Download Our App

Follow us

Home » Uncategorized » ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ

ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ

ಬೆಂಗಳೂರು : ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಭಾರೀ ಅನ್ಯಾಯ ಆಗಿದೆ. ಅನುದಾನ ವಿಚಾರದಲ್ಲಿ ಕೇಂದ್ರ ಸರ್ಕಾರ ತಾರತಮ್ಯ ಮಾಡ್ತಿದೆ ಎಂದು ಆರೋಪಿಸಿರುವ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಇವತ್ತು ಜಂಟಿ ಸುದ್ದಿಗೋಷ್ಟಿ ನಡೆಸಿದರು. ಈ ವೇಳೆ ರಾಜ್ಯದಿಂದ ಕೇಂದ್ರಕ್ಕೆ ನೀಡುತ್ತಿರುವ ಹಾಗೂ ರಾಜ್ಯಕ್ಕೆ ಸಿಗುತ್ತಿರುವ ಸಂಪನ್ಮೂಲದ ವಿವರಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ. ಜೊತೆಗೆ ಕೇಂದ್ರದಿಂದ ರಾಜ್ಯಕ್ಕೆ ಕಡಿತವಾಗಿರುವ ಅನುದಾನದ ಬಗ್ಗೆಯೂ ಮಾಹಿತಿಯನ್ನು ನೀಡಿ, ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಕರ್ನಾಟಕ ರಾಜ್ಯದ ಪಾಲಿನ ಹಣವನ್ನು ಕೇಂದ್ರ ಸರ್ಕಾರ ನೀಡಬಹುದು ಎಂಬ ವಿಶ್ವಾಸವಿತ್ತು. ಆದರೆ, ಕೇಂದ್ರ ಸರ್ಕಾರವು ಅದರ ಮಾನದಂಡದಂತೆ ಕೂಡ ರಾಜ್ಯಕ್ಕೆ ಹಣ ನೀಡುತ್ತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಆರೋಪಿಸಿದ್ದಾರೆ.

ಸಿದ್ದರಾಮಯ್ಯ ಹೇಳಿದ್ದೇನು?
ಫೆಬ್ರವರಿ 7ರಂದು ದೆಹಲಿಯ ಜಂತರ್ ಮಂಥರ್​ನಲ್ಲಿ ಪ್ರತಿಭಟನೆ ನಡೆಸುತ್ತಿದ್ದೇವೆ. ಈ ಮೂಲಕ ದೇಶದ ಜನರ ಗಮನವನ್ನು ಸೆಳೆಯುತ್ತೇವೆ. ಇದೂವರೆಗೂ ನಾವು ದೆಹಲಿಯಲ್ಲಿ ಪ್ರತಿಭಟನೆ ಮಾಡಿಲ್ಲ. ಈಗ ಅನಿವಾರ್ಯ ಕಾರಣಗಳಿಂದಾಗಿ ಪ್ರತಿಭಟನೆ ಮಾಡಬೇಕಾಗಿದೆ. ‘ಇದು ಕಾಂಗ್ರೆಸ್ ಪಕ್ಷ, ಬಿಜೆಪಿ ವಿರುದ್ಧ ಮಾಡುವ ಪ್ರತಿಭಟನೆ ಅಲ್ಲ. ರಾಜಕೀಯ ಪ್ರತಿಭಟನೆ ಅಲ್ಲವೇ ಅಲ್ಲ. ಕೇಂದ್ರ ಸರ್ಕಾರದ ಮಲತಾಯಿ ಧೋರಣೆ ಖಂಡಿಸಿ ಪ್ರತಿಭಟನೆ’. ಹಣಕಾಸು ಹಂಚಿಕೆಯಲ್ಲಿ ಆಗಿರುವ ತಾರತಮ್ಯ, ಬರಗಾಲದಲ್ಲಿ ತೋರಿಸಿರುವ ಮಲತಾಯಿ ಧೋರಣೆ ವಿರುದ್ಧ ಪ್ರತಿಭಟಿಸುತ್ತೇವೆ ಎಂದರು.

ಡಿ.ಕೆ.ಶಿವಕುಮಾರ್ ಹೇಳಿದ್ದೇನು?
ಕೇಂದ್ರ ಸರ್ಕಾರ ಇದೂವರೆಗೂ ಬರಗಾಲದ ಹಣವನ್ನು ನೀಡಿಲ್ಲ. ಕೊನೆ ಪಕ್ಷ ಬರಗಾಲ ಕಾರಣ ಕೂಲಿಗೂ ಹಣ ನೀಡಿಲ್ಲ. ಎಷ್ಟು ಅಂತಾ ನಾವು ನಮ್ಮ ನೋವನ್ನು ಸಹಿಸಿಕೊಳ್ಳಲು ಸಾಧ್ಯ? ರಾಜ್ಯದ ನ್ಯಾಯಕ್ಕಾಗಿ ಹೋರಾಡಬೇಕಿದೆ. ಹಾಗಾಗಿ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತೇವೆ. ಪಕ್ಷಾತೀತವಾಗಿ ಎಲ್ಲರಿಗೂ ಆಹ್ವಾನ ನೀಡಿದ್ದೇವೆ ಎಂದರು.

ಇದನ್ನೂ ಓದಿ : ಫೆಬ್ರವರಿ 10ರಂದು ರಾಜ್ಯಕ್ಕೆ ಅಮಿತ್​ ಶಾ ಭೇಟಿ – ಮಹತ್ವದ ಸಭೆ..!

Btv Kannada1
Author: Btv Kannada1

Leave a Comment

RELATED LATEST NEWS

Top Headlines

ಉಡುಪಿ : ಮನೆಯಲ್ಲಿ ಮತದಾನ ಮಾಡಿದ ಕೆಲವೇ ಕ್ಷಣಗಳಲ್ಲಿ ವೃದ್ಧೆ ಸಾ*ವು..!

ಉಡುಪಿ : 80 ವರ್ಷ ಮೇಲ್ಪಟ್ಟವರಿಗೆ ಮನೆಯಿಂದಲೇ ಮತದಾನ ಮಾಡಲು ಅವಕಾಶವಿದೆ. ಹಾಗಾಗಿ ಮನೆಯಲ್ಲಿ ಮತದಾನ ಮಾಡಿದ ಕೆಲವೇ ಕ್ಷಣಗಳಲ್ಲಿ ವೃದ್ಧೆಯೊಬ್ಬರು ಸಾವನ್ನಪ್ಪಿದ್ದಾರೆ. ಪಿ.ಯಶೋಧಾ ನಾರಾಯಣ ಉಪಾಧ್ಯ

Live Cricket

Add Your Heading Text Here