Download Our App

Follow us

Home » ರಾಷ್ಟ್ರೀಯ » ಇಂದಿನಿಂದ 18ನೇ ಲೋಕಸಭೆಯ ಮೊದಲ ಅಧಿವೇಶನ ಆರಂಭ..!

ಇಂದಿನಿಂದ 18ನೇ ಲೋಕಸಭೆಯ ಮೊದಲ ಅಧಿವೇಶನ ಆರಂಭ..!

ನವದೆಹಲಿ : 18ನೇ ಲೋಕಸಭೆಯ ಮೊದಲ ಅಧಿವೇಶನ ಇಂದಿನಿಂದ ಆರಂಭವಾಗಲಿದೆ. ಜುಲೈ 3ರವರೆಗೆ ನಡೆಯಲಿರುವ ಅಧಿವೇಶನದ ಮೊದಲ ಎರಡು ದಿನಗಳಲ್ಲಿ ನೂತನ ಸಂಸದರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ನೂತನ ಲೋಕಸಭಾ ಸ್ಪೀಕರ್ ಆಯ್ಕೆ ಬುಧವಾರ ನಡೆಯಲಿದ್ದು, ಗುರುವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಉಭಯ ಸದನಗಳ ಜಂಟಿ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

 

ಅಧಿವೇಶನದಲ್ಲಿ ಏನೇನು?

  • ಹಂಗಾಮಿ ಸ್ಪೀಕರ್‌ ಆಗಿ ಭರ್ತೃಹರಿ ಮಹ್ತಾಬ್‌ ನೇಮಕ
  • ಹಂಗಾಮಿ ಸ್ಪೀಕರ್​​ಗೆ ರಾಷ್ಟ್ರಪತಿ ಪ್ರಮಾಣ ಬೋಧನೆ
  • ಇಂದು 280 ಸಂಸದರಿಂದ ಪ್ರಮಾಣ ವಚನ ಸ್ವೀಕಾರ
  • ನಾಳೆ ಉಳಿದ 264 ಸಂಸದರು ಪ್ರತಿಜ್ಞಾವಿಧಿ ಸ್ವೀಕಾರ
  • ನೂತನ ಸಂಸದರಿಗೆ ಹಂಗಾಮಿ ಸ್ಪೀಕರ್​ ಪ್ರತಿಜ್ಞಾವಿಧಿ
  • ಜೂನ್‌ 26ಕ್ಕೆ ನೂತನ ಸ್ಪೀಕರ್‌ ಸ್ಥಾನದ ಚುನಾವಣೆ
  • ಜೂನ್ 26ರಂದೇ ನೂತನ ಸ್ಪೀಕರ್ ಅಧಿಕಾರ ಸ್ವೀಕಾರ
  • ಜೂ.27ಕ್ಕೆ ಜಂಟಿ ಸದನ ಉದ್ದೇಶಿಸಿ ರಾಷ್ಟ್ರಪತಿ ಭಾಷಣ

ಇನ್ನು ಹಂಗಾಮಿ ಸ್ಪೀಕರ್‌ ಆಯ್ಕೆ ವಿಚಾರದಲ್ಲಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಸಮರ ಮುಂದುವರಿಸಿದೆ. ಹಂಗಾಮಿ ಸ್ಪೀಕರ್‌ ಆಗಿ ಭತೃಹರಿ ನೇಮಕಕ್ಕೆ ವಿಪಕ್ಷಗಳು ಈಗಾಗಲೇ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿವೆ. ಕೇರಳ ಕಾಂಗ್ರೆಸ್ ಸದಸ್ಯ ಕೆ.ಸುರೇಶ್ 8 ಬಾರಿ ಸಂಸದರಾಗಿ ಆಯ್ಕೆ ಆಗಿದ್ದಾರೆ. ಲೋಕಸಭೆಯ ಹಿರಿಯ ಸದಸ್ಯರಾಗಿರುವ ಕಾರಣ ಸುರೇಶ್​​ಗೆ ಹಂಗಾಮಿ ಸ್ಪೀಕರ್‌ ಸ್ಥಾನ ನೀಡಬೇಕಿತ್ತು ಅಂತ ಆಗ್ರಹಿಸಿವೆ. ವಿಪಕ್ಷಗಳ ಆಗ್ರಹಕ್ಕೆ ಪ್ರತಿಕ್ರಿಯಿಸಿದ್ದ ಕೇಂದ್ರ ಸಚಿವ ಕಿರಣ್ ರಿಜಿಜು ಭತೃಹರಿ ಸತತ 7 ಬಾರಿ ಸಂಸದರಾಗಿ ಆಯ್ಕೆಯಾಗಿದ್ದಾರೆ. ಆದರೆ ಸುರೇಶ್‌ 1998 ಮತ್ತು 2004ರ ಚುನಾವಣೆಯಲ್ಲಿ ಸೋತಿದ್ದಾರೆ. ಈಗ ಅವರು ಸತತ 4 ಬಾರಿ ಜಯಗಳಿಸಿದ್ದಾರೆ ಎಂದಿದ್ದರು. ಆದ್ರೆ ಸುರೇಶ್ ಕೇರಳದ ಮಾವೇಲಿಕರ ಲೋಕಸಭಾ ಕ್ಷೇತ್ರದಿಂದ 1989, 1991, 1996, 1999, 2009, 2014, 2019, 2024ರ ಚುನಾವಣೆಯಲ್ಲಿ ಗೆದ್ದಿದ್ದಾರೆಂದು ದಾಖಲೆಗಳು ಹೇಳುತ್ತಿವೆ.

ಇದನ್ನೂ ಓದಿ : ಅಸಹಜ ಲೈಂಗಿಕ ದೌರ್ಜನ್ಯ ಕೇಸ್​ : ಜೆಡಿಎಸ್​ MLC ಸೂರಜ್ ರೇವಣ್ಣಗೆ 14 ದಿನ ನ್ಯಾಯಾಂಗ ಬಂಧನ..!

 

 

 

 

Leave a Comment

DG Ad

RELATED LATEST NEWS

Top Headlines

ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ ‘ಲೋಕಾ’ – ಬೆಂಗಳೂರು, ಗದಗ ಸೇರಿ ರಾಜ್ಯದ ಹಲವೆಡೆ ದಾಳಿ​!

ಬೆಂಗಳೂರು : ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನಲೆಯಲ್ಲಿ ಇಂದು ಬೆಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ರಾಜ್ಯಾದ್ಯಂತ ಹಲವು ಕಡೆ ಭ್ರಷ್ಟ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ್ದಾರೆ. ಬೆಂಗಳೂರು ಸೇರಿ

Live Cricket

Add Your Heading Text Here