ಮಂಗಳೂರು : ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಸಂಬಂಧ ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ವಿರುದ್ಧ FIR ದಾಖಲಾಗಿದೆ. ದಕ್ಷಿಣ ಕನ್ನಡ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, 47 ವರ್ಷದ ಮಹಿಳೆ ಹಿಂದು ಫೈರ್ ಬ್ರಾಂಡ್ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಲೈಂಗಿಕ ದೌರ್ಜನ್ಯ ದೂರು ದಾಖಲಿಸಿದ್ದಾರೆ.
2023ರ ಜೂನ್ನಲ್ಲಿ ಬೆಂಗಳೂರಿನ ಪೈ ವಿಸ್ತಾ ಹೋಟೆಲ್ ನಲ್ಲಿ ಲೈಂಗಿಕ ದೌರ್ಜನ್ಯ ಎಸಗಿರೋದಾಗಿ ಮಹಿಳೆ ಆರೋಪಿಸಿದ್ದಾರೆ. ಅರುಣ್ ಪುತ್ತಿಲ ದೌರ್ಜನ್ಯದ ಫೋಟೊ, ಸೆಲ್ಫಿ, ವಿಡಿಯೋ ಮಾಡಿ ಬ್ಲಾಕ್ ಮೇಲ್ ಮಾಡಿದ್ದಾರೆಂದು ಆರೋಪಿಸಲಾಗಿದೆ. ಅರುಣ್ ಪುತ್ತಿಲ ವಿರುದ್ಧ IPC 417, 354A, 506 ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ಅರುಣ್ ಪುತ್ತಿಲ ಪುತ್ತೂರು ವಿಧಾನಸಭಾ ಚುನಾವಣೆಗೆ ಹಿಂದುತ್ವದ ಹೆಸರಿನಲ್ಲಿ ಬಂಡಾಯ ಸ್ಪರ್ಧೆ ಮಾಡಿದ್ದರು. ಬಿಜೆಪಿಗೆ ಠಕ್ಕರ್ ಕೊಟ್ಟು ಬಂಡಾಯ ಸ್ಪರ್ಧೆ ಮಾಡಿ ಪ್ರಖ್ಯಾತಿ ಪಡೆದಿದ್ದರು. ಪುತ್ತಿಲ ಅವರ ಪ್ರಖ್ಯಾತಿ ಮತ್ತು ಹಿಂದುತ್ವದ ಪ್ರತಿಪಾದನೆಗೆ ಫಿದಾ ಆಗಿ, ಪುತ್ತಿಲಗೆ ಅಭಿಮಾನಿ ಆಗಿ ಸಾಮಾಜಿಕ ಜಾಲತಾಣದಲ್ಲಿ ಫಾಲೋ ಮಾಡಿದ್ದಾಗಿ ಮಹಿಳೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ನನ್ನ ಇಚ್ಛೆಗೆ ವಿರುದ್ಧವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ, ನನಗೆ ಮತ್ತು ನನ್ನ ಮಗಳಿಗೆ ಪುತ್ತಿಲ ದ್ರೋಹ ಮಾಡಿದ್ದಾರೆ. ವಿಶ್ವಾಸ ದ್ರೋಹ ವಿರುದ್ಧ ಕಾನೂನು ಕ್ರಮ ಕೈಗೊಳ್ಳಿ ಎಂದು ದೂರು ದಾಖಲಿಸಿದ್ದಾರೆ.
ಇದನ್ನೂ ಓದಿ : ಚಾರ್ಜ್ಶೀಟ್ ಸಲ್ಲಿಕೆ ಬೆನ್ನಲ್ಲೇ ಪತ್ನಿ ವಿಜಯಲಕ್ಷ್ಮಿಗೆ ಕರೆ ಮಾಡಿದ ದರ್ಶನ್..!