ಬೆಂಗಳೂರು : ಗಂಗೇನಹಳ್ಳಿ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರಿಂದ ನೋಟಿಸ್ ಜಾರಿ ಹಿನ್ನೆಲೆ ಇಂದು ಸಂಜೆ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಲೋಕಾಯುಕ್ತ ವಿಚಾರಣೆಗೆ ಹಾಜರಾದರು.
ದೆಹಲಿಯಿಂದ ಬಂದ ಅವರು ಏರ್‌ಪೋರ್ಟ್‌ನಿಂದ ನೇರವಾಗಿ ಲೋಕಾಯುಕ್ತ ಕಚೇರಿಗೆ ಆಗಮಿಸಿದರು. ಸೋಮವಾರವೇ ವಿಚಾರಣೆಗೆ ಹಾಜರಾಗುವಂತೆ ಹೆಚ್ಡಿ ಕುಮಾರಸ್ವಾಮಿಗೆ ಲೋಕಾಯುಕ್ತ ಪೊಲೀಸರಿಂದ ನೋಟಿಸ್ ಜಾರಿಯಾಗಿತ್ತು. ಆದರೆ ಸೋಮವಾರ ಬೇರೆ ಕೆಲಸವಿರುವುದರಿಂದ ಇಂದೇ ವಿಚಾರಣೆಗೆ ಬರುವುದಾಗಿ ತಿಳಿಸಿದ್ದರು. ಹಾಗಾಗಿ ಬೆಂಗಳೂರು ಏರ್‌ಪೋರ್ಟ್‌ನಿಂದ ಹೊರಟು ಸಾಯಂಕಾಲ ಹಾಜರಾದರು.
ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿದ ಕೇಂದ್ರ ಸಚಿವ ಹೆಚ್ಡಿಕೆ ಅವರು, ಗಂಗೇನಹಳ್ಳಿ ಡಿನೋಟಿಫಿಕೆಷನ್ ಪ್ರಕರಣದಲ್ಲಿ ನಾನೇನೂ ತಪ್ಪು ಮಾಡಿಲ್ಲ. ಕಾನೂನಿನ ಪ್ರಕಾರವೇ ಕ್ರಮಕೈಗೊಳ್ಳಾಗಿದೆ. ಸಿಎಂ ಸಿದ್ದರಾಮಯ್ಯ ಕೂಡ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಸೇರಿದಂತೆ ವಿವಿಧ ಏಜೆನ್ಸಿಗಳು ಸ್ವಾಧೀನಪಡಿಸಿಕೊಂಡಿರುವ ಹಲವಾರು ಎಕರೆ ಭೂಮಿಯನ್ನು ಡಿನೋಟಿಫೈ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.
ಇನ್ನು ಮುಡಾ ಹಗರಣದಿಂದ ಗಮನ ಬೇರೆಡೆ ಸೆಳೆಯಲು ಸಿಎಂ ಸಿದ್ದರಾಮಯ್ಯ ವಿರೋಧ ಪಕ್ಷದ ಹಳೆ ಪ್ರಕರಣಗಳನ್ನು ಕೆದಕಿ ನಮನ್ನು ಟಾರ್ಗೆಟ್ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.
ಇದನ್ನೂ ಓದಿ : ಬಿಟಿವಿ ಬಳಿ ಸಿದ್ದು FIR ಎಕ್ಸ್ಕ್ಲೂಸಿವ್ ಪ್ರತಿ – 16 ಪುಟಗಳ FIRನಲ್ಲಿ ಏನಿದೆ ಗೊತ್ತಾ?