Download Our App

Follow us

Home » ಅಪರಾಧ » ನಾಗಮಂಗಲದಲ್ಲಿ ಗಣೇಶ ಮೆರವಣಿಗೆ ವೇಳೆ ದುಷ್ಕರ್ಮಿಗಳಿಂದ ಕಲ್ಲು ತೂರಾಟ.. ಉದ್ವಿಗ್ನ ಪರಿಸ್ಥಿತಿ ನಿರ್ಮಾಣ, 144 ಸೆಕ್ಷನ್​​​ ಜಾರಿ..!

ನಾಗಮಂಗಲದಲ್ಲಿ ಗಣೇಶ ಮೆರವಣಿಗೆ ವೇಳೆ ದುಷ್ಕರ್ಮಿಗಳಿಂದ ಕಲ್ಲು ತೂರಾಟ.. ಉದ್ವಿಗ್ನ ಪರಿಸ್ಥಿತಿ ನಿರ್ಮಾಣ, 144 ಸೆಕ್ಷನ್​​​ ಜಾರಿ..!

ಮಂಡ್ಯ : ಮಂಡ್ಯದ ನಾಗಮಂಗಲದಲ್ಲಿ ಗಣೇಶ ಮೆರವಣಿಗೆ ವೇಳೆ ಕಿಡಿಗೇಡಿಗಳು ಕಲ್ಲು ತೂರಾಟ ಮಾಡಿ ಅಟ್ಟಹಾಸ ತೋರಿದ ಘಟನೆ ನಡೆದಿದೆ. ದುಷ್ಕರ್ಮಿಗಳು ಗಣಪತಿ ಮೇಲೆ ಕಲ್ಲು ಮತ್ತು ಚಪ್ಪಲಿ ತೂರಿ ಪುಂಡಾಟ ಮರೆದಿದ್ದು, ಮಂಡ್ಯದ ನಾಗಮಂಗಲದಲ್ಲಿ ಇದೀಗ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ನಿನ್ನೆ ರಾತ್ರಿ ಪರಿಸ್ಥಿತಿ ತಿಳಿಗೊಳಿಸಲು ಪೊಲೀಸರು ಲಘು ಲಾಠಿ ಪ್ರಹಾರ ಮಾಡಿದ್ದಾರೆ.

ನಾಗಮಂಗಲದಲ್ಲಿ ನಿನ್ನೆ ಅದ್ದೂರಿಯಾಗಿ ಗಣೇಶ ಮೂರ್ತಿ ವಿಸರ್ಜನೆ ಮಾಡಲಾಗುತ್ತಿತ್ತು. ಪ್ರಾರ್ಥನಾ ಸ್ಥಳದ ಬಳಿ ಗಣೇಶ ಮೂರ್ತಿ ಬಂದಾಗ ದುಷ್ಕರ್ಮಿಗಳು ಕಲ್ಲು ತೂರಾಟ ಮಾಡಿದ್ದಾರೆ. ಈ ಸಂದರ್ಭದಲ್ಲಿ ಎರಡು ಗುಂಪುಗಳ ನಡುವೆ ಗಲಾಟೆ ನಡೆದು ಉದ್ವಿಗ್ನ ಪರಿಸ್ಥಿತಿ ನಿರ್ಮಾಣಗೊಂಡಿದೆ. ರಸ್ತೆಗಳಲ್ಲಿ ಬೆಂಕಿ ಹಚ್ಚಿ ಕಿಡಿಗೇಡಿಗಳ ಅಟ್ಟಹಾಸ ಮೆರೆದಿದ್ದು, ಬೀದಿಬದಿಯಲ್ಲಿ ನಿಲ್ಲಿಸಿದ 10ಕ್ಕೂ ಹೆಚ್ಚು ಬೈಕ್​ಗಳು ಬೆಂಕಿಗಾಹುತಿಯಾಗಿದೆ. ದುಷ್ಕರ್ಮಿಗಳು ಮೂರ್ನಾಲ್ಕು ಅಂಗಡಿಗಳಿಗೆ ಬೆಂಕಿ ಹಚ್ಚಿದ್ದು, ಪೇಂಟ್​​ ಅಂಗಡಿ.. ಬೈಕ್​​ ಶೋ ರೂಮ್​​.. ಬಟ್ಟೆ ಅಂಗಡಿ ಸುಟ್ಟು ಭಸ್ಮವಾಗಿದೆ.

ಈ ಸಂಬಂಧ ನಾಗಮಂಗಲ ಪಟ್ಟಣದಲ್ಲಿ ಕಳೆದ ರಾತ್ರಿ ಉದ್ರಿಕ್ತ ವಾತಾವರಣ ನಿರ್ಮಾಣವಾಗಿದ್ದು, ಪೊಲೀಸ್​ ಠಾಣೆ ಮುಂದೆ ಗಣಪತಿ ತಂದು ಯುವಕರ ಗಲಾಟೆ ನಡೆಸಿದ್ದಾರೆ. ಪ್ರತಿಭಟನಾಕಾರರನ್ನ ಚದುರಿಸಲು ಪೊಲೀಸರ ಹರಸಾಹಸ ಪಟ್ಟಿದ್ದು, ಬಳಿಕ ತಡರಾತ್ರಿ ಸುಮಾರಿಗೆ ಪೊಲೀಸರು ಪರಿಸ್ಥಿತಿ ತಹಬದಿಗೆ ತಂದಿದ್ದಾರೆ. ಪರಿಸ್ಥಿತಿ ಉದ್ವಿಗ್ನಗೊಳ್ಳುತ್ತಿದ್ದಂತೆ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದು, ಮಂಡ್ಯ ಜಿಲ್ಲಾಧಿಕಾರಿ ಕುಮಾರ್​​​ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಮಂಡ್ಯ ಎಸ್​ಪಿ ಮಲ್ಲಿಕಾರ್ಜುನ ಬಾಲದಂಡಿ ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದು, ದಕ್ಷಿಣ ವಲಯ IGP ಬೋರಲಿಂಗಯ್ಯ ಭೇಟಿ ನೀಡಿ ಪರಿಶೀಲನೆ ನಡೆಸಿ ಪರಿಸ್ಥಿತಿಯ ಸಂಪೂರ್ಣ ಮಾಹಿತಿ ಪಡೆದು ಬಂದೋಬಸ್ತ್​ ಮಾಡಿದ್ದಾರೆ.

ಇನ್ನೂ ಕೂಡ ನಾಗಮಂಗಲ ಬೂದಿ ಮುಚ್ಚಿದ ಕೆಂಡದಂತಿದ್ದು, ಹೊತ್ತಿ ಉರಿದ ನಾಗಮಂಗಲದಲ್ಲಿ 144 ಸೆಕ್ಷನ್​​​ ಜಾರಿ ಮಾಡಲಾಗಿದೆ. ಉದ್ವಿಗ್ನ ಸ್ಥಿತಿ ಹಿನ್ನೆಲೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, 144 ಸೆಕ್ಷನ್​ ಜಾರಿ ಮಾಡಿ ಜಿಲ್ಲಾಧಿಕಾರಿ ಕುಮಾರ್​ ಆದೇಶ ಹೊರಡಿಸಿದ್ದಾರೆ. ಸೆಪ್ಟೆಂಬರ್​​ 14ರವರೆಗೂ ಜಿಲ್ಲಾಧಿಕಾರಿ ನಿಷೇಧಾಜ್ಞೆ ಹೇರಿದ್ದಾರೆ. ಅಗತ್ಯ ಬಿದ್ದರೆ ನಿಷೇಧಾಜ್ಞೆ ವಿಸ್ತರಣೆ ಮಾಡೋದಾಗಿ ಹೇಳಿಕೆ ನೀಡಿದ್ದಾರೆ. ಸದ್ಯ ಕಲ್ಲು ತೂರಾಟ ಪ್ರಕರಣ ಸಂಬಂಧ ಪೊಲೀಸರು 45 ಮಂದಿಯನ್ನು ಅರೆಸ್ಟ್ ಮಾಡಿದ್ದಾರೆ.  ಅಕ್ಕ-ಪಕ್ಕದ ಜಿಲ್ಲೆಗಳಿಂದಲೂ ಪೊಲೀಸರನ್ನು ಕರೆಸಿ ಬಂದೋಬಸ್ತ್​​​ ಮಾಡಿಸಲಾಗಿದ್ದು, KSRP, CAR ಸೇರಿದಂತೆ ವಿವಿಧ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗಿದೆ. ಪೊಲೀಸರು ಸೂಕ್ಷ್ಮ ಪ್ರದೇಶಗಳಲ್ಲಿ ಬಿಗಿ ಬಂದೋಬಸ್ತ್​​ ಮಾಡಿದ್ದಾರೆ.

ಇದನ್ನೂ ಓದಿ : ಬೆಳಗಾವಿಯಲ್ಲಿ ಭೀಕರ ಅಪಘಾತ – ರಸ್ತೆ ದಾಟುತ್ತಿದ್ದ ವೇಳೆ ಬಸ್​ನ ಚಕ್ರಕ್ಕೆ ಸಿಲುಕಿ ಬೈಕ್‌ ಸವಾರ ಮೃತ್ಯು..!

Leave a Comment

DG Ad

RELATED LATEST NEWS

Top Headlines

ಗಂಡು ಮಗುವಿಗೆ ಜನ್ಮ ನೀಡಿದ ಕಿರುತೆರೆ ನಟಿ ಕವಿತಾ ಗೌಡ – ಮಗನ ಕಾಲಿನ ವಿಡಿಯೋ ಹಂಚಿಕೊಂಡ ಚಂದನ್..!

ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದ ಕನ್ನಡದ ಕಿರುತೆರೆ ನಟಿ ಕವಿತಾ ಗೌಡ ಹಾಗೂ ಚಂದನ್ ಕುಮಾರ್​ಗೆ ಗಂಡು ಮಗು ಜನಿಸಿದೆ. ಇದೀಗ ಮಗುವಿನ ಕಾಲಿನ ಒಂದು ವಿಡಿಯೋ ಶೇರ್

Live Cricket

Add Your Heading Text Here