ಕೋಮಲ್ ಕುಮಾರ್ ನಾಯಕರಾಗಿ ನಟಿಸಿರುವ “ಯಲಾಕುನ್ನಿ” ಚಿತ್ರದ ಫಸ್ಟ್ ಲುಕ್ ಗಣೇಶನ ಹಬ್ಬದ ಶುಭದಿನದಂದು ಬಿಡುಗಡೆಯಾಗಿದೆ. ಕೋಮಲ್ ಅವರು ಖ್ಯಾತ ನಟ ವಜ್ರಮುನಿ ಅವರ ಗೆಟಪ್ನಲ್ಲಿ ಕಾಣಿಸಿಕೊಂಡಿದ್ದು, ಅವರ ಈ ಲುಕ್ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ.
ಈ ಚಿತ್ರವನ್ನು ಸೌಂದರ್ಯ ಸಿನಿ ಕಂಬೈನ್ಸ್ ಹಾಗೂ ನರಸಿಂಹ ಸಿನಿಮಾಸ್ ಲಾಂಛನದಲ್ಲಿ ಅನುಸೂಯ ಕೋಮಲ್ ಕುಮಾರ್, ಸಹನ ಮೂರ್ತಿರವರು ನಿರ್ಮಿಸಿದ್ದಾರೆ. ತಮ್ಮ ಅಮೋಘ ಅಭಿನಯದ ಮೂಲಕ ಜನರ ಮನ ಗೆದ್ದಿರುವ ಕೋಮಲ್ ಕುಮಾರ್ ನಾಯಕರಾಗಿ ನಟಿಸಿರುವ ಈ ಚಿತ್ರವನ್ನು ಹೊಸ ಪ್ರತಿಭೆ N R ಪ್ರದೀಪ್ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದಾರೆ.
ಈಗಷ್ಟೇ ಚಿತ್ರೀಕರಣ ಮುಗಿಸಿರುವ ಈ ಚಿತ್ರ ಸದ್ಯದಲ್ಲೇ ತೆರೆಗೆ ಬರಲಿದೆ. “ಯಲಾಕುನ್ನಿ” ಚಿತ್ರಕ್ಕೆ ‘ಮೇರಾ ನಾಮ್ ವಜ್ರಮುನಿ’ ಎಂಬ ಅಡಿಬರಹವಿದೆ. ಬೆಂಗಳೂರು, ಮೈಸೂರು ಹಾಗೂ ಶ್ರೀರಂಗಪಟ್ಟಣದಲ್ಲಿ ಚಿತ್ರೀಕರಣ ನಡೆದಿದೆ. ಶ್ರೀರಂಗಪಟ್ಟಣದಲ್ಲಿ ಚಿತ್ರಕ್ಕಾಗಿ ವಿಶೇಷ ಸೆಟ್ ಸಹ ಹಾಕಲಾಗಿತ್ತು.
ಸಂಪೂರ್ಣ ಹಳ್ಳಿ ಸೊಗಡಿನಲ್ಲಿ ಮೂಡಿಬಂದಿರುವ ‘ಯಲಾಕುನ್ನಿ’ ಸಿನಿಮಾಕ್ಕೆ ರಥಾವರ ಖ್ಯಾತಿಯ ಧರ್ಮ ವಿಶ್ ಸಂಗೀತ ನಿರ್ದೇಶನ, ದೀಪು ಎಸ್ ಕುಮಾರ್ ಸಂಕಲನ ಹಾಗೂ ಹಾಲೇಶ್ ಭದ್ರಾವತಿ ಅವರ ಛಾಯಾಗ್ರಹಣವಿದೆ. ಮುರಳಿ ಮಾಸ್ಟರ್ ನೃತ್ಯ ಸಂಯೋಜನೆ ಮಾಡಿರುವ ಈ ಚಿತ್ರಕ್ಕೆ ನರಸಿಂಹ ಮಾಸ್ಟರ್ ಸಾಹಸ ಸಂಯೋಜನೆ ಮಾಡಿದ್ದಾರೆ.
ಇದನ್ನೂ ಓದಿ : ದೀಪಿಕಾ ಪಡುಕೋಣೆ-ರಣವೀರ್ ಸಿಂಗ್ ಮಗಳನ್ನು ನೋಡಲು ಆಸ್ಪತ್ರೆಗೆ ಬಂದ ಮುಕೇಶ್ ಅಂಬಾನಿ..!