ರಾಕಿಂಗ್ ಸ್ಟಾರ್ ಯಶ್ ನಟನೆಯ ಟಾಕ್ಸಿಕ್ ಚಿಂತ್ರತಂಡ ಸೆಟ್ಗಾಗಿ ಮರಗಳನ್ನ ಕಡಿದ ಆರೋಪದ ಮೇಲೆ ಅರಣ್ಯ ಇಲಾಖೆ FIR ದಾಖಲಿಸಿದೆ. ಕೋರ್ಟ್ ಆದೇಶ ಪಡೆದು ಅರಣ್ಯ ಇಲಾಖೆ ಎಫ್‍ಐಆರ್ ದಾಖಲಿಸಿದೆ.
ಈ ಸಂಬಂಧ ಕೆವಿನ್ ಸಂಸ್ಥೆ, ಕೆನರಾ ಬ್ಯಾಂಕ್ ಜನರಲ್ ಮ್ಯಾನೇಜರ್, ಹೆಚ್‍ಎಂಟಿ ಜನರಲ್ ಮ್ಯಾನೇಜರ್ ವಿರುದ್ಧ ಎಫ್‍ಐಆರ್ ದಾಖಲಾಗಿದೆ. 1964 ರ ಅರಣ್ಯ ಕಾಯ್ದೆ ಉಲ್ಲಂಘನೆ ಆರೋಪದಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಹೆಚ್ ಎಂಟಿ ಗ್ರೌಂಡ್ನಲ್ಲಿ ಚಿತ್ರತಂಡ ಸೆಟ್ ಹಾಕಿದ್ದು, ಈ ಸೆಟ್ ಹಾಕಲು ನೂರಾರು ಮರ ಕಡಿದಿದ್ದ ಆರೋಪ ಕೇಳಿಬಂದಿತ್ತು. ಈ ಬೆನ್ನಲ್ಲೇ ಅರಣ್ಯ ಸಚಿವ ಈಶ್ವರ್ ಖಂಡ್ರೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಮರ ಕಡಿದ ಸಂಬಂಧ ಚಿತ್ರತಂಡ, ಕೆನರಾಬ್ಯಾಂಕ್, ಹೆಚ್ ಎಂಟಿಗೆ ಈಶ್ವರ್ ಖಂಡ್ರೆ ನೊಟೀಸ್ ಜಾರಿ ಮಾಡಿದ್ದರು. ಇದೀಗ ಪ್ರಕರಣ ನ್ಯಾಯಾಲಯದ ಮೆಟ್ಟಿಲೇರಿದ್ದು, ಕೋರ್ಟ್ ಆದೇಶದ ಮೇರೆಗೆ ಎಫ್ ಐಆರ್ ದಾಖಲಾಗಿದೆ.
ಇದನ್ನೂ ಓದಿ : ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಮೀಸಲು ವಿಚಾರ – ಸ್ಪಷ್ಟನೆ ನೀಡಿದ ಸಿಎಂ ಕಚೇರಿ.. ಹೇಳಿದ್ದೇನು?