Download Our App

Follow us

Home » ಜಿಲ್ಲೆ » ಮಾಜಿ ಸಿಎಂ ಸೇರಿ 22ಕ್ಕೂ ಹೆಚ್ಚು ಪ್ರಯಾಣಿಕರ ಲಗೇಜ್ ಬೆಂಗಳೂರಿನಲ್ಲೇ ಬಿಟ್ಟು ಬೆಳಗಾವಿಗೆ ಬಂದ ಇಂಡಿಗೋ ವಿಮಾನ..!

ಮಾಜಿ ಸಿಎಂ ಸೇರಿ 22ಕ್ಕೂ ಹೆಚ್ಚು ಪ್ರಯಾಣಿಕರ ಲಗೇಜ್ ಬೆಂಗಳೂರಿನಲ್ಲೇ ಬಿಟ್ಟು ಬೆಳಗಾವಿಗೆ ಬಂದ ಇಂಡಿಗೋ ವಿಮಾನ..!

ಬೆಳಗಾವಿ : ಬೆಂಗಳೂರಿನಿಂದ ಬೆಳಗಾವಿ ವಿಮಾನ ನಿಲ್ದಾಣಕ್ಕೆ ಭಾನುವಾರ ಸಂಜೆ ಬಂದಿಳಿದ ಇಂಡಿಗೋ ವಿಮಾನ ಸಿಬ್ಬಂದಿ ಸುಮಾರು 22ಕ್ಕೂ ಹೆಚ್ಚು ಪ್ರಯಾಣಿಕರ ಲಗೇಜ್ ಅನ್ನು ಬೆಂಗಳೂರಿನಲ್ಲೇ ಬಿಟ್ಟು ಬಂದಿರುವ ಘಟನೆ ನಡೆದಿದೆ.

ಇದರಿಂದಾಗಿ ಬೆಳಗಾವಿ ಸೇರಿದಂತೆ ವಿವಿಧ ಪ್ರದೇಶಗಳ ಪ್ರಯಾಣಿಕರು ಪರದಾಡುವಂತಾಗಿತ್ತು. ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇದೇ ವಿಮಾನದಲ್ಲಿ ಆಗಮಿಸಿದ್ದು, ಅವರ ಬ್ಯಾಗ್ ಕೂಡ ಮಿಸ್ ಆಗಿದೆ. ಬೆಳಗಾವಿಗೆ ಬಂದು ಇಳಿಯುವವರೆಗೆ ವಿಮಾನ ಸಿಬ್ಬಂದಿ ಬ್ಯಾಗ್ ಬಾರದಿರುವ ಕುರಿತು ಯಾರಿಗೂ ಮಾಹಿತಿ ನೀಡಿರಲಿಲ್ಲ ಎಂದು ತಿಳಿದುಬಂದಿದೆ.

ಭಾನುವಾರ ಸಂಜೆ 5.55ಕ್ಕೆ ಬೆಂಗಳೂರಿನಿಂದ ಬೆಳಗಾವಿಗೆ ವಿಮಾನ ಹೊರಟಿದೆ. ವಿಮಾನದಲ್ಲಿ ಮಲೇಷಿಯನ್ ವಿದ್ಯಾರ್ಥಿಗಳು ಸೇರಿದಂತೆ ಭಾರಿ ಸಂಖ್ಯೆಯಲ್ಲಿ ಪ್ರಯಾಣಿಕರಿದ್ದರು. ವಿಮಾನ ರಾತ್ರಿ 7.30ಕ್ಕೆ ಬೆಳಗಾವಿಗೆ ಬಂದಿಳಿಯುತ್ತಿದ್ದಂತೆ ಪ್ರಯಾಣಿಕರಿಗೆ ಬಿಗ್ ಶಾಕ್ ಕಾದಿತ್ತು. ಸುಮಾರು 22ಕ್ಕೂ ಹೆಚ್ಚು ಪ್ರಯಾಣಿಕರ ಬ್ಯಾಗ್​ಗಳು ಬಂದಿರಲಿಲ್ಲ.

ಈ ಕುರಿತು ಸಿಬ್ಬಂದಿಗಳನ್ನು ಪ್ರಯಾಣಿಕರು ವಿಚಾರಿಸಿದರೆ, ಮಲೇಷಿಯನ್ ವಿದ್ಯಾರ್ಥಿಗಳ ಬ್ಯಾಗ್​ಗಳು ಬಹಳ ದೊಡ್ಡದಿದ್ದವು. ಹಾಗಾಗಿ ಬೇರೆ ಪ್ರಯಾಣಿಕರ ಬ್ಯಾಗ್​ಗಳನ್ನು ತರಲು ಸಾಧ್ಯವಾಗಿಲ್ಲ. ನಿಮ್ಮ ಬ್ಯಾಗ್​ಗಳನ್ನು ನಾಳೆ ತರಿಸಿಕೊಡುತ್ತೇವೆ ಎಂದು ಉತ್ತರಿಸಿದ್ದಾರೆ. ಇದರಿಂದ ಪ್ರಯಾಣಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿ, ಪ್ರತಿಭಟನೆಗೆ ಮುಂದಾಗಿರುವ ಸಂದರ್ಭ ಸೃಷ್ಟಿಯಾಯಿತು. ಬೇರೆ ಊರಿಗೆ ಹೋಗಬೇಕಿರುವ ಮತ್ತು ಬೇರೆ ಊರಿನಿಂದ ಬಂದಿರುವ ಪ್ರಯಾಣಿಕರು ಪರದಾಡುವಂತಾಗಿದೆ.

ಇದನ್ನೂ ಓದಿ : NDA ಮೈತ್ರಿಕೂಟಕ್ಕೆ ಬೆಂಬಲ ಘೋಷಿಸಿದ ಮೆಗಾ ಸ್ಟಾರ್ ಚಿರಂಜೀವಿ..!

Leave a Comment

DG Ad

RELATED LATEST NEWS

Top Headlines

ರೀಲ್ಸ್​​ಗಾಗಿ ಬಿಳಿ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು ಶವದಂತೆ ರಸ್ತೆಯಲ್ಲಿ ಮಲಗಿದ್ದ ವ್ಯಕ್ತಿ – ವಿಡಿಯೋ ವೈರಲ್..!

ಯುವಜನತೆ ರೀಲ್ಸ್​ ಹುಚ್ಚಿನಿಂದ ಅದೇನೋ ಸಾಹಸಗಳನ್ನು ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡಿರೋದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ಯುವಕ ರೀಲ್ಸ್​​ಗಾಗಿ ಬಿಳಿಯ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು

Live Cricket

Add Your Heading Text Here