ರಾಯಚೂರು : ಕ್ಷುಲ್ಲಕ ವಿಚಾರಕ್ಕೆ 2 ಗುಂಪುಗಳ ಮಧ್ಯೆ ನಡುರಸ್ತೆಯಲ್ಲಿ ಮಾರಾಮಾರಿ ನಡೆದಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸೂಗುರು ಪಟ್ಟಣದಲ್ಲಿ ನಡೆದಿದೆ. ಮಾರಕಾಸ್ತ್ರ, ಬೆತ್ತದಿಂದ ಎರಡು ಗುಂಪುಗಳ ಯುವಕರು ಹೊಡೆದಾಡಿಕೊಂಡಿದ್ದಾರೆ.
10ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗೊಂಡು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಯುವಕರ ಹೊಡೆದಾಟದ ದೃಶ್ಯ ಕಂಡು ಸಾರ್ವಜನಿಕರು ಬೆಚ್ಚಿ ಬಿದ್ದಿದ್ದು, ಲಿಂಗಸೂಗುರು ಠಾಣೆಯಲ್ಲಿ ಪ್ರಕರಣ ದಾಖಲಾದ್ರೂ, ಪೊಲೀಸರು ಮಾತ್ರ ಇನ್ನೂ ಆರೋಪಿಗಳನ್ನ ಅರೆಸ್ಟ್ ಮಾಡಿಲ್ಲ.
ಮಹಿಳೆಯರು, ಮಕ್ಕಳು ಪಟ್ಟಣದಲ್ಲಿ ಓಡಾಡಲು ಭಯ ಪಡುವಂತಹ ಸ್ಥಿತಿ ನಿರ್ಮಾಣವಾಗಿದ್ದು, ಪೊಲೀಸರ ನಿರ್ಲಕ್ಷ್ಯಕ್ಕೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೂಡಲೇ ಆರೋಪಿಗಳನ್ನ ಅರೆಸ್ಟ್ ಮಾಡುವಂತೆ ಒತ್ತಾಯಿಸಿದ್ದಾರೆ.
ಇದನ್ನೂ ಓದಿ : ಅಮೆರಿಕದಲ್ಲಿ ಶಿವರಾಜ್ಕುಮಾರ್ಗೆ ಆಪರೇಷನ್ – ಕರೆ ಮಾಡಿ ಹಾರೈಸಿದ ಸಿಎಂ ಸಿದ್ದು..!
Post Views: 503