ಬೆಳಗಾವಿ : ಜಿಲ್ಲೆಯ ನಾವಗೆ ಗ್ರಾಮದಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿ ಟೇಪ್ ತಯಾರಿಕಾ ಕಾರ್ಖಾನೆಗೆ ನಿನ್ನೆ ರಾತ್ರಿ ಬೆಂಕಿ ಬಿದ್ದಿದೆ. ಸ್ನೇಹಂ ಕಾರ್ಖಾನೆಯ ಲಿಫ್ಟ್‌ನಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿ ಇಡೀ ಕಾರ್ಖಾನೆಗೆ ಬೆಂಕಿ ವ್ಯಾಪಿಸಿದೆ. ಬೆಂಕಿಯ ಕೆನ್ನಾಲಿಗೆಗೆ ಇಡೀ ಕಾರ್ಖಾನೆಯೇ ಭಸ್ಮವಾಗಿದೆ.
ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸುವ ಸಾಹಸ ಮಾಡಿದ್ದಾರೆ. ಬೆಳಗಾವಿ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕಂಪನಿಯಲ್ಲಿ ಸುಮಾರು 20 ಕಾರ್ಮಿಕರಿದ್ದರು ಎನ್ನಲಾಗಿದೆ. ಹಲವು ಕಾರ್ಮಿಕರು ಇನ್ನು ಒಳಗೆ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.
ಕಾರ್ಖಾನೆಗೆ ಬೆಂಕಿ ಹೊತ್ತಿಕೊಂಡ ತಕ್ಷಣ ಒಳಗೆ ಇದ್ದವರ ಪೈಕಿ ಹಲವರು ಹೊರಗೆ ಓಡಿ ಬಂದು ಅನಾಹುತದಿಂದ ತಪ್ಪಿಸಿಕೊಂಡಿದ್ದಾರೆ. ಗಂಭೀರ ಗಾಯಗೊಂಡ ಹಲವರನ್ನು ಬೆಳಗಾವಿ ಜಿಲ್ಲಾ ಆಸ್ಪತ್ರೆ ಹಾಗೂ ಇತರ ಆಸ್ಪತ್ರೆಗಳಿಗೆ ದಾಖಲು ಮಾಡಲಾಗಿದೆ. ಪ್ರಕರಣದ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.
ಇದನ್ನೂ ಓದಿ : ಉಡುಪಿಯ ಟೋಲ್ ಪ್ಲಾಝಾದಲ್ಲಿ ಯುವಕನ ಗೂಂಡಾಗಿರಿ – ಟೋಲ್ ಸಿಬ್ಬಂದಿಗೆ ಹಿಗ್ಗಾಮುಗ್ಗಾ ಥಳಿಸಿ ಪರಾರಿ..! –