Download Our App

Follow us

Home » ಸಿನಿಮಾ » ಮೇ.25 ರಂದು ಗೋಲ್ಡನ್ ಸ್ಟಾರ್ ಗಣೇಶ್ ನಟನೆಯ “ಕೃಷ್ಣಂ ಪ್ರಣಯ ಸಖಿ” ಚಿತ್ರದ ಫಸ್ಟ್ ಸಾಂಗ್ ರಿಲೀಸ್..!

ಮೇ.25 ರಂದು ಗೋಲ್ಡನ್ ಸ್ಟಾರ್ ಗಣೇಶ್ ನಟನೆಯ “ಕೃಷ್ಣಂ ಪ್ರಣಯ ಸಖಿ” ಚಿತ್ರದ ಫಸ್ಟ್ ಸಾಂಗ್ ರಿಲೀಸ್..!

ಖ್ಯಾತ ನಿರ್ದೇಶಕ ಶ್ರೀನಿವಾಸರಾಜು ಅವರ ನಿರ್ದೇಶನದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿ ನಟಿಸಿರುವ “ಕೃಷ್ಣಂ ಪ್ರಣಯ ಸಖಿ” ಚಿತ್ರ ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದೆ. ಈ ಚಿತ್ರದ ಫಸ್ಟ್ ಲುಕ್ ಹಾಗೂ ಪೋಸ್ಟರ್ ಗಳು ಎಲ್ಲರ ಮೆಚ್ಚುಗೆ ಗಳಿಸಿದೆ. ಬಹು ನಿರೀಕ್ಷಿತ ಈ ಚಿತ್ರದ ಮೊದಲ ಹಾಡು ಮೇ 25 ರಂದು ಮೈಸೂರಿನಲ್ಲಿ ಬಿಡುಗಡೆಯಾಗಲಿದೆ.

ಅರ್ಜುನ್ ಜನ್ಯ ಅವರು ಸಂಗೀತ ನೀಡಿರುವ ಆರು ಸುಮಧುರ ಹಾಡುಗಳು “ಕೃಷ್ಣಂ ಪ್ರಣಯ ಸಖಿ” ಚಿತ್ರದಲ್ಲಿದೆ. ಆ ಪೈಕಿ ನಿಶಾನ್ ರಾಯ್ ಅವರು ಬರೆದು ಹೆಸರಾಂತ ಗಾಯಕ ಚಂದನ್ ಶೆಟ್ಟಿ ಹಾಡಿರುವ ಈ ಚಿತ್ರದ ಮೊದಲ ಹಾಡು ಸಾಂಸ್ಕೃತಿಕ ನಗರಿ ಮೈಸೂರಿನ “ಮಾಲ್ ಆಫ್ ಮೈಸೂರಿನಲ್ಲಿ” ಅದ್ದೂರಿಯಾಗಿ ಬಿಡುಗಡೆಯಾಗಲಿದೆ. ಮೈಸೂರಿನಲ್ಲಿ ಮೊದಲ ಹಾಡು ಬಿಡುಗಡೆ ಮಾಡುವುದರ ಮೂಲಕ ಚಿತ್ರದ ಪ್ರಚಾರ ಕಾರ್ಯಕ್ಕೆ ಚಾಲನೆ ಸಿಗಲಿದೆ.

ಕೌಟುಂಬಿಕ ಕಥಾಹಂದರ ಹೊಂದಿರುವ ಈ ಚಿತ್ರವನ್ನು ತ್ರಿಶೂಲ್ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ಪ್ರಶಾಂತ್ ಜಿ ರುದ್ರಪ್ಪ ಅವರು ನಿರ್ಮಿಸಿದ್ದಾರೆ. ಈಗಾಗಲೇ ಚಿತ್ರೀಕರಣ ಮುಕ್ತಾಯವಾಗಿದ್ದು, ಬೆಂಗಳೂರು, ವಿಯೆಟ್ನಾಂ ಮುಂತಾದ ಕಡೆ ಚಿತ್ರೀಕರಣ ನಡೆದಿದೆ.ಸದ್ಯದಲ್ಲೇ ಚಿತ್ರವನ್ನು ತೆರೆಗೆ ತರುವ ಸಿದ್ದತೆ ನಡೆಯುತ್ತಿದೆ‌.

ಬಹು ನಿರೀಕ್ಷಿತ “ಕೃಷ್ಣಂ ಪ್ರಣಯ ಸಖಿ” ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ 41 ನೇ ಚಿತ್ರ. ಗಣೇಶ್ ಅವರಿಗೆ ನಾಯಕಿಯಾಗಿ ಮಾಳವಿಕ ನಾಯರ್ ನಟಿಸಿದ್ದಾರೆ. ಶರಣ್ಯ ಶೆಟ್ಟಿ, ಶ್ರೀನಿವಾಸಮೂರ್ತಿ, ಸಾಧುಕೋಕಿಲ, ರಂಗಾಯಣ ರಘು, ಶಶಿಕುಮಾರ್, ಶ್ರುತಿ, ಭಾವನ, ಅಶೋಕ್, ರಾಮಕೃಷ್ಣ, ಶಿವಧ್ವಜ್, ರಘುರಾಮ್, ಮಾನಸಿ ಸುಧೀರ್, ಅಂಬುಜ, ಗಿರಿ ಶಿವಣ್ಣ ಮುಂತಾದವರು ತಾರಾಬಳಗದಲ್ಲಿದ್ದಾರೆ.

ಇದನ್ನೂ ಓದಿ : ಹುಬ್ಬಳ್ಳಿ ಅಂಜಲಿ ಹಂತಕನಿಗೆ ಜಡ್ಜ್​ ಕ್ಲಾಸ್ ​- ಜಡ್ಜ್​ ಮುಂದೆ ಹಾಜರಾಗುವಾಗ ಕಣ್ಣೀರು ಹಾಕಿದ್ದ ವಿಶ್ವ..!

Leave a Comment

DG Ad

RELATED LATEST NEWS

Top Headlines

ವಿದ್ಯುತ್ ಸಂಪರ್ಕ ನೀಡಲು 16.5 ಲಕ್ಷ ರೂ. ಲಂಚಕ್ಕೆ ಬೇಡಿಕೆ – ರೆಡ್​ ಹ್ಯಾಂಡ್​ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ AEE-JE ಅಧಿಕಾರಿಗಳು..!

ಬೆಂಗಳೂರು : ಲಂಚ ಸ್ಚೀಕರಿಸುವಾಗ AEE, JE ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಅವಲಹಳ್ಳಿ ಬೆಸ್ಕಾಂ AEE ರಮೇಶ್ ಬಾಬು, JE ನಾಗೇಶ್

Live Cricket

Add Your Heading Text Here