ಬೆಂಗಳೂರು : ಮೊದಲ ಹಂತದ ಮತದಾನಕ್ಕೆ ಇನ್ನು 2ದಿನ ಮಾತ್ರ ಬಾಕಿಯಿದೆ. ಹೀಗಾಗಿ ಲೋಕ ಚುನಾವಣೆಯಲ್ಲಿ ಪ್ರಧಾನಿ ಮೋದಿಯವರಿಗೆ ಮತ ಹಾಕಿ ಗೆಲ್ಲಿಸುವಂತೆ ರಾಜ್ಯ ಸಚಿವ ಸಂಪುಟ ದರ್ಜೆ ಸ್ಥಾನದ ಮಾಜಿ ಅಧ್ಯಕ್ಷ ಜಿ.ಕೆ.ಗಿರೀಶ್ ತಮ್ಮ ಸಮುದಾಯದವರಲ್ಲಿ ಮನವಿ ಮಾಡಿದ್ದಾರೆ.
ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ರಾಜ್ಯದ 28 ಕ್ಷೇತ್ರಗಳಲ್ಲಿ ಬಿಜೆಪಿಯನ್ನು ಬೆಂಬಲಿಸಿ. ಲೋಕಸಭಾ ಕ್ಷೇತ್ರದ ಎಲ್ಲಾ ಬಿಜೆಪಿ ಅಭ್ಯರ್ಥಿಗಳನ್ನು ಬೆಂಬಲಿಸಿ. 3ನೇ ಬಾರಿ ನರೇಂದ್ರ ಮೋದಿಯವರು ಪ್ರಧಾನಮಂತ್ರಿಯಾಗಲು ರಾಜ್ಯದ ಸಮಸ್ಥ ಉಪ್ಪಾರ ಸಮಾಜದ ನಿರ್ಣಯದಂತೆ ಬಿಜೆಪಿಗೆ ಬೆಂಬಲ ಕೊಡಲು ತೀರ್ಮಾನಿಸಿದ್ದು, ಹಾಗೆಯೇ ಮೋದಿಯವರಿಗೆ ಮತದಾನ ಮಾಡುವ ಮೂಲಕ ದೇಶದ ಹಿತವನ್ನು ಕಾಪಾಡಬೇಕಾಗಿ ಜಿ.ಕೆ ಗಿರೀಶ್ ಉಪ್ಪಾರ್ ಅವರು ಮನವಿ ಮಾಡಿಕೊಂಡಿದ್ದಾರೆ.
ಯಾಕೆಂದರೆ ನಮ್ಮ ರಾಜ್ಯದಲ್ಲಿ ಸುಮಾರು 25 ರಿಂದ 30ಲಕ್ಷ ಜನಸಂಖ್ಯೆ ಹೊಂದಿದ್ದು, 10 ಲೋಕಸಭಾ ಮತಕ್ಷೇತ್ರಗಳಲ್ಲಿ ನಿರ್ಣಾಯಕ ಮತದಾರರಿದ್ದಾರೆ. ಚಾಮರಾಜನಗರ, ಮೈಸೂರು, ಚಿತ್ರದುರ್ಗ, ಚಿಕ್ಕಮಗಳೂರು, ಕೊಪ್ಪಳ, ಹುಬ್ಬಳ್ಳಿ, ಬೆಳಗಾವಿ, ಸುಮಾರು ಜಿಲ್ಲೆಗಳಲ್ಲಿ ಅತೀ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದೇವೆ. ಹಾಗಾಗಿ ಎಲ್ಲರೂ 26ರಂದು ನಡೆಯುವಂತಹ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಮತದಾನ ಮಾಡಿ, ನರೇಂದ್ರ ಮೋದಿಯವರಿಗೆ ಬೆಂಬಲ ನೀಡುವಂತೆ ಮನವಿ ಕೋರಿದ್ದಾರೆ.
ಇದನ್ನೂ ಓದಿ : ಆರ್ ಸಿ ಸ್ಟುಡಿಯೋ ಕನ್ನಡದ ಭರವಸೆಯ ನಿರ್ಮಾಣ ಸಂಸ್ಥೆ : ಇದು ಚಂದ್ರು ಸಿನಿಮಾ ಶಿಖರ..!