Download Our App

Follow us

Home » ರಾಜಕೀಯ » ಮೈಸೂರಿನ ಚಾಮರಾಜ ಕ್ಷೇತ್ರದ ಮಾಜಿ ಶಾಸಕ ವಾಸು ನಿಧನ..!

ಮೈಸೂರಿನ ಚಾಮರಾಜ ಕ್ಷೇತ್ರದ ಮಾಜಿ ಶಾಸಕ ವಾಸು ನಿಧನ..!

ಮೈಸೂರು : ಅನಾರೋಗ್ಯದಿಂದ ಬಳಲುತ್ತಿದ್ದ ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಶಾಸಕ ವಾಸು ನಿಧನರಾಗಿದ್ದಾರೆ. ಮೈಸೂರಿನ ಜಯಲಕ್ಷ್ಮೀಪುರಂ ನಿವಾಸದಲ್ಲಿ ವಾಸು ನಿಧನರಾಗಿದ್ದು, ಕಳೆದ ಬಾರಿ ಚಾಮರಾಜ ವಿಧಾನಸಭಾ ಕ್ಷೇತ್ರದಿಂದ ಇವರು ಟಿಕೆಟ್ ವಂಚಿತರಾಗಿದ್ದರು. ಮೈಸೂರು ಮೇಯರ್ ಆಗಿದ್ದ ವಾಸು ಬಳಿಕ ಶಾಸಕರಾಗಿದ್ದರು.

ಮೇಯರ್ ವಾಸು ಎಂದೇ ಖ್ಯಾತರಾಗಿದ್ದ ಮಾಜಿ ಶಾಸಕ ವಾಸು ಅವರು, 2013ರಲ್ಲಿ ಚಾಮರಾಜ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಶಾಸಕರಾಗಿದ್ದರು. ತಮ್ಮ ಐದು ವರ್ಷಗಳ ಶಾಸಕ ಅವಧಿಯಲ್ಲಿ ವಾಸು ಅವರು ತಮ್ಮ ಕ್ಷೇತ್ರದಲ್ಲಿ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದರು.

ಮಾಜಿ ಸಿಎಂ ವೀರಪ್ಪ ಮೊಯ್ಲಿಗೆ ಪರಮಾಪ್ತರಾಗಿದ್ದ ವಾಸು, ವೀರಪ್ಪ ಮೊಯ್ಲಿ ಅವರು ಮುಖ್ಯಮಂತ್ರಿ ಆಗಿದ್ದಾಗ ವಾಸು ಅವರು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಆಗಿ ಕಾರ್ಯ ನಿರ್ವಹಿಸಿದ್ದರು. ಮಹಾರಾಣಿ ಕಾಲೇಜಿನ ನೂತನ ಕಟ್ಟಡ ನಿರ್ಮಾಣ, ಆಸ್ಪತ್ರೆಗಳ ನಿರ್ಮಾಣ, ಜಿಲ್ಲಾಸ್ಪತ್ರೆ ಮಂಜೂರು, ಕುಕ್ಕರಹಳ್ಳಿ ಕೆರೆಯ ಪರಿಸರ ಅಭಿವೃದ್ಧಿ ಹಾಗೂ ನಗರದ ಸಾತಗಳ್ಳಿ ಬಳಿ ವಿದ್ಯಾವಿಕಾಸ ಎಂಜಿನಿಯರಿಂಗ್ ಸಂಸ್ಥೆ ಕಟ್ಟಿ ಬೆಳೆಸಿದ ಕೀರ್ತಿ ಇವರಿಗೆ ಸಲ್ಲುತ್ತದೆ. ಮಾಜಿ ಶಾಸಕರಾದ ವಾಸು ಅವರ ನಿಧನಕ್ಕೆ ಕಾಂಗ್ರೆಸ್​ ನಾಯಕರು ಸಂತಾಪ ಸೂಚಿಸಿದ್ದಾರೆ.

ಇದನ್ನೂ ಓದಿ : ಬೆಂಗಳೂರು : ಶಿವರಾತ್ರಿ ಹಬ್ಬದಂದೇ ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್​ ಶಿವನ ಬರ್ಬರ ಹ*ತ್ಯೆ..!

Btv Kannada1
Author: Btv Kannada1

Leave a Comment

RELATED LATEST NEWS

Top Headlines

ಉಡುಪಿ : ಮನೆಯಲ್ಲಿ ಮತದಾನ ಮಾಡಿದ ಕೆಲವೇ ಕ್ಷಣಗಳಲ್ಲಿ ವೃದ್ಧೆ ಸಾ*ವು..!

ಉಡುಪಿ : 80 ವರ್ಷ ಮೇಲ್ಪಟ್ಟವರಿಗೆ ಮನೆಯಿಂದಲೇ ಮತದಾನ ಮಾಡಲು ಅವಕಾಶವಿದೆ. ಹಾಗಾಗಿ ಮನೆಯಲ್ಲಿ ಮತದಾನ ಮಾಡಿದ ಕೆಲವೇ ಕ್ಷಣಗಳಲ್ಲಿ ವೃದ್ಧೆಯೊಬ್ಬರು ಸಾವನ್ನಪ್ಪಿದ್ದಾರೆ. ಪಿ.ಯಶೋಧಾ ನಾರಾಯಣ ಉಪಾಧ್ಯ

Live Cricket

Add Your Heading Text Here