ದಾವಣಗೆರೆ : BJP ಒಡೆದ ಮನೆಯಾಗಿರೋದು ನಿಜ, ಬಿಜೆಪಿಯಲ್ಲಿ ಕೆಲವರು ಒಡಕು ಉಂಟು ಮಾಡ್ತಿದ್ದಾರೆ ಎಂದು ಯತ್ನಾಳ್ ವಿರುದ್ಧ ಮಾಜಿ ಸಿಎಂ ಯಡಿಯೂರಪ್ಪ ಪರೋಕ್ಷವಾಗಿ ವಾಗ್ದಾಳಿ ಮಾಡಿದ್ದಾರೆ.
ಈ ಬಗ್ಗೆ ದಾವಣಗೆರೆಯಲ್ಲಿ ಬಿ.ಎಸ್ ಯಡಿಯೂರಪ್ಪ ಮಾತನಾಡಿ, ಎಲ್ಲವನ್ನೂ ಕೇಂದ್ರದ ನಾಯಕರ ಗಮನಕ್ಕೆ ತಂದಿದ್ದೇವೆ. ಪಕ್ಷದ ಹಿತದೃಷ್ಟಿಯಿಂದ ಎಲ್ಲರನ್ನೂ ಒಟ್ಟಾಗಿ ಬರುವಂತೆ ಹೇಳಿದ್ದೇವೆ, ಪಕ್ಷವನ್ನು ಎಲ್ಲರೂ ಒಟ್ಟಾಗಿ ಕಟ್ಟುತ್ತೇವೆ. ಎಲ್ಲರೂ ಕೂತು ಭಿನ್ನಾಭಿಪ್ರಾಯ ಬಗೆಹರಿಸಿಕೊಳ್ಳೋಣ ಎಂದು ಯತ್ನಾಳ್ ಟೀಂಗೆ ಓಪನ್ ಆಫರ್ ಕೊಟ್ಟಿದ್ದಾರೆ.
ಈಗಾಗಲೇ ವಕ್ಫ್ ವಿರುದ್ಧ ಸಮರ ಸಾರಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಬೀದರ್‌ನಿಂದ ಚಾಮರಾಜನಗರದವರೆಗೆ ಒಂದು ತಿಂಗಳ ಕಾಲ ಜನಜಾಗೃತಿ ಅಭಿಯಾನ ಆರಂಭಿಸಿದ್ದು, ಡಿಸೆಂಬರ್ 25ರಂದು ಬೆಂಗಳೂರಿನಲ್ಲಿ ಸಮಾರೋಪ ಸಮಾರಂಭ ನಡೆಯಲಿದೆ.
ಇದನ್ನೂ ಓದಿ : ಬೀದರ್ : ರಸ್ತೆ ದಾಟುತ್ತಿದ್ದ ಬಾಲಕನಿಗೆ ಗುದ್ದಿದ ಕಾರು – ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ..!
Post Views: 220