Download Our App

Follow us

Home » ಸಿನಿಮಾ » ದರ್ಶನ್ ಕಂಡರೆ ಚಲನಚಿತ್ರ ವಾಣಿಜ್ಯ ಮಂಡಳಿ ಹೆದರುತ್ತಿದೆಯೇ? ಈ ಸ್ಟೋರಿ ಓದಿ..!

ದರ್ಶನ್ ಕಂಡರೆ ಚಲನಚಿತ್ರ ವಾಣಿಜ್ಯ ಮಂಡಳಿ ಹೆದರುತ್ತಿದೆಯೇ? ಈ ಸ್ಟೋರಿ ಓದಿ..!

ಬೆಂಗಳೂರು : ​ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅಂಡ್ ಗ್ಯಾಂಗ್ ಕಂಬಿ ಹಿಂದೆ ಬಂಧಿಯಾಗಿದೆ. ಈ ಬೆನ್ನಲ್ಲೇ ‘ಡಿ ಗ್ಯಾಂಗ್’ ಎಂಬ ಟೈಟಲ್​ಗೆ ಭಾರೀ ಡಿಮ್ಯಾಂಡ್ ಸೃಷ್ಟಿಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿಯೂ ‘ಡಿ ಗ್ಯಾಂಗ್’ ಹೆಸರಿನ ಬಳಕೆ ಜೋರಾಗಿದೆ. ಹೀಗಿರುವಾಗಲೇ ಚಿತ್ರತಂಡವೊಂದು ‘ಡಿ ಗ್ಯಾಂಗ್’ ಹೆಸರು ನೊಂದಾವಣಿಗೆ ಫಿಲಂ ಚೇಂಬರ್​ಗೆ ಅರ್ಜಿ ಸಲ್ಲಿಸಿದೆ. ಆದರೆ ಆ ಹೆಸರನ್ನು ನೀಡಲು ಸಾಧ್ಯವಿಲ್ಲವೆಂದು ಚೇಂಬರ್ ಹೇಳಿದೆ. ಸದ್ಯ ವಾಣಿಜ್ಯ ಮಂಡಳಿಯ ಈ ನಡೆ ಸಾಕಷ್ಟು ಅನುಮಾನಕ್ಕೆ ಎಡೆ ಮಾಡಿಕೊಟ್ಟಿದ್ದು, ದರ್ಶನ್ ಕಂಡರೆ ಚಲನಚಿತ್ರ ವಾಣಿಜ್ಯ ಮಂಡಳಿ ಹೆದರುತ್ತಿದೆಯೇ ಎಂಬ ಪ್ರಶ್ನೆಗಳು ಹುಟ್ಟಿಕೊಂಡಿದೆ.
ನಿರ್ದೇಶಕ ರಾಕಿ ದಾವಣಗೆರೆಯ FM ಫಿಲ್ಮ್ಸ್ ಬ್ಯಾನರ್ ಅಡಿ ‘ಡಿ ಗ್ಯಾಂಗ್​’ ಟೈಟಲ್​ ನೋಂದಣಿ ಮುಂದಾಗಿದ್ದರು. ಆದ್ರೆ ಚಲನಚಿತ್ರ ವಾಣಿಜ್ಯ ಮಂಡಳಿ ಈ ಟೈಟಲ್ ರಿಜಿಸ್ಟರ್ ಮಾಡಲು ಹಿಂದೇಟು ಹಾಕಿದೆ. ಇದೀಗ ಚಲನಚಿತ್ರ ವಾಣಿಜ್ಯ ಮಂಡಳಿ ನೋಂದಣಿಗೆ ಅವಕಾಶ ನೀಡಿಲ್ಲ ಎಂದು ಫೇಸ್​ಬುಕ್​ನಲ್ಲಿ ನಿರ್ದೇಶಕ ರಾಕಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಏಕೆ ಹೆಸರು ನೀಡಲು ಸಾಧ್ಯವಿಲ್ಲ ಎಂಬುದಕ್ಕೆ ಸ್ಪಷ್ಟ ಕಾರಣವನ್ನು ಸಹ ಮಂಡಳಿ ನೀಡಿಲ್ಲವೆಂದು ಆರೋಪಿಸಿದ್ದಾರೆ.

‘ಡಿ ಗ್ಯಾಂಗ್’ ಎನ್ನುವ ಹೆಸರಿಗಾಗಿ ಫಿಲ್ಮ್ ಛೇಂಬರ್ ನಲ್ಲಿ ವಿಚಾರಿಸಿದಾಗ ಈ ಹೆಸರಿನ ಟೈಟಲ್ ಅನ್ನು ಯಾರು ಕೂಡ ನೊಂದಣಿ ಮಾಡಿರಲಿಲ್ಲ. ನಾವು ಈ ಟೈಟಲ್ ನ ಮೇಲೆ ಸುಮಾರು ಎರಡು ವರ್ಷಗಳಿಂದ ಕೆಲಸ ಮಾಡಿದ್ದೇವೆ. ಅದಕ್ಕೆ ಸಾಕ್ಷಿಯಾಗಿ ಯೂಟ್ಯೂಬ್ ನಲ್ಲಿ ‘ಡಿ ಗ್ಯಾಂಗ್’ ಎನ್ನುವ ಹಾಡು ಬಿಡುಗಡೆ ಆಗಿದೆ.

ಈಗ ನಡೆಯುತ್ತಿರುವ ದರ್ಶನ್ ಅವರ ಪ್ರಕರಣಕ್ಕೂ ನಮ್ಮ ಟೈಟಲ್​ಗೂ ಯಾವುದೇ ಸಂಬಂಧ ಇರುವುದಿಲ್ಲ. ಆದರೆ ನಮ್ಮ ಟೈಟಲ್ ಅನ್ನು ಯಾವ ಕಾರಣಕ್ಕೆ ಚಲನಚಿತ್ರ ವಾಣಿಜ್ಯ ಮಂಡಳಿ ಅವರು ನೊಂದಣಿ ಮಾಡಿಕೊಳ್ಳಲು ಆಗುವುದಿಲ್ಲ ಎಂದರು ಎನ್ನುವುದು ನನಗೆ ಅರ್ಥವಾಗಲಿಲ್ಲ. ಮುಂದಿನ ದಿನಗಳಲ್ಲಿ ದೊಡ್ಡ ನಿರ್ಮಾಪಕರಿಗೆ ಅಥವಾ ದೊಡ್ಡ ನಿರ್ದೇಶಕರಿಗೆ ಈ ಟೈಟಲ್ ಕೊಟ್ಟರೆ. ಆಗ ಮಾತಾನಾಡಲು ಸಾಕ್ಷಿ ಬೇಕು ಎನ್ನುವ ಕಾರಣಕ್ಕೆ ಈ ವಿಷಯವನ್ನು ಇಲ್ಲಿ ತಿಳಿಸಲು ಇಷ್ಟಪಡುತ್ತೇನೆ’ ಎಂದು ‘ಡಿ ಗ್ಯಾಂಗ್’ ಸಿನಿಮಾವನ್ನು ನಿರ್ದೇಶಿಸಲು ಬಯಸಿರುವ ರಾಖಿ ಸೊಮ್ಲಿ ಎಂಬುವರು ಫೇಸ್​ಬುಕ್​ನಲ್ಲಿ ಬರೆದುಕೊಂಡಿದ್ದಾರೆ.

ಚಿತ್ರತಂಡ ಹೇಳಿಕೊಂಡಿರುವಂತೆ ‘ಡಿ ಗ್ಯಾಂಗ್’ ಹೆಸರನ್ನಿಟ್ಟುಕೊಂಡೇ ಅವರು ಕತೆ, ಚಿತ್ರಕತೆ ರಚಿಸಿಕೊಂಡಿದ್ದಾರೆ. ಅಲ್ಲದೆ ಅವರು ಹೇಳಿಕೊಂಡಿರುವಂತೆ, ದರ್ಶನ್ ಕುರಿತು ಈಗ ನಡೆಯುತ್ತಿರುವ ಘಟನೆಗಳಿಗೂ ಅವರ ಸಿನಿಮಾಕ್ಕೂ ಸಂಬಂಧವಿಲ್ಲ. ಅವರ ಸಿನಿಮಾದ ಕತೆ ರೇಣುಕಾ ಸ್ವಾಮಿ ಕೊಲೆಯನ್ನು ಆಧರಿಸಿದ್ದಲ್ಲ. ಆದರೂ ಸಹ ಮಂಡಳಿಯವರು ಸಿನಿಮಾ ಟೈಟಲ್ ನೀಡಲು ನಿರಾಕರಿಸಿದ್ದಾರೆ. ಪ್ರಕರಣದ ವಿಚಾರಣೆ ನಡೆಯುತ್ತಿರುವ ಕಾರಣ ಟೈಟಲ್ ನೀಡಲಾಗುವುದಿಲ್ಲ ಎಂದು ಹೇಳಿದ್ದಾರಂತೆ ಅಧ್ಯಕ್ಷರು.

ಇದನ್ನೂ ಓದಿ : ಖ್ಯಾತ ಹಿರಿಯ ಸಾಹಿತಿ ನಾಡೋಜ ಕಮಲಾ ಹಂಪನಾ ನಿಧನ..!

 

 

 

Leave a Comment

DG Ad

RELATED LATEST NEWS

Top Headlines

ಅಟ್ರಾಸಿಟಿ ಕೇಸ್​​ ಇದ್ರೂ ಅರೆಸ್ಟ್ ಆಗಿಲ್ಲ ಟೌನ್​ ಪ್ಲಾನಿಂಗ್​ ಆಫೀಸರ್ ಮಂಜೇಶ್ – FIR ಆಗಿದ್ರೂ ಸಸ್ಪೆಂಡ್‌ ಮಾಡದೆ ರಕ್ಷಣೆ ಮಾಡ್ತಿರೋದ್ಯಾಕೆ?

ಆನೇಕಲ್​​ : ಭೂ ವಿವಾದಕ್ಕೆ ಸಂಬಂಧಿಸಿದಂತೆ ಟೌನ್​ ಪ್ಲಾನಿಂಗ್​ ಆಫೀಸರ್ ಮಂಜೇಶ್​​​ ಜೆಸಿಬಿಯನ್ನೂ ತೆಗೆದುಕೊಂಡು ಹೋಗಿ ಟಾರ್ಚರ್ ಕೊಟ್ಟಿದ್ದ ಘಟನೆಯೊಂದು ನಡೆದಿತ್ತು. ಈ ಪ್ರಕರಣಕ್ಕೆ ಮಂಜೇಶ್​​​ ವಿರುದ್ದ

Live Cricket

Add Your Heading Text Here