Download Our App

Follow us

Home » ಸಿನಿಮಾ » ಸದ್ಯದಲ್ಲೇ ಅಡ್ವೆಂಚರಸ್​​ ಕಾಮಿಡಿ ಕಥಾಹಂದರ ಒಳಗೊಂಡ ‘ಫಾರೆಸ್ಟ್’ ಚಿತ್ರದ ಟ್ರೈಲರ್ ರಿಲೀಸ್​​..!

ಸದ್ಯದಲ್ಲೇ ಅಡ್ವೆಂಚರಸ್​​ ಕಾಮಿಡಿ ಕಥಾಹಂದರ ಒಳಗೊಂಡ ‘ಫಾರೆಸ್ಟ್’ ಚಿತ್ರದ ಟ್ರೈಲರ್ ರಿಲೀಸ್​​..!

ಎನ್.ಎಂ.ಕೆ ಸಿನಿಮಾಸ್ ಲಾಂಛನದಲ್ಲಿ ಎನ್.ಎಂ ಕಾಂತರಾಜ್ ನಿರ್ಮಾಣದ, ಚಂದ್ರ ಮೋಹನ್ ನಿರ್ದೇಶನದ ‘ಫಾರೆಸ್ಟ್’ ಸಿನಿಮಾ ತನ್ನ ಟೈಟಲ್, ತಾರಾಗಣ ಹಾಗೂ ಕಾನ್ಸೆಪ್ಟ್ ಕಾರಣದಿಂದಲೇ ದೊಡ್ಡ ಮಟ್ಟದ ನಿರೀಕ್ಷೆ ಹುಟ್ಟುಹಾಕಿದೆ.

ಅಡ್ವೆಂಚರಸ್​​ ಕಾಮಿಡಿ ಕಥಾಹಂದರ ಒಳಗೊಂಡ “ಫಾರೆಸ್ಟ್ ಸಿನಿಮಾ ಬಗ್ಗೆ ತುಂಬಾ ಕಾಳಜಿ ಇಟ್ಟುಕೊಂಡಿರುವ ನಿರ್ಮಾಪಕರು ಕ್ವಾಲಿಟಿ ವಿಷಯದಲ್ಲಿ ಎಲ್ಲೂ ಕಾಂಪ್ರಮೈಸ್ ಆಗದೆ, ಬಜೆಟ್ ಬಗ್ಗೆ ಯೋಚಿಸದೆ ಧಾರಾಳವಾಗಿ ಖರ್ಚು ಮಾಡಿದ್ದಾರೆ. ಫಾರೆಸ್ಟ್​​ನಲ್ಲಿ ನಡೆಯೋ ಅಡ್ವೆಂಚರಸ್ ಕಾಮಿಡಿ ಕಾನ್ಸೆಪ್ಟ್ ಇರುವ ಈ ಚಿತ್ರದ ಬಹುತೇಕ ಕಥೆ ಕಾಡಿನಲ್ಲಿಯೇ ನಡೆಯೋದು ಚಿತ್ರದ ಮತ್ತೊಂದು ವಿಶೇಷ.

ಸದ್ಯದಲ್ಲೇ ಈ ಸಿನಿಮಾದ ಮೊದಲಪ್ರತಿ ಹೊರಬರಲಿದೆ. ಅತಿದೊಡ್ಡ ಕಳ್ಳತನವೊಂದರ ಸುತ್ತ ನಡೆಯುವ ಘಟನೆಗಳನ್ನು ಈ ಚಿತ್ರದಲ್ಲಿ ಹೇಳಲಾಗಿದೆ.  ಬೆಂಗಳೂರು, ಮಡಿಕೇರಿ, ಚಿಕ್ಕಮಗಳೂರು, ಸಂಪಾಜೆ ಫಾರೆಸ್ಟ್ ಹಾಗೂ ಮಲೆ ಮಾದೇಶ್ವರ ಬೆಟ್ಟದ ಸುತ್ತಮುತ್ತ ೮೦ ದಿನಗಳ ಕಾಲ ಈ ಚಿತ್ರದ ಚಿತ್ರೀಕರಣ ನಡೆದಿದೆ. ಕೆಲವು ಕಡೆ ಡಬಲ್ ಕಾಲ್‌ಶೀಟ್ ಆಗಿದ್ದರಿಂದ ಶೂಟಿಂಗ್ ದಿನಗಳು ಹೆಚ್ಚಾಗಿದೆ ಎಂದು ನಿರ್ಮಾಪಕ ಕಾಂತರಾಜು ತಿಳಿಸಿದ್ದಾರೆ.

ಈಗಾಗಲೇ ಚಿತ್ರದ ಟ್ರೈಲರ್ ಸಿದ್ದವಾಗಿದ್ದು, ಈ ತಿಂಗಳ ಅಂತ್ಯದಲ್ಲಿ ರಿಲೀಸ್ ಮಾಡವುದಾಗಿಯೂ ಹಾಗೂ ಸೆಪ್ಟೆಂಬರ್​ನಲ್ಲಿ ಚಿತ್ರವನ್ನು ಬಿಡುಗಡೆ ಮಾಡಬೇಕೆಂದು ನಿರ್ಮಾಪಕ ಕಾಂತರಾಜು ಅವರು ಯೋಜನೆ ಹಾಕಿಕೊಂಡಿದ್ದಾರೆ. ಅಲ್ಲದೆ ಚಿತ್ರದ ಮತ್ತೊಂದು ಹಾಡನ್ನು ಸದ್ಯದಲ್ಲೇ ರಿಲೀಸ್ ಮಾಡುವುದಾಗಿಯೂ ನಿರ್ಮಾಪಕರು ಹೇಳಿದ್ದಾರೆ, ಚೇತನ್ ಕುಮಾರ್ ಅವರ ರಚನೆಯ ಈ ಹಾಡಿಗೆ ಗಾಯಕ ಚಂದನ್ ಶೆಟ್ಟಿ ದನಿಯಾಗಿದ್ದಾರೆ.

ಇನ್ನು ಈ ಚಿತ್ರಕ್ಕೆ ಸತ್ಯಶೌರ್ಯ ಸಾಗರ್ ಹಾಗೂ ಚಂದ್ರಮೋಹನ್ ಕಥೆ, ಚಿತ್ರಕಥೆ ರಚಿಸಿದ್ದಾರೆ. ಅಲ್ಲದೆ ಸತ್ಯಶೌರ್ಯ ಸಾಗರ್ ಸಂಭಾಷಣೆ ರಚಿಸಿದ್ದಾರೆ. ಆನಂದ್‌ರಾಜಾ ವಿಕ್ರಮ್ ಅವರ ಹಿನ್ನೆಲೆ ಸಂಗೀತ, ರವಿಕುಮಾರ್ ಅವರ ಛಾಯಾಗ್ರಹಣ, ಅರ್ಜುನ್ ಕಿಟ್ಟು ಅವರ ಸಂಕಲನ, ಅಮರ್ ಅವರ ಕಲಾ ನಿರ್ದೇಶನ ಹಾಗೂ ಡಾ||ರವಿವರ್ಮ ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.
ಚಿಕ್ಕಣ್ಣ, ಅನೀಶ್ ತೇಜೇಶ್ವರ್, ಗುರುನಂದನ್, ಶರಣ್ಯ ಶೆಟ್ಟಿ, ಅರ್ಚನಾ ಕೊಟ್ಟಿಗೆ, ರಂಗಾಯಣ ರಘು, ಅವಿನಾಶ್, ಪ್ರಕಾಶ್ ತುಮ್ಮಿನಾಡು, ದೀಪಕ್ ರೈ ಪಾಣಂಜೆ, ಸೂರಜ್ ಪಾಪ್ಸ್, ಸುನೀಲ್‌ಕುಮಾರ್ ಮುಂತಾದ ಹಿರಿಯ ಹಾಗೂ ಕಿರಿಯ ಕಲಾವಿದರು ಫಾರೆಸ್ಟ್ ಚಿತ್ರದ ಪ್ರಮುಖ ತಾರಾಬಳಗದಲ್ಲಿದ್ದಾರೆ.

ಇದನ್ನೂ ಓದಿ : ಸುದ್ದಿಗೋಷ್ಠಿ ನಡೆಸುತ್ತಿರುವಾಗಲೇ ಕಾಂಗ್ರೆಸ್​ ಪಕ್ಷದ ಜನಪರ ಹೋರಾಟಗಾರ ರವಿಚಂದ್ರನ್​ ಹೃದಯಾಘಾತದಿಂದ ಸಾವು..!

Leave a Comment

DG Ad

RELATED LATEST NEWS

Top Headlines

4 ಅಂತಸ್ತಿನ ಕಟ್ಟಡ ಕುಸಿತ – ಕೂದಲೆಳೆ ಅಂತರದಲ್ಲಿ ಪಾರಾದ ತಾಯಿ, ಮಗು..!

ನಾಲ್ಕು ಅಂತಸ್ತಿನ ಕಟ್ಟಡ ಕುಸಿದು ತಾಯಿ ಮಗು ಪ್ರಾಣಾಪಾಯದಿಂದ ಪಾರಾಗಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಈ ಆಘಾತಕಾರಿ ಘಟನೆಯ ಸಂಪೂರ್ಣ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದ್ದು, ವೀಡಿಯೊದಲ್ಲಿ

Live Cricket

Add Your Heading Text Here