ಮಂಡ್ಯ : ಮಂಡ್ಯ ಲೋಕಸಭಾ ಕ್ಷೇತ್ರದ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿಯವರು ಇಂದು ಬೆಳಗ್ಗೆ 10.30ಕ್ಕೆ ಮಂಡ್ಯದ ಡಿಸಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ನಂತರ, ಮಂಡ್ಯ ವಿವಿ ಮೈದಾನದಲ್ಲಿ ಬಹಿರಂಗಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ನಾಮಪತ್ರ ಸಲ್ಲಿಕೆಗೂ ಮುನ್ನ ದೇವಸ್ಥಾನಗಳಿಗೆ ಹೆಚ್ಡಿಕೆ ಭೇಟಿ ನೀಡಿಲಿದ್ದು, 8 ರಿಂದ 10.30ರ ತನಕ ದೇವಸ್ಥಾನಗಳಲ್ಲಿ ಪೂಜೆ, ಪುತ್ಥಳಿಗೆ ಮಾಲಾರ್ಪಣೆ ಸಲ್ಲಿಸಲಿದ್ದಾರೆ.
ಹೆಚ್ಡಿಕೆ ನಾಮಪತ್ರ ಸಲ್ಲಿಕೆ ವೇಳೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ನಿಖಿಲ್ ಕುಮಾರಸ್ವಾಮಿ, ಯಧುವೀರ್ ಒಡೆಯರ್ ಸೇರಿದಂತೆ ಜಿಲ್ಲೆಯ ಹಾಲಿ ಮತ್ತು ಮಾಜಿ ಶಾಸಕರು, ಮಾಜಿ ಸಚಿವರು ಸೇರಿದಂತೆ ಜೆ.ಡಿಎಸ್ ಹಾಗೂ ಬಿಜೆಪಿ ಮುಖಂಡರುಗಳು ಭಾಗವಹಿಸಲಿದ್ದಾರೆ.
ಇದಕ್ಕೂ ಮುನ್ನ ಅರಕೇಶ್ವರ, ಕಾಳಿಕಾಂಬ ಹಾಗೂ ಲಕ್ಷ್ಮಿ ಜನಾರ್ಧನಸ್ವಾಮಿ ದೇವಾಲಯದಲ್ಲಿ ಪೂಜೆಸಲ್ಲಿಸಲಿದ್ದು, 10.15ರಿಂದ ನೀರಾವರಿ ಇಲಾಖೆ ಮುಂಭಾಗದ ಕಾವೇರಿ ಮಾತೆ, ವಿಶ್ವೇಶ್ವರಯ್ಯ, ನಾಲ್ವಡಿ ಕೃಷ್ಣರಾಜ ಒಡೆಯರ್ ಪುತ್ಥಳಿ, ಜಿಲ್ಲಾಧಿಕಾರಿಗಳ ಕಚೇರಿ ಎದುರು ಪಾರ್ಕಿನಲ್ಲಿರುವ ಅಂಬೇಡ್ಕರ್ ಹಾಗೂ ಬಾಬು ಜಗಜೀವನ್ ರಾಂ ಪುತ್ಥಳಿಗಳಿಗೆ ಮಾಲಾರ್ಪಣೆ ಮಾಡಲಿದ್ದಾರೆ. ಮಂಡ್ಯದಲ್ಲಿ ಬೆಳಗ್ಗೆ 11.30ಕ್ಕೆ ಬೃಹತ್ ಸಮಾವೇಶ ನಡೆಯಲಿದೆ.
ಇಂದು ಹೆಚ್ಡಿಕೆ ಎಲ್ಲೆಲ್ಲಿ ಭೇಟಿ..?
- ಬೆಳಗ್ಗೆ 8 ಗಂಟೆಗೆ ಶ್ರೀ ಅರಕೇಶ್ವರ ಸ್ವಾಮಿ ದೇವಸ್ಥಾನಕ್ಕೆ ಭೇಟಿ
- ಬೆಳಗ್ಗೆ 8.30ಕ್ಕೆ ಮಂಡ್ಯದಲ್ಲಿರುವ ಶ್ರೀಕಾಳಿಕಾಂಬ ದೇವಸ್ಥಾನದಲ್ಲಿ ಪೂಜೆ
- ಬೆಳಗ್ಗೆ 9 ಗಂಟೆಗ ಶ್ರೀಜನಾರ್ದನ ಸ್ವಾಮಿ ದೇವಸ್ಥಾನದಲ್ಲಿ ಪೂಜೆ
- ಬೆಳಗ್ಗೆ 9.30ಕ್ಕೆ ವಿಶ್ವೇಶ್ವರಯ್ಯನವರ ಪುತ್ಥಳಿಗೆ ಮಾಲಾರ್ಪಣೆ
- ಬೆಳಗ್ಗೆ 9.45ಕ್ಕೆ ಬಾಬು ಜಗಜೀವನ್ ರಾವ್ ಪುತ್ಥಳಿಗೆ ಮಾಲಾರ್ಪಣೆ
- ಬೆಳಗ್ಗೆ 10 ಗಂಟೆಗೆ ಅಂಬೇಡ್ಕರ್ ಪುತ್ತಳಿಗೆ ಮಾಲಾರ್ಪಣೆ
- ಬೆಳಗ್ಗೆ 10.30ಕ್ಕೆ ಮಂಡ್ಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಕೆ
- ಬೆಳಗ್ಗೆ 11.30ಕ್ಕೆ ಸರ್ಕಾರಿ ಬಾಲಕರ ಕಾಲೇಜು ಅವರಣದಲ್ಲಿ ಬೃಹತ್ ಸಮಾವೇಶ
ಇದನ್ನೂ ಓದಿ : ಪುರಸ್ಕಾರ ಸಿಗುವಲ್ಲಿ ಇರೋದು ಒಳ್ಳೆಯದು.. ನಾನು ಮಂಡ್ಯದ ಸ್ವಾಭಿಮಾನದ ಸೊಸೆ : ಕಾಂಗ್ರೆಸ್ ನಾಯಕರಿಗೆ ಸುಮಲತಾ ಟಾಂಗ್..!