ಗದಗ : ರಾಜ್ಯಾದ್ಯಂತ ದಿನದಿಂದ ದಿನಕ್ಕೆ ಡೆಂಘೀ ಪ್ರಕರಣಗಳು ಹೆಚ್ಚುತ್ತಿದ್ದು, ಜಿಲ್ಲೆಯಲ್ಲಿ ಡೇಂಜರ್ ಡೆಂಘೀಗೆ ಮತ್ತೊಂದು ಮಗು ಬಲಿಯಾಗಿದೆ. ಗದಗದ 5 ವರ್ಷದ ಚಿರಾಯು ಹೊಸಮನಿ ಮೃತಪಟ್ಟ ಬಾಲಕ.
ಮೃತ ಬಾಲಕ ಚಿರಾಯು ಹೊಸಮನಿ ಕಳೆದ ಹಲವು ದಿನಗಳಿಂದ ತೀವ್ರ ಜ್ವರದಿಂದ ಬಳಲುತ್ತಿದ್ದನು. ಮೊದಲು ಗದಗ ಜಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿತ್ತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಧಾರವಾಡದ ಎಸ್ ಡಿಎಂ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಆದರೆ ನಿನ್ನೆ ಚಿಕಿತ್ಸೆ ಫಲಕಾರಿಯಾಗದೇ ಮಗು ಸಾವನ್ನಪ್ಪಿದೆ.
ಇದನ್ನೂ ಓದಿ : ಕಾಲಿವುಡ್‌ಗೆ ಕಾಲಿಟ್ಟ ಚೈತ್ರಾ ಆಚಾರ್ – ಶಶಿಕುಮಾರ್‌ಗೆ ನಾಯಾಕಿಯಾದ ನಟಿ..!
Post Views: 105