ಬೆಂಗಳೂರು : ಉಚುನಾವಣೆಯ ಅಬ್ಬರದ ಪ್ರಚಾರದಲ್ಲಿ ತೊಡಗಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಎಡಿಜಿಪಿ ಚಂದ್ರಶೇಖರ್ ನೀಡಿರುವ ದೂರಿನ ಹಿನ್ನೆಲೆಯಲ್ಲಿ ಬೆಂಗಳೂರಿನ ಸಂಜಯ್ ನಗರ ಠಾಣೆಯಲ್ಲಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಪುತ್ರ ನಿಖಿಲ್ ಕುಮಾರಸ್ವಾಮಿ, ಜೆಡಿಎಸ್ ಮುಖಂಡ ಸುರೇಶ್ ಬಾಬು ವಿರುದ್ಧ ಎಫ್ಐಆರ್ ದಾಖಲಾಗಿದೆ.
IPS ಅಧಿಕಾರಿ ಚಂದ್ರಶೇಖರ್ ಅವರಿಗೆ ಸುದ್ದಿಗೋಷ್ಟಿಯಲ್ಲಿ ಬೆದರಿಕೆ ಹಾಕಿರೋ ಆರೋಪ ಸಂಬಂಧ ಸಂಜಯ್ ನಗರ ಪೊಲೀಸ್ ಠಾಣೆಯಲ್ಲಿ FIR ದಾಖಲಿಸಿದ್ದಾರೆ. ADGP ಚಂದ್ರಶೇಖರ್ ಕೊಟ್ಟ ದೂರಿನ ಹಿನ್ನೆಲೆ FIR ದಾಖಲಾಗಿದ್ದು, ಪ್ರಕರಣದಲ್ಲಿ ಹೆಚ್.ಡಿ ಕುಮಾರಸ್ವಾಮಿ A-1 ಆರೋಪಿ ಹಾಗೂ ನಿಖಿಲ್ ಕುಮಾರಸ್ವಾಮಿ A-2 ಆರೋಪಿ, ಸುರೇಶ್ ಬಾಬು A-3 ಆರೋಪಿ ಎಂದು ಉಲ್ಲೇಖಿಸಲಾಗಿದೆ. ಲಂಚ ಪಡೆದಿರೋದಾಗಿ ಆರೋಪ ಮಾಡಿದ್ದಕ್ಕೆ ಕೇಸ್ ದಾಖಲಾಗಿದ್ದು, ಬೇರೆ ರಾಜ್ಯಕ್ಕೆ ಕಳಿಸೋದಾಗಿ ಹೆಚ್ಡಿ ಕುಮಾರಸ್ವಾಮಿ ಮೌಖಿಕ ಬೆದರಿಕೆ ಹಾಕಿದ್ದರು.
ಆರೋಪಿಗಳು ದುರುದ್ದೇಶ ಪೂರಿತವಾಗಿ ಆರೋಪ ಮಾಡಿದ್ದಾರೆ. ಮತ್ತು ತೊಂದರೆ ಕೊಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಚಂದ್ರಶೇಖರ್ ಅವರು ದೂರಿನಲ್ಲಿ ಉಲ್ಲೇಖಿಸಿದ್ದು, ಈ ಹಿನ್ನೆಲೆಯಲ್ಲಿ ಹೆಚ್ಡಿ ಕುಮಾರಸ್ವಾಮಿ ಹಾಗೂ ನಿಖಿಲ್, ಸುರೇಶ್ ಬಾಬು ವಿರುದ್ಧ 42ನೇ ಎಸಿಎಂಎಂ ನ್ಯಾಯಾಲಯದ ಆದೇಶದಂತೆ ಎಫ್ಐಆರ್ ದಾಖಲಾಗಿದೆ.
ಇದನ್ನೂ ಓದಿ : ಬಿಜಿಎಸ್ ವೈದ್ಯರ ಕೈಯಲ್ಲಿದೆ ನಟ ದರ್ಶನ್ ಬೇಲ್ ಭವಿಷ್ಯ..!