Download Our App

Follow us

Home » ಸಿನಿಮಾ » “ಡಬಲ್ ಇಸ್ಮಾರ್ಟ್” ಸಿನಿಮಾದ ಫಸ್ಟ್​ ಸಾಂಗ್​ ರಿಲೀಸ್ – ಭರ್ಜರಿ ಸ್ಟೆಪ್ ಹಾಕಿದ ರಾಮ್ ಪೋತಿನೇನಿ..!

“ಡಬಲ್ ಇಸ್ಮಾರ್ಟ್” ಸಿನಿಮಾದ ಫಸ್ಟ್​ ಸಾಂಗ್​ ರಿಲೀಸ್ – ಭರ್ಜರಿ ಸ್ಟೆಪ್ ಹಾಕಿದ ರಾಮ್ ಪೋತಿನೇನಿ..!

ಉಸ್ತಾದ್ ರಾಮ್ ಪೋತಿನೇನಿ ಮತ್ತು ಡ್ಯಾಶಿಂಗ್ ಡೈರೆಕ್ಟರ್ ಪೂರಿ ಜಗನ್ನಾಥ್ ಜೋಡಿಯ ಬಹುನಿರೀಕ್ಷಿತ ಸಿನಿಮಾ ಡಬಲ್ ಇಸ್ಮಾರ್ಟ್. ಪುರಿ ಕನೆಕ್ಟ್ಸ್ ಬ್ಯಾನರ್‌ನಲ್ಲಿ ಪೂರಿ ಜಗನ್ನಾಥ್ ಮತ್ತು ಚಾರ್ಮಿ ಕೌರ್ ನಿರ್ಮಿಸುತ್ತಿರುವ ಈ ಚಿತ್ರ ಆಗಸ್ಟ್ 15 ರಂದು ವಿಶ್ವದಾದ್ಯಂತ ಬಿಡುಗಡೆಯಾಗಲಿದೆ. ಸದ್ಯ ಡಬಲ್ ಇಸ್ಮಾರ್ಟ್ ಶೂಟಿಂಗ್ ಭರದಿಂದ ಸಾಗುತ್ತಿದ್ದು, ಇತ್ತ ಪ್ರಚಾರ ಕೆಲಸ ಕೂಡ ಆರಂಭವಾಗಿದೆ.

ಇನ್ನು ಡಬಲ್ ಇಸ್ಮಾರ್ಟ್ ಸಿನಿಮಾದ ಮೊದಲ ಹಾಡು ಬಿಡುಗಡೆಯಾಗಿದ್ದು, ರಾಮ್ ಪೋತಿನೇನಿ ಇದ್ರಲ್ಲಿ ಭರ್ಜರಿಯಾಗಿ ಸ್ಟೆಪ್ ಹಾಕಿದ್ದಾರೆ. ಸ್ಟೆಪ್ಪಾ ಮಾರ್‌ ಎಂಬ ಹಾಡಿಗೆ ಭಾಸ್ಕರ ಭಟ್ಲರ ಸಾಹಿತ್ಯ ಬರೆದಿದ್ದು, ಅನುರಾಗ್ ಕುಲಕರ್ಣಿ ಹಾಗೂ ಸಾಹಿತಿ ಚಂಗಂತಿ ಧ್ವನಿಯಾಗಿದ್ದಾರೆ.‌ ಮಣಿ ಶರ್ಮಾ ಟ್ಯೂನ್ ಹಾಕಿದ್ದಾರೆ. ಅದ್ಧೂರಿ ಸೆಟ್ ನಲ್ಲಿ ಜಾನಿ ಮಾಸ್ಟರ್ ಕೊರಿಯೋಗ್ರಫಿಗೆ ರಾಮ್ ಪೋತಿನೇನಿ ಜಬರ್ದಸ್ತ್ ಆಗಿ ಕುಣಿದು ಕುಪ್ಪಳಿಸಿದ್ದಾರೆ.

ಸೌತ್​ ಸಿನಿಮಾಗಳಲ್ಲಿ ಖಳನಾಗಿ ಅಬ್ಬರಿಸುತ್ತಿರುವ ಸಂಜಯ್ ದತ್ ಅವರು ‘ಡಬಲ್​ ಇಸ್ಮಾರ್ಟ್​’ ಚಿತ್ರದಲ್ಲೂ ವಿಲನ್​ ಆಗಿ ಅಭಿನಯಿಸಿದ್ದಾರೆ. ನಾಯಕಿಯಾಗಿ ಕಾವ್ಯಾ ಥಾಪರ್ ನಟಿಸಿದ್ದಾರೆ. ತೆಲುಗು ಮಾತ್ರವಲ್ಲದೇ ಕನ್ನಡ, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಗಳಲ್ಲಿ ‘ಡಬಲ್​ ಇಸ್ಮಾರ್ಟ್​’ ಸಿನಿಮಾ ಬಿಡುಗಡೆ ಆಗಲಿದೆ.

ಮಣಿ ಶರ್ಮಾ ಅವರು ಈ ಸಿನಿಮಾಗೆ ಸಂಗೀತ ನಿರ್ದೇಶನ ಮಾಡಿದ್ದಾರೆ. ಸ್ಯಾಮ್ ಕೆ ನಾಯ್ಡು ಮತ್ತು ಗಿಯಾನಿ ಗಿಯಾನ್ನೆಲಿ ಛಾಯಾಗ್ರಾಹಕರಾಗಿ ದುಡಿದಿದ್ದಾರೆ. 2019 ರಲ್ಲಿ ಇಸ್ಮಾರ್ಟ್ ಶಂಕರ್ ಸಿನಿಮಾ ರಿಲೀಸ್ ಆಗಿತ್ತು. ಇದರಲ್ಲಿ ಕನ್ನಡತಿ ನಭಾ ನಟೇಶ್ ಅಭಿನಯಿಸಿದ್ದರು. ಆಗ ಈ ಸಿನಿಮಾ ಕರ್ಮಷಿಯಲಿ ಸಕ್ಸಸ್ ಆಗಿತ್ತು. ಆದರೆ ಈ ಸಿನಿಮಾ ಬಂದು 5 ವರ್ಷದ ಬಳಿಕ ಪಾರ್ಟ್-2 ಡಬಲ್ ಇಸ್ಮಾರ್ಟ್ ಸಿನಿಮಾ ಬರ್ತಿದೆ. ಟಾಲಿವುಡ್‌ನಲ್ಲಿ ಈಗಲೇ ನಿರೀಕ್ಷೆಯನ್ನು ಕೂಡ ಹುಟ್ಟುಹಾಕಿದೆ ಅಂತ ಹೇಳಬಹುದು

https://www.youtube.com/watch?v=WKgR7LlFyq8

ಇದನ್ನೂ ಓದಿ : ‘ಪೆನ್​ಡ್ರೈವ್’ ಸಿನಿಮಾದಲ್ಲಿ ನಟಿಸಲಿದ್ದಾರೆ ತನಿಷಾ ಕುಪ್ಪಂಡ : ಈ ಚಿತ್ರದ ಕಥೆ ಏನು?

 

 

Leave a Comment

DG Ad

RELATED LATEST NEWS

Top Headlines

MLA ಮುನಿರತ್ನ ವಿರುದ್ಧ ರೇಪ್ ಆರೋಪದ ಬೆನ್ನಲ್ಲೇ ಮಾಜಿ ಕಾರ್ಪೊರೇಟರ್ ಪತಿಯ ಹನಿಟ್ರ್ಯಾಪ್ ವಿಡಿಯೋ ವೈರಲ್..!

ಬೆಂಗಳೂರು : ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ಬಿಜೆಪಿ ಶಾಸಕ ಮುನಿರತ್ನ ಸೇರಿ ಏಳು ಮಂದಿಯ ವಿರುದ್ಧ ರಾಮನಗರ ಜಿಲ್ಲಾ ವ್ಯಾಪ್ತಿಯ ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ

Live Cricket

Add Your Heading Text Here