಿಷ್ತಾ ಮೃತಪಟ್ಟಿದ್ದಾರೆ.

ಬಾಂಗ್ಲಾದ ಹಲವು ಸಿನಿಮಾದಲ್ಲಿ ನಾಯಕಿಯಾಗಿ ರಿಷ್ತಾ ಕಾಣಿಸಿಕೊಂಡಿದ್ದಾರೆ. ಸೂಪರ್ ಹಿಟ್ ಚಿತ್ರಗಳನ್ನು ನೀಡಿದ ರಿಷ್ತಾ, 2014ರಲ್ಲಿ ಗಾಯಕ ಪರ್ವೆಜ್ ಸಜ್ಜದ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. 2016ರಲ್ಲಿ ನಟಿ ಸಿನಿಮಾದಿಂದ ದೂರ ಉಳಿದಿದ್ದರು. ಪತಿ ಪರ್ವೆಜ್ ಜೊತೆಗಿನ ವಿಚ್ಚೇದನ ನಂತರ ಸಿನಿಮಾಗೆ ರಿಷ್ತಾ ಮತ್ತೆ ಮರಳಿದ್ದರು. ಇದೀಗ ನಟಿ ನಿಧನಕ್ಕೆ ಬಾಂಗ್ಲಾದೇಶ ಸಿನಿಮಾ ಜಗತ್ತು ಕಂಬನಿ ಮಿಡಿದಿದೆ. ಇತ್ತ ಅಭಿಮಾನಿಗಳು ಆಘಾತಗೊಂಡಿದ್ದಾರೆ.

ಇದನ್ನೂ ಓದಿ : ಪ್ರಭಾಸ್‌ ಅಭಿಮಾನಿಗಳಿಗೆ ಗುಡ್​ ನ್ಯೂಸ್​ – “ಕಲ್ಕಿ 2898 AD” ಟ್ರೇಲರ್​​ ಬಿಡುಗಡೆಗೆ ಮುಹೂರ್ತ ಫಿಕ್ಸ್..!

Leave a Comment

DG Ad

RELATED LATEST NEWS

Top Headlines

ಬೆಳಗಾವಿ : ಮಕ್ಕಳ ಕಳ್ಳರ ಮೇಲೆ ಅಥಣಿ ಪೋಲಿಸರ ಫೈರಿಂಗ್..!

ಬೆಳಗಾವಿ : ಮಕ್ಕಳ ಕಳ್ಳರ ಮೇಲೆ ಅಥಣಿ ಪೋಲಿಸರು ಫೈರಿಂಗ್ ಮಾಡಿ ಇಬ್ಬರನ್ನು ಸುರಕ್ಷಿತವಾಗಿ ರಕ್ಷಿಸಿದ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ. ಮೂರು ತಂಡ ರಚಿಸಿ ಅಪಹರಣಕಾರರಿಗೆ

Live Cricket

Add Your Heading Text Here