ಬೆಂಗಳೂರು : ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮನೋಹರ್ ನೀಡಿದ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇತ್ತೀಚೆಗೆ ಮಾಧ್ಯಮಗಳ ಮುಂದೆ ಹೇಳಿಕೆ ನೀಡುವಾಗ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹಾಗೂ ವೈಯಕ್ತಿಕವಾಗಿ ನಿಂದಿಸಿದ್ದಾರೆ. ಅಲ್ಲದೇ ಧರ್ಮಗಳ ನಡುವೆ ಕೋಮುಸೌಹಾರ್ಧತೆ ಉಂಟು ಮಾಡುವುದಲ್ಲದೇ ರಾಹುಲ್ ಗಾಂಧಿ ಕುಟುಂಬದ ಬಗ್ಗೆ ಮಾನಹಾನಿಕರ ಹೇಳಿಕೆ ನೀಡಿದ್ದಾರೆ ಎಂದು ವಿಡಿಯೊ ಕ್ಲೀಪಿಂಗ್ ಸಮೇತ ದೂರು ನೀಡಿದ್ದಾರೆ.
ದೂರಿನಲ್ಲೇನಿದೆ? ಬಸನಗೌಡ ಪಾಟೀಲ್ ಯತ್ನಾಳ್ ಪ್ರತಿ ಬಾರಿಯೂ ಕೇವಲ ತನ್ನ ರಾಜಕೀಯ ಹಾಗೂ ಪ್ರಚಾರಕ್ಕೋಸ್ಕರ ಕಾಂಗ್ರೆಸ್ ಪಕ್ಷದ ನಾಯಕರ ವಿರುದ್ಧ ಟೀಕೆ ನಡೆಸುತ್ತಿರುತ್ತಾರೆ. ಜೊತೆಗೆ ರಾಹುಲ್ ಗಾಂಧಿ ಅವರ ಬಗ್ಗೆ ಈಗಾಗಲೆ ಅನೇಕ ಬಾರಿ ಇಂತಹ ಟೀಕೆಗಳನ್ನು ಮಾಡಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಈಗಾಗಲೇ ತಮಗೆ ದೂರನ್ನು ಸಲ್ಲಿಸಿದ್ದೇವೆ. ಆದರೂ ಸಹ ಪೊಲೀಸ್ ಇಲಾಖೆ ಬಸವನಗೌಡ ಪಾಟೀಲ್ ಯತ್ನಾಳ್ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿಲ್ಲ. ಆದ್ದರಿಂದ ವೈಯಕ್ತಿಕವಾಗಿ ರಾಹುಲ್ ಗಾಂಧಿರವರ ವಿರುದ್ಧ ನಿಂದನೆ ಹಾಗೂ ಟೀಕೆಯನ್ನು ಮಾಡುತ್ತಿದ್ದಾರೆ.
ಇದು ಕಾನೂನು ಸುವ್ಯವಸ್ಥೆಗೆ ವಿರುದ್ಧವಾದ ಹೇಳಿಕೆ ಆಗಿರುವುದರಿಂದ ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಿಗೆ ತೀವ್ರ ನೋವು ತರುವಂತಹ ಹೇಳಿಕೆ ನೀಡಿರುವ ಇವರ ವಿರುದ್ಧ ತುರ್ತಾಗಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮನೋಹರ್ ಮನವಿ ಮಾಡಿದ್ದಾರೆ.
ಇದನ್ನೂ ಓದಿ : ವಿಕ್ಕಿ ಯಾವಾಗಲೂ ಹೇಗಿರ್ತಾರೆ ಗೊತ್ತಾ? – ದಾಂಪತ್ಯದ ಸೀಕ್ರೆಟ್ ರಿವೀಲ್ ಮಾಡಿದ ಕತ್ರಿನಾ ಕೈಫ್..!