Download Our App

Follow us

Home » ಅಪರಾಧ » ಕನ್ನಡದ ಖ್ಯಾತ ಯೂಟ್ಯೂಬರ್​​ ಅರೆಸ್ಟ್ : ಕಾರಣವೇನು ಗೊತ್ತಾ?

ಕನ್ನಡದ ಖ್ಯಾತ ಯೂಟ್ಯೂಬರ್​​ ಅರೆಸ್ಟ್ : ಕಾರಣವೇನು ಗೊತ್ತಾ?

ಬೆಂಗಳೂರು : ಬೆಂಗಳೂರಿನ ಖ್ಯಾತ ಯೂಟ್ಯೂಬರ್​​ನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಅನುಮತಿ ಇಲ್ಲದ ಸ್ಥಳದಲ್ಲಿ ವಿಡಿಯೋ ಮಾಡಿದ ಆರೋಪದ ಮೇಲೆ ಯಲಹಂಕ ಮೂಲದ ಯೂಟ್ಯೂಬರ್ ವಿಕಾಸ್ ಗೌಡನನ್ನು ಅರೆಸ್ಟ್ ಮಾಡಿದ್ದಾರೆ.

ಬೆಂಗಳೂರಿನ ದೇವನಹಳ್ಳಿಯಲ್ಲಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ರನ್ ​ವೇನಲ್ಲಿ ವಿಕಾಸ ಗೌಡ ವಿಡಿಯೋ ಮಾಡಿ ತನ್ನ ಯೂಟ್ಯೂಬ್​ನಲ್ಲಿ ಅಪ್ಲೋಡ್​ ಮಾಡಿದ್ದನು. ವಿಡಿಯೋದಲ್ಲಿ ಟಿಕೆಟ್ ಇಲ್ಲದೆ ಒಳಗಡೆ ಬಂದಿದ್ದೇನೆ, 24 ಗಂಟೆ ರನ್ ವೇ ಬಳಿಯೇ ಇದ್ದೆ. ಎಲ್ಲ ಅಧಿಕಾರಿಗಳ, ಸಿಬ್ಬಂದಿ ಕಣ್ಣುತಪ್ಪಿಸಿ ವಿಮಾನ ನಿಲ್ದಾಣದ ಒಳಗೆ ಪ್ರವೇಶ ಮಾಡಿ, ವಿಡಿಯೋ ಮಾಡಿದ್ದೇನೆ ಎಂದು ಹೇಳಿದ್ದನು.

ಈ ವಿಡಿಯೋವನ್ನು ನೋಡಿದ ಸಿಐಎಸ್ಎಫ್ ಅಧಿಕಾರಿಗಳು ವಿಕಾಸಗೌಡ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಳಿಕ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಠಾಣೆ ಪೊಲೀಸರು ವಿಕಾಸ್​ಗೌಡನನ್ನು ಬಂಧಿಸಿದ್ದಾರೆ.

ಇದೀಗ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಠಾಣೆ ಪೊಲೀಸರು ಆರೋಪಿ ವಿಕಾಸ ಗೌಡನನ್ನು ಅರೆಸ್ಟ್ ಮಾಡಿದ್ದಾರೆ. ಪೊಲೀಸರು ವಿಚಾರಣೆ ನಡೆಸಿದಾಗ ವಿಮಾನದಲ್ಲಿ ಪ್ರಯಾಣಿಸಲು ಟಿಕೆಟ್ ಪಡೆದಿದ್ದೇನೆ. ಆದರೆ ಪ್ರಯಾಣಿಸದೆ ರನ್ ​ವೇನಲ್ಲೆ ಉಳಿದುಕೊಂಡೆ. ಸುಮಾರು 4-5 ಗಂಟೆಗಳ ಕಾಲ ಅಲ್ಲಿಯೇ ಇದ್ದು, ವಿಡಿಯೋ ಮಾಡಿಕೊಂಡು ಬಂದೆ ಎಂದು ಹೇಳಿದ್ದಾನೆ. ವ್ಯೂವ್ಸ್ ಆಸೆಗಾಗಿ ರೂಲ್ಸ್ ಬ್ರೇಕ್ ಮಾಡಿದ ಯೂಟ್ಯೂಬರ್​​ ವಿಕಾಸ ಗೌಡ ಈಗ ಪೊಲೀಸರ ಅತಿಥಿಯಾಗಿದ್ದಾನೆ.

ಇದನ್ನೂ ಓದಿ : ಸೂರ್ಯವಂಶಸ್ಥ ಶ್ರೀ ರಾಮನಿಗೆ ಸೂರ್ಯ ರಶ್ಮಿ..!

Leave a Comment

DG Ad

RELATED LATEST NEWS

Top Headlines

ಪ್ಯಾರಿಸ್ ಪ್ಯಾರಾಲಿಂಪಿಕ್ಸ್‌ : ಪುರುಷರ ಜಾವೆಲಿನ್ ಥ್ರೋನಲ್ಲಿ ಚಿನ್ನದ ಪದಕಕ್ಕೆ ಮುತ್ತಿಟ್ಟ ನವದೀಪ್ ಸಿಂಗ್..!

ಪ್ಯಾರಿಸ್ : ಪ್ಯಾರಾಲಿಂಪಿಕ್ಸ್​ನಲ್ಲಿ ಶನಿವಾರ ನಡೆದ ಪುರುಷರ ಜಾವೆಲಿನ್ ಥ್ರೋ ಎಫ್​41 ಸ್ಪರ್ಧೆಯಲ್ಲಿ ಭಾರತದ ಜಾವೆಲಿನ್ ಎಸೆತಗಾರ ನವದೀಪ್ ಸಿಂಗ್ ಚಿನ್ನದ ಪದಕ ಗೆದ್ದಿದ್ದಾರೆ. 47.32 ಮೀಟರ್‌ ದೂರಕ್ಕೆ

Live Cricket

Add Your Heading Text Here