ಬೆಳಗಾವಿ : ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ವಿಧಾನಮಂಡಲ ಚಳಿಗಾಲದ ಅಧಿವೇಶನ ಇಂದಿನಿಂದ ಆರಂಭವಾಗುತ್ತಿದೆ. ಬಾಣಂತಿಯರ ಸಾವು, ಶಿಶುಗಳ ಸಾವು, ವಕ್ಫ್ ವಿವಾದ, ಮುಡಾ ಅಕ್ರಮ, ವಾಲ್ಮೀಕಿ ನಿಗಮ ಹಗರಣ, ಅಬಕಾರಿ ಇಲಾಖೆ ಭ್ರಷ್ಟಾಚಾರ, ಹೀಗೆ ಕಾಂಗ್ರೆಸ್ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಸಾಲು ಸಾಲು ಬಾಣಗಳು ಬಿಜೆಪಿಯ ಬತ್ತಳಿಕೆಯಲ್ಲಿವೆ. ಆದರೆ ,ಆಂತರಿಕ ಭಿನ್ನಮತದ ನಡುವೆ ಪ್ರತಿಪಕ್ಷಗಳು ಸದನದಲ್ಲಿ ಸರ್ಕಾರದ ವಿರುದ್ಧ ಹೇಗೆ ಹೋರಾಟ ನಡೆಸಲಿವೆ ಎಂಬ ವಿಚಾರ ಕುತೂಹಲ ಮೂಡಿಸಿದೆ.
ಇದೀಗ ಈ ಬಗ್ಗೆ ಬೆಳಗಾವಿಯಲ್ಲಿ ಮಾತನಾಡಿದ ಮಾಜಿ ಡಿಸಿಎಂ ಡಾ.ಅಶ್ವತ್ಥ್ ನಾರಾಯಣ್ ಅವರು, ನಮ್ಮಲ್ಲಿ ಯಾವುದೇ ಬಿಕ್ಕಟ್ಟುಗಳಿಲ್ಲ. ಸದನದಲ್ಲಿ ಒಟ್ಟಾಗಿಯೇ ಹೋರಾಟ ಮಾಡ್ತೀವಿ ಎಂದು ಹೇಳಿದ್ದಾರೆ.
ಇನ್ನು ಈ ಸರ್ಕಾರ ಬಂದ ದಿನದಿಂದಲೂ ಭ್ರಷ್ಟಾಚಾರದಲ್ಲಿ ಮುಳುಗಿದೆ. ವಾಲ್ಮೀಕಿ ಹಗರಣ, ಮುಡಾ ಸೈಟ್ ಪ್ರಕರಣ, ವಕ್ಪ್ ನೋಟಿಸ್ ಕೊಟ್ಟು ಅನ್ನದಾತನಿಗೆ ಅನ್ಯಾಯ ಮಾಡಿದೆ. ರಾಜ್ಯ ಸರ್ಕಾರದ ವಿರುದ್ಧ ನಾವು ಒಟ್ಟಾಗಿ ಹೋರಾಡುತ್ತೇವೆ. ಉತ್ತರ ಕರ್ನಾಟಕದ ಸಮಸ್ಯೆಗಳೂ ಚರ್ಚೆ ಆಗಬೇಕಿದೆ. ಈ ನಿಟ್ಟಿನಲ್ಲಿ ನಮ್ಮ ನಾಯಕರು ಎಲ್ಲಾ ತಯಾರಿ ಮಾಡಿಕೊಂಡಿದ್ದಾರೆ ಎಂದು
ಬಿಜೆಪಿ ಹಿರಿಯ ಶಾಸಕ ಅಶ್ವಥ್ ನಾರಾಯಣ್ ತಿಳಿಸಿದ್ದಾರೆ.
ಇದನ್ನೂ ಓದಿ : ದಿಕ್ಕೆಟ್ಟ ಸಿರಿಯಾ ಮೇಲೆ ಅಮೆರಿಕ ಏರ್ಸ್ಟ್ರೈಕ್.. ISIS ತಾಣಗಳ ಮೇಲೆ ಅಟ್ಯಾಕ್..!