Download Our App

Follow us

Home » ಅಪರಾಧ » ಗದಗ : ನಗರಸಭೆ ಉಪಾಧ್ಯಕ್ಷೆ ಪುತ್ರ ಸೇರಿ ನಾಲ್ವರ ಭೀಕರ ಕೊ*ಲೆ – ಮಲಗಿದ್ದಲ್ಲೇ ಹ*ತ್ಯೆಗೈದು ದುಷ್ಕರ್ಮಿಗಳು ಪರಾರಿ..!

ಗದಗ : ನಗರಸಭೆ ಉಪಾಧ್ಯಕ್ಷೆ ಪುತ್ರ ಸೇರಿ ನಾಲ್ವರ ಭೀಕರ ಕೊ*ಲೆ – ಮಲಗಿದ್ದಲ್ಲೇ ಹ*ತ್ಯೆಗೈದು ದುಷ್ಕರ್ಮಿಗಳು ಪರಾರಿ..!

ಗದಗ : ಮಲಗಿದಲ್ಲೇ ನಾಲ್ವರನ್ನು ಬರ್ಬರವಾಗಿ ಹತ್ಯೆಗೈದ ಘಟನೆ ಗದಗದ ದಾಸರ ಓಣಿಯಲ್ಲಿ ನಡೆದಿದೆ. ಒಂದೇ ಕುಟುಂಬದ ನಾಲ್ವರನ್ನು ಹತ್ಯೆ ಮಾಡಲಾಗಿದೆ. ನಗರಸಭೆ ಉಪಾಧ್ಯಕ್ಷೆ ಪುತ್ರ ಸೇರಿ ನಾಲ್ಕು ಜನರನ್ನು ಕೊಲೆ ಮಾಡಲಾಗಿದೆ. ಉಪಾಧ್ಯಕ್ಷೆ ಸುನಂದಾ ಬಾಕಳೆ, ಪುತ್ರ ಕಾರ್ತಿಕ್ ಬಾಕಳೆ 27, ಪರಶುರಾಮ 55, ಪತ್ನಿ ಲಕ್ಷ್ಮೀ 45, ಪುತ್ರಿ ಆಕಾಂಕ್ಷಾ 16, ಕೊಲೆಯಾದವರು.

ಮೊದಲನೇ ಮಹಡಿಯ ಕೋಣೆಯಲ್ಲಿ ಮಲಗಿದ್ದ ಪತಿ, ಪತ್ನಿ, ಮಗಳನ್ನು ಕೊಲೆ ಮಾಡಲಾಗಿದೆ. ಹತ್ಯೆ ಮಾಡಿದ ಬಳಿಕ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಈ ಮೂವರು ಕೊಪ್ಪಳ ಮೂಲದವರು. ಏಪ್ರಿಲ್‌ 17 ರಂದು ಪ್ರಕಾಶ್ ಬಾಕಳೆ ಪುತ್ರ ಕಾರ್ತಿಕ್ ನ ಮದುವೆ ಕಾರ್ಯಕ್ರಮಕ್ಕಾಗಿ ಸಂಬಧಿಗಳು ಆಗಮಿಸಿದ್ದರು. ಬಾಗಿಲು ಸದ್ದು ಕೇಳಿ ಅನುಮಾನಗೊಂಡು ಪೊಲೀಸರಿಗೆ ಕುಟುಂಬಸ್ಥರು‌ ಫೋನ್ ಮಾಡಿದ್ದರು. ಪೊಲೀಸರಿಗೆ ಫೋನ್ ಮಾಡ್ತಾಯಿದ್ದಂತೆ ದುಷ್ಕರ್ಮಿಗಳು ಎಸ್ಕೇಪ್ ಆಗಿದ್ದಾರೆ.

ಮನೆ ಮಾಲೀಕ‌ ಪ್ರಕಾಶ್ ಬಾಕಳೆ ಬಾಗಿಲು ತೆಗೆದಿದ್ರೆ ನಮ್ಮನ್ನು ಕೊಲೆ ಮಾಡುತ್ತಿದ್ರು ಎಂದು ಹೇಳಿದ್ದಾರೆ. ಶ್ವಾನದಳ, ಫಾರಿನ್ ಸಿಕ್ ತಂಡಗಳಿಂದ ಇಂಚಿಂಚು ಪರಿಶೀಲನೆ ನಡೆಯುತ್ತಿದೆ. ಸ್ಥಳಕ್ಕೆ ಎಸ್ಪಿ ಬಿ.ಎಸ್ ನೇಮಗೌಡ, ಹೆಚ್ಚುವರಿ ಎಸ್ಪಿ ಎಂ ಬಿ ಸಂಕದ, ಡಿವೈಎಸ್ಪಿ, ಸಿಪಿಐ ಸೇರಿ ಹಲವು ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಇದನ್ನೂ ಓದಿ : ಹೆಂಡತಿ, ಇಬ್ಬರು ಮಕ್ಕಳಿಗೆ ವಿ*ಷ ಉಣಿಸಿ ಕೊ*ಲೆಗೈದ ಪಾಪಿ ತಂದೆ : ಕಿರಾತಕನ ಕೃತ್ಯಕ್ಕೆ ಬೆಚ್ಚಿ ಬಿದ್ದ ಮಂಡ್ಯ..!

Leave a Comment

DG Ad

RELATED LATEST NEWS

Top Headlines

ರೀಲ್ಸ್​​ಗಾಗಿ ಬಿಳಿ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು ಶವದಂತೆ ರಸ್ತೆಯಲ್ಲಿ ಮಲಗಿದ್ದ ವ್ಯಕ್ತಿ – ವಿಡಿಯೋ ವೈರಲ್..!

ಯುವಜನತೆ ರೀಲ್ಸ್​ ಹುಚ್ಚಿನಿಂದ ಅದೇನೋ ಸಾಹಸಗಳನ್ನು ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡಿರೋದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ಯುವಕ ರೀಲ್ಸ್​​ಗಾಗಿ ಬಿಳಿಯ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು

Live Cricket

Add Your Heading Text Here