Download Our App

Follow us

Home » ಜಿಲ್ಲೆ » ಮೈಸೂರಿನಲ್ಲಿ ಕಾಡ್ಗಿಚ್ಚಿನಿಂದ 50ಕ್ಕೂ ಹೆಚ್ಚು ಎಕರೆ ಅರಣ್ಯ ಪ್ರದೇಶ ಸುಟ್ಟು ಭಸ್ಮ..!

ಮೈಸೂರಿನಲ್ಲಿ ಕಾಡ್ಗಿಚ್ಚಿನಿಂದ 50ಕ್ಕೂ ಹೆಚ್ಚು ಎಕರೆ ಅರಣ್ಯ ಪ್ರದೇಶ ಸುಟ್ಟು ಭಸ್ಮ..!

ಮೈಸೂರು : ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಗುಳ್ಳೇದ ಹಳ್ಳ ಮೀಸಲು ಅರಣ್ಯ ವಲಯದಲ್ಲಿ ಆಕಸ್ಮಿಕ ಬೆಂಕಿ ತಗುಲಿದ್ದು, 50ಕ್ಕೂ ಹೆಚ್ಚು ಎಕರೆ ಅರಣ್ಯ ಪ್ರದೇಶ ಸುಟ್ಟು ಭಸ್ಮವಾದ ಘಟನೆ ನಡೆದಿದೆ. ಬೆಂಕಿ ನಂದಿಸಲು ಅಗ್ನಿಶಾಮಕದಳದ ಸಿಬ್ಬಂದಿ ಹರಸಾಹಸ ಪಡುವಂತಾಗಿದೆ. ಬೆಂಕಿಯ ಅಬ್ಬರಕ್ಕೆ ಕಾಡು ಪ್ರಾಣಿಗಳು ದಿಕ್ಕಾಪಾಲಾಗಿ ಓಡಿವೆ. ಜಿಂಕೆ ಇನ್ನಿತರ ಪ್ರಾಣಿಗಳು ಗ್ರಾಮಗಳತ್ತ ನುಗ್ಗಿವೆ.

ಇನ್ನು 150 ಎಕರೆ ಪ್ರದೇಶದಲ್ಲಿ ಈ ಕುರುಚಲು ಅರಣ್ಯ ಪ್ರದೇಶ ಇದ್ದು, ಅಕ್ರಮವಾಗಿ ಮಣ್ಣು ಸಾಗಾಟ ಮಾಡುವ ಲ್ಯಾಂಡ್ ಮಾಫಿಯ ಕಿಡಿಗೇಡಿಗಳಿಂದ ಈ ಕೃತ್ಯ ನಡೆದಿದೆ ಎಂದು ಆರೋಪ ಕೇಳಿಬಂದಿದೆ. ಅರಣ್ಯ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸ್ಥಳೀಯರು ಕಿಡಿಕಾರಿದ್ದಾರೆ.

ಇದನ್ನೂ ಓದಿ : ಪಾಕ್ ಪರ ಘೋಷಣೆ ಕೇಸ್ – ಮಹಮ್ಮದ್ ಶಫಿ ನಾಶಿಪುಡಿಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿದ ಕೋರ್ಟ್..!

Leave a Comment

DG Ad

RELATED LATEST NEWS

Top Headlines

ರೀಲ್ಸ್​​ಗಾಗಿ ಬಿಳಿ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು ಶವದಂತೆ ರಸ್ತೆಯಲ್ಲಿ ಮಲಗಿದ್ದ ವ್ಯಕ್ತಿ – ವಿಡಿಯೋ ವೈರಲ್..!

ಯುವಜನತೆ ರೀಲ್ಸ್​ ಹುಚ್ಚಿನಿಂದ ಅದೇನೋ ಸಾಹಸಗಳನ್ನು ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡಿರೋದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ಯುವಕ ರೀಲ್ಸ್​​ಗಾಗಿ ಬಿಳಿಯ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು

Live Cricket

Add Your Heading Text Here