ಮಂಗಳೂರು : ಫೆಂಗಲ್ ಸೈಕ್ಲೋನ್ ಎಫೆಕ್ಟ್ ಕೊಡಗು, ಮಂಗಳೂರು ಗಡಿಭಾಗಕ್ಕೂ ತಟ್ಟಿದ್ದು, ಈ ಹಿನ್ನೆಲೆ ಕಾಸರಗೋಡು ಹಾಗೂ ಕೊಡಗು, ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಾಳೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಕಾಸರಗೋಡಿನಲ್ಲಿ ಭಾರೀ ಮಳೆಯಾಗ್ತಿದ್ದು, ಕುಂಬಳೆ, ಬಂದ್ಯೋಡು ಬಳಿ ರಾಷ್ಟ್ರೀಯ ಹೆದ್ದಾರಿ ಸಂಪೂರ್ಣ ಜಲಾವೃತವಾಗಿದೆ. ಮಳೆಗೆ ರಸ್ತೆ ಕೆರೆಯಂತಾಗಿದ್ದು, ವಾಹನ ಸವಾರರು ಪರದಾಡುವಂತ ಪರಿಸ್ಥಿತಿ ಎದುರಾಗಿದೆ. ಮಂಗಳೂರು ನಗರದ ಹಲವು ಭಾಗಗಳಲ್ಲಿ ಮಳೆಯಾಗಿದ್ದು, ಮೀನುಗಾರಿಕೆಗೆ ತೆರಳದಂತೆ ಮೀನುಗಾರಿಕಾ ಇಲಾಖೆ ಜಂಟಿ ನಿರ್ದೇಶಕರು ಮಂಗಳೂರಿನ ಮೀನುಗಾರರಿಗೆ ಸೂಚಿಸಿದ್ದಾರೆ. ಹವಾಮಾನ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಿಸಿದೆ.
ಕೊಡಗಿನಲ್ಲಿ ಇಂದು ಮುಂಜಾನೆಯಿಂದಲೇ ಮಳೆಯಾಗುತ್ತಿದ್ದು, ಫೆಂಗಲ್ ಚಂಡಮಾರುತದ ಎಫೆಕ್ಟ್ ರೈತರ ಬೆಳೆಗಳ ಮೇಲೂ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ. ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದ್ದು, ಕೊಡಗಿನ ವಾಣಿಜ್ಯ ಬೆಳೆಗಳಾದ ಕಾಫಿ, ಕಾಳುಮೆಣಸು ಬೆಳೆಗಳಿಗೂ ಎಫೆಕ್ಟ್ ಬೀರಿದೆ. ಭತ್ತ ಕೊಯ್ಲು ಸಮಯವಾಗಿದ್ರಿಂದ ಭತ್ತದ ಕೃಷಿ ಮೇಲೂ ಮಳೆ ಎಫೆಕ್ಟ್ ಬೀರಿದ್ದು, ರೈತರು ಕಂಗಾಲ್ ಆಗಿದ್ದಾರೆ.
ಇದನ್ನೂ ಓದಿ : ಸರ್ಕಾರಿ ಕೆಲಸ ತೊರೆದು ಸನ್ಯಾಸತ್ವ ಸ್ವೀಕಾರಕ್ಕೆ ಸಜ್ಜಾದ ಮಂಡ್ಯದ KAS ಅಧಿಕಾರಿ..!