ಹಾಸನ : ಹಾಸನದ ಹಾಸನಾಂಬೆ ದೇವಿಯ ಉತ್ಸವ ಆರಂಭವಾಗಿದೆ. ಅಕ್ಟೋಬರ್ 24ರಂದು ದೇಗುಲದ ಬಾಗಿಲು ತೆರೆಯಲಾಗಿದೆ. ನವೆಂಬರ್ 3ರವರೆಗೆ ಉತ್ಸವ ನಡೆಯುತ್ತದೆ. ಲಕ್ಷಾಂತರ ಭಕ್ತರು ದೇವಿಯ ದರ್ಶನ ಪಡೆಯುತ್ತಿದ್ದಾರೆ. ಹಾಸನಾಂಬೆ ದೇವಿ ದರ್ಶನಕ್ಕೆ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಬಂದಿರುವ ಕಾರಣ ದೇವಿ ದರ್ಶನ ವಿಳಂಬವಾಗುತ್ತಿದೆ.
ಈ ಮಧ್ಯೆ ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನದ ಶಕ್ತಿ ದೇವತೆ ಹಾಸನಾಂಬೆ ದೇವಾಲಯದಲ್ಲಿ ಕುಟುಂಬಸ್ಥರನ್ನು ದೇಗುಲಕ್ಕೆ ಕರೆದೊಯ್ಯುವ ವಿಚಾರವಾಗಿ ಕಂದಾಯ ಇಲಾಖೆ ಸಿಬ್ಬಂದಿಯ ನಡುವೆ ಇಂದು ಮಾರಾಮಾರಿ ನಡೆದಿದೆ. ಹಾಸನಾಂಬೆ ದೇವಾಲಯದ ಎಕ್ಸಿಟ್ ಗೇಟ್ ಬಳಿ ಘಟನೆ ನಡೆದಿದ್ದು, ಸಿಬ್ಬಂದಿ ಕೈ ಕೈ ಮಿಲಾಯಿಸಿಕೊಂಡಿದ್ದಾರೆ. ಸಿಬ್ಬಂದಿಯ ಜಗಳ ಬಿಡಿಸಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ.
ಎರಡು ದಿನ ಹಿಂದಷ್ಟೇ ಹಾಸನಾಂಬ ದರ್ಶನ ವಿಚಾರವಾಗಿ ಹಾಸನ ನಗರಸಭೆ ಎದುರಿನ ಮುಖ್ಯ ದ್ವಾರದ ಬಳಿ ಪೊಲೀಸ್ ಇಲಾಖೆ ಸಿಬ್ಬಂದಿ ಹಾಗೂ ಡಿಸಿ ಕಚೇರಿ ಸಿಬ್ಬಂದಿ ಕೈ ಕೈ ಮಿಲಾಯಿಸಿದ್ದರು. ಜಗಳ ಬಿಡಿಸಲು ಸಿಬ್ಬಂದಿ ಹರಸಾಹಸ ಪಟ್ಟಿದ್ದರು.
ಇದನ್ನೂ ಓದಿ : ಕಾವೇರಿ ನದಿ ದಡದಲ್ಲಿ ರಾಕೆಟ್ ಲಾಂಚರ್ ಪತ್ತೆ – ಇದು ಇಲ್ಲಿಗೆ ಬಂದಿದ್ದೇಗೆ?