ಮೈಸೂರು : ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್ಐಆರ್ ದಾಖಲಿಸಿ ಮೂರು ತಿಂಗಳೊಳಗೆ ವರದಿ ಸಲ್ಲಿಸುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಲೋಕಾಯುಕ್ತಕ್ಕೆ ಸೂಚಿಸಿದೆ. ಹೀಗಾಗಿ ಅತ್ಯಂತ ಕಟ್ಟು ನಿಟ್ಟಾಗಿ ತನಿಖೆ ಮಾಡಬೇಕಾದ ಅನಿವಾರ್ಯತೆ ಲೋಕಾಯುಕ್ತ ತನಿಖಾಧಿಕಾರಿಗಳ ಮುಂದಿದ್ದು, ಈ ನಿಟ್ಟಿನಲ್ಲಿ ಇಂದು ವಿಚಾರಣೆಗೆ ಹಾಜರಾಗುವಂತೆ ದೂರುದಾರ ಸ್ನೇಹಮಹಿ ಕೃಷ್ಣಗೆ ಲೋಕಾಯುಕ್ತ ನೋಟಿಸ್ ಜಾರಿ ಮಾಡಿದೆ.
ಲೋಕಾಯುಕ್ತದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್ಐಆರ್ ದಾಖಲಾಗುತ್ತಿದ್ದಂತೆ ವಿಚಾರಣೆಗಿಳಿದ ಲೋಕಾಯುಕ್ತ ಅಧಿಕಾರಿಗಳು ಮೊದಲ ನೋಟಿಸ್ ಜಾರಿ ಮಾಡಿದ್ದು, ಇಂದು ಕಚೇರಿಗೆ ಹಾಜರಾಗುವಂತೆ ದೂರುದಾರ ಸ್ನೇಹಮಹಿ ಕೃಷ್ಣಗೆ ನೋಟಿಸ್ ನೀಡಲಾಗಿದೆ. ಹಾಗಾಗಿ ಇಂದು ದಾಖಲೆ ಸಮೇತ ಲೋಕಾ ಕಚೇರಿಗೆ ಸ್ನೇಹಮಯಿ ಕೃಷ್ಣ ವಿಚಾರಣೆಗೆ ಹಾಜರಾಗಲಿದ್ದಾರೆ.
ಇನ್ನು ಮುಡಾ ಹಗರಣದ ತನಿಖೆ ಆರಂಭ ಆಗುವ ಮುನ್ನವೇ ದೂರುದಾರ ಸ್ನೇಹಮಹಿ ಕೃಷ್ಣ, EDಗೂ ಮೇಲ್ ಮೂಲಕ ದೂರು ಸಲ್ಲಿಸಿದ್ದಾರೆ. ಮುಡಾ ಪ್ರಕರಣದಲ್ಲಿ ಖುದ್ದು ಸಿಎಂ 62 ಕೋಟಿ ಹಣದ ಬಗ್ಗೆ ಹೇಳಿದ್ದಾರೆ. ಜೊತೆಗೆ ಮುಡಾದಲ್ಲಿ 5 ಸಾವಿರ ಕೋಟಿಗೂ ಹೆಚ್ಚು ಅವ್ಯವಹಾರ ನಡೆದಿದೆ. ಹೀಗಾಗಿ ED ತನಿಖೆಯ ಅವಶ್ಯಕತೆ ಇದೆ ಎಂದು ಮೇಲ್ ಮೂಲಕ ಸ್ನೇಹಮಹಿ ಕೃಷ್ಣ ಬೆಂಗಳೂರಿನ ಕಚೇರಿಗೆ ದೂರು ಸಲ್ಲಿಸಿದ್ದರು.
ಇದನ್ನೂ ಓದಿ : ರೀಲ್ಸ್ಗಾಗಿ 10ಮೀ. ಎತ್ತರದ ಸೈನ್‌ಬೋರ್ಡ್ ಮೇಲೆ ಯುವಕನ ಸ್ಟಂಟ್..!