Download Our App

Follow us

Home » ಮೆಟ್ರೋ » ಬೆಂಗಳೂರಿನ M.S.ರಾಮಯ್ಯ ಆಸ್ಪತ್ರೆಯಲ್ಲಿ ಅಗ್ನಿ ಅವಘಡ..!

ಬೆಂಗಳೂರಿನ M.S.ರಾಮಯ್ಯ ಆಸ್ಪತ್ರೆಯಲ್ಲಿ ಅಗ್ನಿ ಅವಘಡ..!

ಬೆಂಗಳೂರು : ಬೆಂಗಳೂರಿನ ಪ್ರಸಿದ್ಧ ಆಸ್ಪತ್ರೆಗಳಲ್ಲಿ ಒಂದಾಗಿರುವ M.S.ರಾಮಯ್ಯ ಆಸ್ಪತ್ರೆಯಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಆಸ್ಪತ್ರೆಯ ಮೂರನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ರೋಗಿಗಳು, ಆಸ್ಪತ್ರೆ ಸಿಬ್ಬಂದಿಗೆ ತೀವ್ರ ಆತಂಕ ಉಂಟಾಗಿತ್ತು.

ಆಸ್ಪತ್ರೆಯ ಮೂರನೇ ಮಹಡಿಯ ಸಾಮಗ್ರಿಗಳು ಸಂಪೂರ್ಣವಾಗಿ ಸುಟ್ಟು ಹೋಗಿದ್ದು, ಘಟನಾ ಸ್ಥಳಕ್ಕೆ ಒಂದು ಅಗ್ನಿ ಶಾಮಕ ವಾಹನ ದೌಡಾಯಿಸಿ ಬೆಂಕಿ‌ ನಂದಿಸಲು ಹರಸಾಹಸ ಪಟ್ಟಿದ್ದಾರೆ. AC ಬ್ಲಾಸ್ಟ್​ನಿಂದ ಬೆಂಕಿ ಕಾಣಿಸಿಕೊಂಡಿರುವ ಮಾಹಿತಿ ಲಭ್ಯವಾಗಿದೆ. ಆಸ್ಪತ್ರೆಯ ನರ್ಸ್ ಸಮಯ ಪ್ರಜ್ಞೆ ಮೆರೆದು ಮಾಹಿತಿ ನೀಡಿದ್ದು, ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ರೋಗಿಗಳು ಚೆಲ್ಲಾಪಿಲ್ಲಿಯಾಗಿದ್ದರು.

ಒಂದು ಅಗ್ನಿಶಾಮಕ ದಳದ ವಾಹನದಿಂದ ಬೆಂಕಿ ನಂದಿಸಲು ಸಾಧ್ಯವಾಗದ ಕಾರಣ ಮತ್ತೊಂದು ವಾಹನವನ್ನು ತರಿಸಿಕೊಳ್ಳಲಾಗಿದೆ. ಎರಡು ಅಗ್ನಿಶಾಮಕ ವಾಹನಗಳಿಂದ ಬೆಂಕಿ ನಂದಿಸುವ ಕಾರ್ಯ ಮಾಡಲಾಗಿದೆ. ಇನ್ನು ಆಸ್ತ್ರೆಯಲ್ಲಿದ್ದ ರೋಗಿಗಳನ್ನು ಪಕ್ಕದ ಆಸ್ಪತ್ರೆಯ ಕಟ್ಟಡಕ್ಕೆ ಶಿಫ್ಟ್ ಮಾಡಲಾಗಿತ್ತು.

ಇದನ್ನೂ ಓದಿ : ಬಾಬಾನ ಸನ್ನಿಧಿಯಲ್ಲಿ ಅದ್ದೂರಿಯಾಗಿ ಸೆಟ್ಟೇರಿತು ’ತಾಯಿನೇ ದೇವರ?’ ಚಿತ್ರ..!

Leave a Comment

DG Ad

RELATED LATEST NEWS

Top Headlines

MLA ಮುನಿರತ್ನ ವಿರುದ್ಧ ರೇಪ್ ಆರೋಪದ ಬೆನ್ನಲ್ಲೇ ಮಾಜಿ ಕಾರ್ಪೊರೇಟರ್ ಪತಿಯ ಹನಿಟ್ರ್ಯಾಪ್ ವಿಡಿಯೋ ವೈರಲ್..!

ಬೆಂಗಳೂರು : ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ಬಿಜೆಪಿ ಶಾಸಕ ಮುನಿರತ್ನ ಸೇರಿ ಏಳು ಮಂದಿಯ ವಿರುದ್ಧ ರಾಮನಗರ ಜಿಲ್ಲಾ ವ್ಯಾಪ್ತಿಯ ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ

Live Cricket

Add Your Heading Text Here