ನವದೆಹಲಿ : ಮಹಾತ್ಮ ಗಾಂಧೀಜಿಯವರ 155ನೇ ಜಯಂತಿಯ ಅಂಗವಾಗಿ ದೆಹಲಿಯ ಗಾಂಧಿ ಸ್ಮಾರಕಕ್ಕೆ ಇಂದು ಪ್ರಧಾನಿ ಮೋದಿ ಅವರು ಗೌರವ ಸಲ್ಲಿಸಿದ್ದಾರೆ. ಬಳಿಕ ಅವರು ಮಕ್ಕಳೊಂದಿಗೆ ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡಿದ್ದಾರೆ.
ಈ ವೇಳೆ ಮಾತನಾಡಿದ ಅವರು, 2014ರಲ್ಲಿ ಪ್ರಾರಂಭಿಸಿದ ರಾಷ್ಟ್ರೀಯ ಸ್ವಚ್ಛತಾ ಅಭಿಯಾನವಾದ ಸ್ವಚ್ಛ ಭಾರತ್ ಮಿಷನ್‍ನ 10 ವರ್ಷಗಳನ್ನ ಪೂರೈಸಿದೆ. ಈ ಮಹತ್ವದ ದಿನವನ್ನು ಆಚರಿಸಲು ಶಾಲಾ ಮಕ್ಕಳೊಂದಿಗೆ ಸ್ವಚ್ಛತಾ ಅಭಿಯಾನದಲ್ಲಿ ನಾನು ಭಾಗವಹಿಸಿದ್ದೇನೆ. ಸತತ ಪ್ರಯತ್ನದಿಂದ ಮಾತ್ರ ಭಾರತವನ್ನು ಸ್ವಚ್ಛಗೊಳಿಸಲು ಸಾಧ್ಯ. ಅದಕ್ಕಾಗಿ ಸ್ವಚ್ಛ ಭಾರತ್ ಮಿಷನ್‍ನ್ನು ಬಲಪಡಿಸುವುದನ್ನು ಮುಂದುವರಿಸಿ ಎಂದು ಜನರಿಗೆ ಮೋದಿ ಕರೆ ನೀಡಿದ್ದಾರೆ.
ಸ್ವಚ್ಛ ಭಾರತವು ಪ್ರಪಂಚದ ಅತ್ಯಂತ ದೊಡ್ಡ ಮತ್ತು ಜನರ ಅತ್ಯಂತ ಯಶಸ್ವಿ ಸಂಕಲ್ಪವಾಗಿದೆ. ಈ ಕಾರ್ಯಕ್ರಮದ ನೇತೃತ್ವವನ್ನು ಜನರು ವಹಿಸಿದ್ದಾರೆ. ಸ್ವಚ್ಛ ಭಾರತ ಅಭಿಯಾನವು ಕೇವಲ ಸ್ವಚ್ಛತಾ ಆಂದೋಲನವಲ್ಲ. ಇದು ಈಗ ಸಮೃದ್ಧಿಯ ಹೊಸ ಹಾದಿಯಾಗುತ್ತಿದೆ ಎಂದು ಮೋದಿ ಹೇಳಿದ್ದಾರೆ.
ಇದನ್ನೂ ಓದಿ : ರೇಣುಕಾಸ್ವಾಮಿ ಹತ್ಯೆ ಕೇಸ್ – ಜೈಲಿನಿಂದ ಡಿ ಗ್ಯಾಂಗ್ನ ಮೂವರು ಆರೋಪಿಗಳು ರಿಲೀಸ್..!