Download Our App

Follow us

Home » ಅಪರಾಧ » ಬೆಂಗಳೂರು : ನಾಯಿ ವಿಚಾರಕ್ಕೆ ಬಾಡಿಗೆದಾರರು ಹಾಗೂ ಮಾಲೀಕರ ನಡುವೆ ಫೈಟ್..!

ಬೆಂಗಳೂರು : ನಾಯಿ ವಿಚಾರಕ್ಕೆ ಬಾಡಿಗೆದಾರರು ಹಾಗೂ ಮಾಲೀಕರ ನಡುವೆ ಫೈಟ್..!

ಬೆಂಗಳೂರು : ನಾಯಿ ಸಾಕುವ ವಿಚಾರವಾಗಿ ಫ್ಲಾಟ್ ಮಾಲೀಕರು ಮಹಿಳೆ ಮೇಲೆ ಹಲ್ಲೆ ನಡೆಸಿದ ಘಟನೆ ಬೆಂಗಳೂರಿನ ಜೀವನಭೀಮಾನಗರದಲ್ಲಿ ನಡೆದಿದೆ. ತಡರಾತ್ರಿ ಅಪಾರ್ಟ್​ಮೆಂಟ್​ನ ಫ್ಲಾಟ್​ಗೆ ನುಗ್ಗಿ ಹಲ್ಲೆ ನಡೆಸಲಾಗಿದೆ.

ನಾಯಿ ಸಾಕಬಾರದು ಎಂದು ಫ್ಲಾಟ್ ಮಾಲೀಕ ಸೂಚಿಸಿದ್ದು, ಇದಕ್ಕೆ ಒಪ್ಪದ ಬಾಡಿಗೆದಾರರ ಮೇಲೆ ಮಾಲೀಕರು ಗರಂ ಆಗಿದ್ದಾರೆ. ಈ ವೇಳೆ ಮನೆ ಖಾಲಿ ಮಾಡುವಂತೆ ಮಾಲೀಕರು ಹೇಳಿದಾಗ ಕಿರಿಕ್ ನಡೆದಿದೆ. ಫೆಬ್ರವರಿ 3 ರಂದು ಮಧ್ಯರಾತ್ರಿ ಒಂದು ಗಂಟೆಗೆ ಫ್ಲಾಟ್​ಗೆ ನುಗ್ಗಿದ ನಾಲ್ಕೈದು ಮಂದಿ ಇದ್ದ ಗ್ಯಾಂಗ್, ಮಹಿಳೆ ಮೇಲೆ ಹಲ್ಲೆ ನಡೆಸಿದ್ದಾರೆ.

ಜೀವನ್ ಭೀಮಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ತನ್ನ ಮೇಲೆ ಹಲ್ಲೆ ನಡೆದಿದೆ ಎಂದು ಆರೋಪಿಸಿ ಮಹಿಳೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಆದರೆ, ಪೊಲೀಸರು FIR ದಾಖಲಿಸಿಲ್ಲ ಎಂದು ಮಹಿಳೆ ಆರೋಪಿಸಿದ್ದಾರೆ.

ಇದನ್ನೂ ಓದಿ : ಬೆಂಗಳೂರಿನ ಮತ್ತೊಂದು ವಿದ್ಯಾ ಸಂಸ್ಥೆಗೆ ಬಾಂಬ್ ಬೆದರಿಕೆ..!

Leave a Comment

DG Ad

RELATED LATEST NEWS

Top Headlines

ದರ್ಶನ್​ಗೆ ಮತ್ತೊಂದು ಸಂಕಷ್ಟ – ಪ್ರೊಡ್ಯೂಸರ್ ಭರತ್​​​ಗೆ ಬೆದರಿಕೆ ಹಾಕಿದ್ದ ಕೇಸ್​ಗೆ ಮರುಜೀವ.. NCR ದಾಖಲು..!

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆಯಲು ಕಷ್ಟಪಡುತ್ತಿರುವಾಗಲೇ ನಟ ದರ್ಶನ್​ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಈ ಹಿಂದೆ ಯಂಗ್​ ಪ್ರೊಡ್ಯೂಸರ್ ಭರತ್​ಗೆ ಬೆದರಿಕೆ ಹಾಕಿದ್ದ

Live Cricket

Add Your Heading Text Here