ಬೆಂಗಳೂರು : ಬೆಂಗಳೂರಿನ ಖ್ಯಾತ ಯೂಟ್ಯೂಬರ್ನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಅನುಮತಿ ಇಲ್ಲದ ಸ್ಥಳದಲ್ಲಿ ವಿಡಿಯೋ ಮಾಡಿದ ಆರೋಪದ ಮೇಲೆ ಯಲಹಂಕ ಮೂಲದ ಯೂಟ್ಯೂಬರ್ ವಿಕಾಸ್ ಗೌಡನನ್ನು ಅರೆಸ್ಟ್ ಮಾಡಿದ್ದಾರೆ.
ಬೆಂಗಳೂರಿನ ದೇವನಹಳ್ಳಿಯಲ್ಲಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ರನ್ ವೇನಲ್ಲಿ ವಿಕಾಸ ಗೌಡ ವಿಡಿಯೋ ಮಾಡಿ ತನ್ನ ಯೂಟ್ಯೂಬ್ನಲ್ಲಿ ಅಪ್ಲೋಡ್ ಮಾಡಿದ್ದನು. ವಿಡಿಯೋದಲ್ಲಿ ಟಿಕೆಟ್ ಇಲ್ಲದೆ ಒಳಗಡೆ ಬಂದಿದ್ದೇನೆ, 24 ಗಂಟೆ ರನ್ ವೇ ಬಳಿಯೇ ಇದ್ದೆ. ಎಲ್ಲ ಅಧಿಕಾರಿಗಳ, ಸಿಬ್ಬಂದಿ ಕಣ್ಣುತಪ್ಪಿಸಿ ವಿಮಾನ ನಿಲ್ದಾಣದ ಒಳಗೆ ಪ್ರವೇಶ ಮಾಡಿ, ವಿಡಿಯೋ ಮಾಡಿದ್ದೇನೆ ಎಂದು ಹೇಳಿದ್ದನು.
ಈ ವಿಡಿಯೋವನ್ನು ನೋಡಿದ ಸಿಐಎಸ್ಎಫ್ ಅಧಿಕಾರಿಗಳು ವಿಕಾಸಗೌಡ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಳಿಕ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಠಾಣೆ ಪೊಲೀಸರು ವಿಕಾಸ್ಗೌಡನನ್ನು ಬಂಧಿಸಿದ್ದಾರೆ.
ಇದೀಗ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಠಾಣೆ ಪೊಲೀಸರು ಆರೋಪಿ ವಿಕಾಸ ಗೌಡನನ್ನು ಅರೆಸ್ಟ್ ಮಾಡಿದ್ದಾರೆ. ಪೊಲೀಸರು ವಿಚಾರಣೆ ನಡೆಸಿದಾಗ ವಿಮಾನದಲ್ಲಿ ಪ್ರಯಾಣಿಸಲು ಟಿಕೆಟ್ ಪಡೆದಿದ್ದೇನೆ. ಆದರೆ ಪ್ರಯಾಣಿಸದೆ ರನ್ ವೇನಲ್ಲೆ ಉಳಿದುಕೊಂಡೆ. ಸುಮಾರು 4-5 ಗಂಟೆಗಳ ಕಾಲ ಅಲ್ಲಿಯೇ ಇದ್ದು, ವಿಡಿಯೋ ಮಾಡಿಕೊಂಡು ಬಂದೆ ಎಂದು ಹೇಳಿದ್ದಾನೆ. ವ್ಯೂವ್ಸ್ ಆಸೆಗಾಗಿ ರೂಲ್ಸ್ ಬ್ರೇಕ್ ಮಾಡಿದ ಯೂಟ್ಯೂಬರ್ ವಿಕಾಸ ಗೌಡ ಈಗ ಪೊಲೀಸರ ಅತಿಥಿಯಾಗಿದ್ದಾನೆ.
ಇದನ್ನೂ ಓದಿ : ಸೂರ್ಯವಂಶಸ್ಥ ಶ್ರೀ ರಾಮನಿಗೆ ಸೂರ್ಯ ರಶ್ಮಿ..!