ಬೆಂಗಳೂರು : ವಾಲ್ಮೀಕಿ ನಿಗಮದ ಬಹುಕೋಟಿ ಹಗರಣ ಸಂಬಂಧ ಇಂದು ಮಾಜಿ ಸಚಿವ ಬಿ.ನಾಗೇಂದ್ರ ಅರ್ಜಿ ವಿಚಾರಣೆ ನಡೆಯಲಿದೆ. ಆ.28ರಂದು ನಾಗೇಂದ್ರ ಮನೆ, ಕಚೇರಿ ಮೇಲೆ ಇಡಿ ಅಧಿಕಾರಿಗಳು ದಾಳಿ ಮಾಡಿದ್ದರು. ನಾಗೇಂದ್ರನನ್ನು ಇಡಿ ಟೀಂ ಅರೆಸ್ಟ್ ಮಾಡಿ ಸುದೀರ್ಘ ವಿಚಾರಣೆ ನಡೆಸಿತ್ತು.
ಬಳ್ಳಾರಿ, ಕೊಪ್ಪಳ ಹಾಗೂ ರಾಯಚೂರಿನ ವಿವಿಧೆಡೆ ದಾಳಿ ನಡೆಸಿದ್ದಾರೆ. ಜನಪ್ರತಿನಿಧಿಗಳ ವಿಶೇಷ ಕೋರ್ಟ್ನಲ್ಲಿ ಇಂದು ಬೆಳಗ್ಗೆ 11 ಗಂಟೆಗೆ ಅರ್ಜಿ ವಿಚಾರಣೆ ನಡೆಯಲಿದ್ದು, ED ಜಾಮೀನು ಅರ್ಜಿಗೆ ಆಕ್ಷೇಷಣೆ ಸಲ್ಲಿಸಲಿದೆ.
ವಾಲ್ಮೀಕಿ ಅಭಿವೃದ್ಧಿ ನಿಗಮಕ್ಕೆ ಸಂಬಂಧಿಸಿದ ಬ್ಯಾಂಕ್ ಖಾತೆಯಿಂದ 18 ಖಾತೆಗಳಿಗೆ ಬರೋಬ್ಬರಿ 94.73 ಕೋಟಿ ರೂಪಾಯಿ ಅಕ್ರಮವಾಗಿ ವರ್ಗಾವಣೆಯಾಗಿತ್ತು. ಈ ಸಂಬಂಧ ತನಿಖೆ ನಡೆಸಲು ರಾಜ್ಯ ಸರ್ಕಾರ ಎಸ್‌ಐಟಿ ಕೂಡ ರಚಿಸಿತ್ತು. ಹಗರಣ ಸಂಬಂಧ ನಿಗಮದ ಮಾಜಿ ವ್ಯವಸ್ಥಾಪಕ ನಿರ್ದೇಶಕ ಪದ್ಮನಾಭ, ಲೆಕ್ಕಾಧಿಕಾರಿ ಪರಶುರಾಮ್, ಮಾಜಿ ಸಚಿವ ಬಿ.ನಾಗೇಂದ್ರನನ್ನು ಎಸ್‌ಐಟಿ ಬಂಧಿಸಿತ್ತು.
ಇದೇ ಕೇಸ್ ಸಂಬಂಧ ಇಡಿ ಅಧಿಕಾರಿಗಳು ಕಳೆದ ತಿಂಗಳು ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್ ಹಾಗೂ ಬಿ. ನಾಗೇಂದ್ರ ಅವರ ಮನೆ ಮತ್ತು ಕಚೇರಿಗಳ ಮೇಲೆ ದಾಳಿ ನಡೆಸಿತ್ತು. ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿದ್ದ ಬಿ.ನಾಗೇಂದ್ರ ಅವರ ಫ್ಲ್ಯಾಟ್ ಸೇರಿದಂತೆ ಏಕಕಾಲಕ್ಕೆ 18 ಕಡೆ ದಾಳಿ ನಡೆದಿತ್ತು. ಬೆಂಗಳೂರಿನ ಎಂ.ಜಿ ರಸ್ತೆಯಲ್ಲಿರುವ ಯೂನಿಯನ್ ಬ್ಯಾಂಕ್ ಕಚೇರಿಯನ್ನೂ ಇಡಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದರು.
ಇದನ್ನೂ ಓದಿ : ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ಗೆ ಜನ್ಮದಿನದ ಸಂಭ್ರಮ – 51ನೇ ವಸಂತಕ್ಕೆ ಕಾಲಿಟ್ಟ ಬಾದ್ಷಾ..!