ಕೇರಳ : ದೀಪಾವಳಿ ಹಬ್ಬಕ್ಕೆ ಮುನ್ನ ಪಟಾಕಿ ಕಿಡಿ ಹೊತ್ತಿ ಉರಿದು ಅಗ್ನಿ ಅವಘಡ ಸಂಭವಿಸಿರುವ ಘಟನೆ ಕಾಸರಗೋಡು ಜಿಲ್ಲೆಯ ನೀಲೇಶ್ವರಂ ದೇಗುಲದಲ್ಲಿ ನಡೆದಿದೆ. ಈ ದುರಂತದಲ್ಲಿ 150ಕ್ಕೂ ಹೆಚ್ಚು ಮಂದಿಗೆ ಗಾಯವಾಗಿದ್ದು, 10ಕ್ಕೂ ಹೆಚ್ಚು ಭಕ್ತರ ಸ್ಥಿತಿ ಗಂಭೀರವಾಗಿದೆ.
ಕಾಸರಗೋಡು ಜಿಲ್ಲೆಯ ನೀಲೇಶ್ವರದ ಅವನೀಲೇಶ್ವರಂನ ಅಂಜೂಟ್ಟಂಬಳಂ ವೀರರ್ ಕಾವು ತೆಯ್ಯಂ ಕಟ್ಟೆ ಮಹೋತ್ಸವದ ವೇಳೆ ಪಟಾಕಿ ಮಳಿಗೆಯಲ್ಲಿ ಸ್ಫೋಟಗೊಂಡಿದೆ. ಮೂವಳಂಕುಳಿ ಚಾಮುಂಡಿ ತೆಯ್ಯಂನ ಕುಳಿಚು ತೊಟ್ಟಂ ಆಚರಣೆಯ ವೇಳೆ ಮಧ್ಯರಾತ್ರಿ 12 ಗಂಟೆ ಸುಮಾರಿಗೆ ಈ ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ. ಬೆಂಕಿ ಕಿಡಿಯಿಂದ ಪಟಾಕಿ ಸ್ಪೋಟಗೊಂಡಿದ್ದು. ಉತ್ಸವಕ್ಕೆ ಸೇರಿದ್ದ ಸಾವಿರಾರು ಮಂದಿ ಚೆಲ್ಲಾಪಿಲ್ಲಿಯಾಗಿದ್ದಾರೆ.
ಬೆಂಕಿ ತಗುಲಿ ಹಲವರಿಗೆ ಗಾಯಗಳಾಗಿದ್ದು, ಹಲವರು ಕಾಲ್ತುಳಿತಕ್ಕೆ ಸಿಲುಕಿದ್ದಾರೆ. ಕೇರಳ ಸರ್ಕಾರ ಈ ಘಟನೆಯ ತನಿಖೆಗೆ ಆದೇಶ ನೀಡಿದೆ. ಗಂಭೀರವಾಗಿ ಗಾಯಗೊಂಡ ಮೂವರನ್ನು ಪರಿಯಾರಂ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ. ಹಲವು ಮಂದಿ ಮಂಗಳೂರಿನ ಖಾಸಗಿ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಇದನ್ನೂ ಓದಿ : ದೀಪಾವಳಿಗೆ ಟಿಕೆಟ್ ದರ ಹೆಚ್ಚಳ – ಖಾಸಗಿ ಬಸ್ಗಳ ಮೇಲೆ RTO ಅಧಿಕಾರಿಗಳಿಂದ ರೇಡ್..!