ಮಂಗಳೂರು : ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಅಥೆಂಟಿಕ್ ಓಷನ್ ಟ್ರೆಷರ್ ಮೀನು ಸಂಸ್ಕರಣಾ ಘಟಕದಲ್ಲಿ ಅಗ್ನಿ ಅವಘಡ ಸಂಭವಿಸಿದ ಘಟನೆ ಮಂಗಳೂರಿನ ಸುರತ್ಕಲ್ನಲ್ಲಿ ನಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಸುರತ್ಕಲ್‌ನ SEZ ವ್ಯಾಪ್ತಿಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ತಗುಲಿ ಫಿಶ್‌ಮಿಲ್ ಹೊತ್ತಿ ಉರಿದಿದೆ. ಬೆಂಕಿ ತಗುಲಿದ ಪರಿಣಾಮ ಲಕ್ಷಾಂತರ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿದೆ.
ಸದ್ಯ ಕೈಗಾರಿಕಾ ವಲಯ ಎಂಆರ್ ಪಿಎಲ್, ಗೇಲ್ ಇಂಡಿಯಾ ಕಂಪೆನಿಗಳ ಅಗ್ನಿ ಶಾಮಕ ವಾಹನಗಳು ಸ್ಥಳಕ್ಕೆ ತೆರಳಿ ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿವೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ : ರಾಗಿಣಿ ಪ್ರಜ್ವಲ್ ನಟನೆಯ ‘ಶಾನುಭೋಗರ ಮಗಳು’ ಸಿನಿಮಾ ಸದ್ಯದಲ್ಲೇ ತೆರೆಗೆ..!
Post Views: 310