Download Our App

Follow us

Home » ಮೆಟ್ರೋ » ನಿಂತಿದ್ದ ಕಸದ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಕಾರು : ಟೆಕ್ಕಿ ಸಾ*ವು, ನಾಲ್ವರಿಗೆ ಗಾಯ..!

ನಿಂತಿದ್ದ ಕಸದ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಕಾರು : ಟೆಕ್ಕಿ ಸಾ*ವು, ನಾಲ್ವರಿಗೆ ಗಾಯ..!

ಬೆಂಗಳೂರು : ರಸ್ತೆ ಬದಿಯಲ್ಲಿ ನಿಂತಿದ್ದ ಕಸದ ಲಾರಿಗೆ ಹಿಂಬದಿಯಿಂದ ಕಾರೊಂದು ಡಿಕ್ಕಿ ಹೊಡೆದ ಘಟನೆ ವೈಟ್​ಫೀಲ್ಡ್​ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಘಟನೆಯ ಪರಿಣಾಮ ಓರ್ವ ಟೆಕ್ಕಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಕಾರ್​​ನಲ್ಲಿದ್ದ ನಾಲ್ವರಿಗೆ ಸಣ್ಣ-ಪುಟ್ಟ ಗಾಯಗಳಾಗಿವೆ.

ಓಡಿಶಾ ಮೂಲದ 23ವ ವರ್ಷದ ಸಾಗರ್ ಸಾವನ್ನಪ್ಪಿದ ಯುವಕ. ಕಳೆದ ರಾತ್ರಿ 10:30ರ ವೇಳೆ ವೇಗವಾಗಿ ಬಂದ ಐವರು ಪ್ರಯಾಣಿಕರಿದ್ದ ಕಾರು ವೈಟ್​ಫೀಲ್ಡ್​ ಠಾಣೆ ವ್ಯಾಪ್ತಿಯ ಬಾಲಗತ್​​​​ ಜಂಕ್ಷನ್​ ಬಳಿ ಕಸದ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಓರ್ವ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದು, ಉಳಿದ ನಾಲ್ವರು ಟೆಕ್ಕಿಗಳು ಗಾಯಗೊಂಡಿದ್ದಾರೆ.

ಸದ್ಯ ಅಪಘಾತದಲ್ಲಿ ಗಾಯಗೊಂಡ ನಾಲ್ವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇನ್ನು ಘಟನೆಯ ಬಗ್ಗೆ ವೈಟ್​ಫೀಲ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : ಕೋಲಾರ ಗಡಿಯಲ್ಲಿ ಭಾರೀ ಪ್ರಮಾಣದ ಸ್ಫೋಟಕ ಪತ್ತೆ- ಒರ್ವ ವಶಕ್ಕೆ, ಮತ್ತೊಬ್ಬ ಪರಾರಿ..!

Leave a Comment

RELATED LATEST NEWS

Top Headlines

ಓವರ್​ ಟೇಕ್​ ಮಾಡುವ ವಿಚಾರಕ್ಕೆ ಜಗಳ : KSRTC ಬಸ್​ ಡ್ರೈವರ್​​ಗೆ ಚಾ*ಕುವಿನಿಂದ ಇರಿದ ಮಿನಿ ಟ್ರಕ್​​ ಡ್ರೈವರ್​​..!

ಬೆಂಗಳೂರು : ವಾಹನವನ್ನು ಓವರ್​ ಟೇಕ್​ ಮಾಡುವ ವಿಚಾರಕ್ಕೆ ಜಗಳ ನಡೆದು KSRTC ಬಸ್​ ಡ್ರೈವರ್​​ಗೆ ಮಿನಿ ಟ್ರಕ್​​ ಡ್ರೈವರ್ ​​ಚಾಕುವಿನಿಂದ ಇರಿದಿರುವ ಘಟನೆ ಬೆಂಗಳೂರು ಗ್ರಾಮಾಂತರ

Live Cricket

Add Your Heading Text Here