Download Our App

Follow us

Home » ಅಪರಾಧ » ಮಂಗಳೂರು ವಿಮಾನ ನಿಲ್ದಾಣದಲ್ಲಿ ಚಿನ್ನ ಕಳ್ಳಸಾಗಣೆ: 6 ಲಕ್ಷ ರೂ. ಮೌಲ್ಯದ ಚಿನ್ನ ವಶಕ್ಕೆ..!

ಮಂಗಳೂರು ವಿಮಾನ ನಿಲ್ದಾಣದಲ್ಲಿ ಚಿನ್ನ ಕಳ್ಳಸಾಗಣೆ: 6 ಲಕ್ಷ ರೂ. ಮೌಲ್ಯದ ಚಿನ್ನ ವಶಕ್ಕೆ..!

ಮಂಗಳೂರು : ಸಾಮಾನ್ಯವಾಗಿ ಕಳ್ಳರು ಚಾಪೆ ಕೆಳಗೆ ನುಸುಳಿದರೆ ಪೊಲೀಸರು ರಂಗೋಲಿ ಕೆಳಗೆ ನುಸುಳುತ್ತಾರೆಂಬ ಮಾತಿದೆ. ಆದರೆ ಇದೀಗ ಈ ಮಾತು ಬದಲಾಗಿದೆ. ಕಳ್ಳರು ಚಾಪೆ ಕೆಳಗೆ ನುಗ್ಗಿದ್ರೆ ಕಸ್ಟಮ್ಸ್ ಅಧಿಕಾರಿಗಳು ರಂಗೋಲಿ ಕೆಳಗೆ ನುಸುಳಿರುವ ಘಟನೆಯೊಂದು ಮಂಗಳೂರಿನಲ್ಲಿ ನಡೆದಿದೆ.

ಹೌದು.. ಮಂಗಳೂರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಚಿನ್ನವನ್ನು ಪೇಸ್ಟ್ ಆಗಿ ಪರಿವರ್ತಿಸಿ ಅಕ್ರಮವಾಗಿ ಸಾಗಿಸುತ್ತಿದ್ದ ಪ್ರಯಾಣಿಕರೊಬ್ಬರಿಂದ ಮಂಗಳೂರು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿರುವ ಘಟನೆ ನಡೆದಿದೆ. ಮಾರ್ಚ್ 19 ರಂದು ದುಬೈನಿಂದ ಪ್ರಯಾಣಿಸುತ್ತಿದ್ದ ಭಟ್ಕಳ ಮೂಲದ ವ್ಯಕ್ತಿಯಿಂದ ಕಸ್ಟಮ್ ಅಧಿಕಾರಿಗಳು 6,19,200 ರೂಪಾಯಿ ಮೌಲ್ಯದ 96 ಗ್ರಾಂ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.

ಪ್ರಯಾಣಿಕ ಕಸ್ಟಮ್ ಅಧಿಕಾರಿ ವಶಪಡಿಸಿಕೊಂಡ ಚಿನ್ನವನ್ನು ಪೇಸ್ಟ್ ಆಗಿ ಪರಿವರ್ತಿಸಿ ಎರಡು ಲೇಯರ್ ಕಂದು ಕಾಗದದ ಹಾಳೆಗಳ ನಡುವೆ ಬಚ್ಚಿಟ್ಟಿದ್ದ. ಇದನ್ನು  ಕಳ್ಳಸಾಗಣೆ ಮಾಡುವುದಕ್ಕಾಗಿ  ಟ್ರಾಲಿ ಬ್ಯಾಗ್‌ ಉಪಯೋಗಿಸಿದ್ದ ಎಂದು ಕಸ್ಟಮ್ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ : ಪೋಸ್ಟರ್​​ನಲ್ಲೇ ಕುತೂಹಲ ಮೂಡಿಸಿದೆ ಝೈದ್ ಖಾನ್ ನಟನೆಯ ನೂತನ ಚಿತ್ರ..!

Leave a Comment

RELATED LATEST NEWS

Top Headlines

ಓವರ್​ ಟೇಕ್​ ಮಾಡುವ ವಿಚಾರಕ್ಕೆ ಜಗಳ : KSRTC ಬಸ್​ ಡ್ರೈವರ್​​ಗೆ ಚಾ*ಕುವಿನಿಂದ ಇರಿದ ಮಿನಿ ಟ್ರಕ್​​ ಡ್ರೈವರ್​​..!

ಬೆಂಗಳೂರು : ವಾಹನವನ್ನು ಓವರ್​ ಟೇಕ್​ ಮಾಡುವ ವಿಚಾರಕ್ಕೆ ಜಗಳ ನಡೆದು KSRTC ಬಸ್​ ಡ್ರೈವರ್​​ಗೆ ಮಿನಿ ಟ್ರಕ್​​ ಡ್ರೈವರ್ ​​ಚಾಕುವಿನಿಂದ ಇರಿದಿರುವ ಘಟನೆ ಬೆಂಗಳೂರು ಗ್ರಾಮಾಂತರ

Live Cricket

Add Your Heading Text Here