Download Our App

Follow us

Home » ಮೆಟ್ರೋ » ಬೆಂಗಳೂರಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ..!

ಬೆಂಗಳೂರಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ..!

ಬೆಂಗಳೂರು : ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಯಲಹಂಕ ತಾಲೂಕಿನ ಸಿಂಗನಾಯಕನಹಳ್ಳಿ ಗ್ರಾಮದ ಯಡಿಯೂರಪ್ಪ ಲೇಔಟ್​ನಲ್ಲಿ ನಡೆದಿದೆ.

ದಂಪತಿ ಮತ್ತು ಇಬ್ಬರು ಮಕ್ಕಳು ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಅವಿನಾಶ್ (38) ಪತಿ, ಮಮತಾ (30) ಪತ್ನಿ, ಅಧಿರಾ (05) ಅನಯ (2.5) ಎಂದು ಗುರುತಿಸಲಾಗಿದ್ದು, ಕೌಟುಂಬಿಕ ಕಲಹದ ಹಿನ್ನೆಲೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಗುಲ್ಬರ್ಗ ಮೂಲದ ಅವಿನಾಶ್ ಕ್ಯಾಬ್ ಚಾಲಕನಾಗಿ ಕೆಲಸ ಮಾಡುತ್ತಿದ್ದ. ಮೊದಲಿಗೆ ಮಕ್ಕಳನ್ನು ಸಾಯಿಸಿ ಬಳಿಕ ದಂಪತಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳೆದ ರಾತ್ರಿ ಆತ್ಮಹತ್ಯೆಗೆ ಶರಣಾಗಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.  ಸ್ಥಳಕ್ಕೆ ರಾಜಾನುಕುಂಟೆ ಠಾಣೆ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದಾರೆ. ಇನ್ನು ವಿಷಯ ತಿಳಿಯುತ್ತಿದಂತೆ ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ SP ಸಿ.ಕೆ.ಬಾಬಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ : ಖ್ಯಾತ ನಟನಿಗೆ ಬಿಗ್ ಶಾಕ್ ಕೊಟ್ಟ ಪೊಲೀಸರು – ಬೆಳ್ಳಂಬೆಳಗ್ಗೆ ಅರೆಸ್ಟ್.. ಕಾರಣವೇನು?

Leave a Comment

DG Ad

RELATED LATEST NEWS

Top Headlines

ಸೆಟ್ಟೇರಿದ ಮಹೇಶ್ ಚಿನ್ಮಯಿ ನಿರ್ದೇಶನದ ‘ಗೌರಿಶಂಕರ’ ಸಿನಿಮಾ..!

ಮಹೇಶ್ ಚಿನ್ಮಯಿ ನಿರ್ದೇಶನದ ’ಗೌರಿಶಂಕರ’ ಚಿತ್ರದ ಮುಹೂರ್ತ ಸಮಾರಂಭವು ಶ್ರೀ ವಿನಾಯಕ ವೆಂಕಟೇಶ್ವರ ದೇವಸ್ಥಾನದಲ್ಲಿ ಅದ್ದೂರಿಯಾಗಿ ನಡೆಯಿತು. ಹಿರಿಯ ನಿರ್ಮಾಪಕ ರಾಜಣ್ಣ ಕ್ಯಾಮಾರ ಆನ್ ಮಾಡಿದರೆ, ಶಿವಲಿಂಗ

Live Cricket

Add Your Heading Text Here