Download Our App

Follow us

Home » ಸಿನಿಮಾ » ಶಿವಣ್ಣನ ಜನ್ಮದಿನಕ್ಕೆ 131ನೇ ಸಿನಿಮಾದ ಮೊದಲ ಝಲಕ್ ರಿಲೀಸ್ : ‘ಐ ಆಮ್ ಕಮಿಂಗ್’ ಎಂದ ಕರುನಾಡ ಕಿಂಗ್..!

ಶಿವಣ್ಣನ ಜನ್ಮದಿನಕ್ಕೆ 131ನೇ ಸಿನಿಮಾದ ಮೊದಲ ಝಲಕ್ ರಿಲೀಸ್ : ‘ಐ ಆಮ್ ಕಮಿಂಗ್’ ಎಂದ ಕರುನಾಡ ಕಿಂಗ್..!

ಹ್ಯಾಟ್ರಿಕ್ ಹೀರೋ ಶಿವ ರಾಜ್​​ಕುಮಾರ್ ಹುಟ್ಟುಹಬ್ಬಕ್ಕೆ ಅವರ 131ನೇ ಚಿತ್ರದ ಝಲಕ್ ಅನಾವರಣಗೊಂಡಿದೆ. ಕನ್ನಡಿಗರ ಪ್ರೀತಿಯ ಕರುನಾಡ ಚಕ್ರವರ್ತಿ ಶಿವಣ್ಣನ ಜನ್ಮದಿನದ ವಿಶೇಷವಾಗಿ ರಾಶಿ ರಾಶಿ ಉಡುಗೊರೆಗಳು ಶಿವಸೈನ್ಯಕ್ಕೆ ಸಿಕ್ಕಿದೆ. ಆ ಸ್ಪೆಷಲ್ ಗಿಫ್ಟ್ ಗಳಲ್ಲಿ ಶಿವಣ್ಣನ 131ನೇ ಚಿತ್ರದ ಝಲಕ್ ತುಂಬಾನೇ ಸ್ಪೆಷಲ್ ಎನಿಸಿಕೊಂಡಿದೆ. ಯಾಕೆಂದರೆ ಈ ಹಿಂದೆ ಕನ್ನಡ ಚಿತ್ರರಂಗಕ್ಕೆ ರಾಮ್ ಗೋಪಾಲ್ ವರ್ಮಾ ಕರೆ ತಂದು ಶಿವಣ್ಣನಿಗೆ ಕಿಲ್ಲಿಂಗ್ ವೀರಪ್ಪನ್ ಸಿನಿಮಾ ಮಾಡಿಸಿದ್ದ ಸುಧೀರ್ ಮತ್ತೊಮ್ಮೆ ಕರುನಾಡ ಕಿಂಗ್​​ಗೆ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಜೊತೆಗೆ ತಮಿಳಿನ ಯುವ ನಿರ್ದೇಶಕ ಕಾರ್ತಿಕ್ ಅದ್ವೈತ್ ದೊಡ್ಮನೆ ದೊರೆಗೆ ಆಕ್ಷನ್ ಕಟ್ ಹೇಳುತ್ತಿದ್ದಾರೆ.

ಶಿವಣ್ಣನ ಜನ್ಮದಿನದ ಅಂಗವಾಗಿ 131ನೇ ಚಿತ್ರದ ಮೊದಲ ತುಣುಕು ಬಿಡುಗಡೆ ಮಾಡಲಾಗಿದೆ. 3 ನಿಮಿಷ 49 ಸೆಕೆಂಡ್ ಇರುವ ವಿಡಿಯೋ ತುಣುಕಿನಲ್ಲಿ ಪೊಲೀಸ್ ಸ್ಟೇಷನ್ ನಲ್ಲಿ ರಗಡ್ ಡೈಲಾಗ್ ಮೂಲಕ ಹೀರೋ ಇಂಟ್ರೂಡ್ಯೂಸ್ ಮಾಡಲಾಗುತ್ತದೆ. ಶಿವಣ್ಣನನ್ನು ಅಚ್ಯುತ್ ಕುಮಾರ್ ವರ್ಣನೆ ಮಾಡುವ ರೀತಿ ಅದ್ಭುತವಾಗಿದೆ. ಆದ್ರೆ ಶಿವಣ್ಣ ವಿಡಿಯೋದಲ್ಲಿ ಕಾಣಿಸಿಕೊಳ್ಳಲ್ಲ. ಐ ಆಮ್ ಕಮಿಂಗ್ ಎನ್ನುವ ಕರುನಾಡ ಕಿಂಗ್ ನ ಫೋಟೋ ಬಿಟ್ಟು ಚಿತ್ರತಂಡ ಥ್ರಿಲ್ ಹೆಚ್ಚಿಸಿದೆ. ಚಂಡಮಾರುತ ಮೊದಲ ಮೌನ ಎಂಬ ಅಡಿಬರಹದೊಂದಿಗೆ ಶಿವಣ್ಣನ 131ನೇ ಚಿತ್ರದ ವಿಡಿಯೋ ಝಲಕ್ ಬಿಡುಗಡೆ ಮಾಡಲಾಗಿದ್ದು, ಅಚ್ಯುತ್ ಕುಮಾರ್, ರವೀಂದ್ರ ವಿಜಯ್ ವಿಡಿಯೋದಲ್ಲಿ ಕಾಣಿಸಿಕೊಂಡಿದ್ದಾರೆ.

ತಮಿಳಿನಲ್ಲಿ ವಿಕ್ರಂ ಪ್ರಭು ಅಭಿನಯದ ಪಾಯುಮ್ ಒಲಿ ನೀ ಎನಕ್ಕು ಚಿತ್ರವನ್ನು ನಿರ್ದೇಶಿಸಿದ್ದ ಕಾರ್ತಿಕ್ ಅದ್ವೈತ್, ಈ ಚಿತ್ರದ ಮೂಲಕ ಚಂದನವನಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ಅಂದಹಾಗೇ ಇವರಿಗೆ ಇದು ನಿರ್ದೇಶಕನಾಗಿ ಎರಡನೇ ಸಿನಿಮಾ. ಇದೊಂದು ಆ್ಯಕ್ಷನ್ ಥ್ರಿಲ್ಲರ್ ಸಿನಿಮಾವಾಗಿದ್ದು, ಶಿವಣ್ಣ ಡಿಫ್ರೆಂಟ್ ಲುಕ್​​ನಲ್ಲಿ, ವಿಭಿನ್ನ ಪಾತ್ರದಲ್ಲಿ ಕಾಣಸಿಕೊಳ್ಳಲಿದ್ದಾರೆ. ಆಗಸ್ಟ್ ತಿಂಗಳಲ್ಲಿ ಮುಹೂರ್ತ ನಡೆಯಲಿದೆ. ಇತರ ಕಲಾವಿದರ ಆಯ್ಕೆ ಪ್ರಕ್ರಿಯೆ ಮುಗಿದಿದ್ದು, ಚಿತ್ರೀಕರಣಕ್ಕೆ ತೆರಳುವುದನ್ನು ಎದುರು ನೋಡುತ್ತಿದೆ ಚಿತ್ರತಂಡ. ಸ್ಯಾಮ್ ಸಿ.ಎಸ್ ಸಂಗೀತ ಒದಗಿಸಲಿದ್ದಾರೆ. ಎ.ಜೆ ಶೆಟ್ಟಿ ಛಾಯಾಗ್ರಹಣ ನಿರ್ವಹಿಸಲಿದ್ದಾರೆ. ದೀಪು ಎಸ್ ಕುಮಾರ್ ಅವರ ಸಂಕಲನ ಹಾಗೂ ರವಿ ಸಂತೆಹಕ್ಲು ಅವರ ಕಲಾ ನಿರ್ದೇಶನ ಈ ಚಿತ್ರಕ್ಕಿರಲಿದೆ. ಭುವನೇಶ್ವರಿ ಪ್ರೊಡಕ್ಷನ್ ನಡಿ ಎಸ್ ಎನ್ ರೆಡ್ಡಿ ಹಾಗೂ ಸುಧೀರ್ ಪಿ ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ.

ಇದನ್ನೂ ಓದಿ : ಹಾಸನದಲ್ಲಿ ಕಾಡನೆ ಡೆಡ್ಲಿ ಅಟ್ಯಾಕ್ – ಕೂದಲೆಳೆ ಅಂತರದಲ್ಲಿ ಪಾರಾದ ವ್ಯಕ್ತಿ..!

Leave a Comment

DG Ad

RELATED LATEST NEWS

Top Headlines

ತೆರೆಮೇಲೆ ಅಬ್ಬರಿಸಿದ “ಬಘೀರ” – ಸೂಪರ್ ಹೀರೋ ಆದ ರೋರಿಂಗ್ ಸ್ಟಾರ್ ಶ್ರೀಮುರಳಿ..!

ರೋರಿಂಗ್ ಸ್ಟಾರ್ ಶ್ರೀಮುರಳಿ ನಟನೆಯ ಬಘೀರ ಸಿನಿಮಾ ಇಂದು ರಾಜ್ಯಾದ್ಯಂತ ಬಿಡುಗಡೆ ಆಗಿದೆ. ಹೊಂಬಾಳೆ ಫಿಲಂಸ್‌ ಬ್ಯಾನರ್‌ನಲ್ಲಿ ಮೂಡಿಬಂದ ಈ ಚಿತ್ರಕ್ಕೆ ಡಾ. ಸೂರಿ ನಿರ್ದೇಶನ ಮಾಡಿದ್ದಾರೆ.

Live Cricket

Add Your Heading Text Here