ಬೆಂಗಳೂರು : ಬೆಂಗಳೂರು ಗ್ರಾಮಾಂತರ ಉದ್ಯೋಗಾಕಾಂಕ್ಷಿಗಳಿಗೆ ಒಂದು ಸಿಹಿ ಸುದ್ದಿ ಸಿಕ್ಕಿದೆ. ಸಚಿವ ಕೆ.ಹೆಚ್ ಮುನಿಯಪ್ಪ ನೇತೃತ್ವದಲ್ಲಿ ಜಿಲ್ಲಾ ಮಟ್ಟದ ಬೃಹತ್ ಉದ್ಯೋಗ ಮೇಳ ನಡೆಯಲಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕು ತಾಲೂಕಿನ ನಿರುದ್ಯೋಗಿಗಳಿಗಾಗಿ, ದೇವನಹಳ್ಳಿ ತಾಲೂಕಿನ ಡಿಗ್ರಿ ಕಾಲೇಜು ಮೈದಾನದಲ್ಲಿ ಬೃಹತ್ ಉದ್ಯೋಗ ಮೇಳ ಏರ್ಪಡಿಸಲಾಗಿದೆ. ಸೆಪ್ಟೆಂಬರ್ 13ರಿಂದ ಉದ್ಯೋಗ ಮೇಳ ಆರಂಭವಾಗಲಿದ್ದು, ಎಸ್ಎಸ್ಎಲ್ಸಿ , ಪಿಯುಸಿ, ಡಿಗ್ರಿ, ಡಿಪ್ಲೋಮೋ, ಹೀಗೆ ವಿದ್ಯಾಭ್ಯಾಸಕ್ಕಾನುಗುಣವಾಗಿ ಹುದ್ದೆಯ ಮೇಳ ಏರ್ಪಾಟು ಮಾಡಲಾಗಿದೆ.
ದೇವನಹಳ್ಳಿ ತಾಲೂಕಿನ ಡಿಗ್ರಿ ಕಾಲೇಜು ಮೈದಾನದಲ್ಲಿ ನಡೆಯುವ ಬೃಹತ್ ಉದ್ಯೋಗ ಮೇಳದಲ್ಲಿ ನೂರಕ್ಕೂ ಹೆಚ್ಚು ಕಂಪನಿಗಳು ಭಾಗಿ ಹಾಗೂ ಮೂರು ಸಾವಿರಕ್ಕೂ ಹೆಚ್ಚು ಮಂದಿ ಸೇರುವ ನಿರೀಕ್ಷೆಯಿದೆ. ಇನ್ನು ಈ ಕ್ಷಣದಿಂದಲೇ QR ಕೋಡ್ ಮೂಲಕ ರಿಜಿಸ್ಟರ್ ಮಾಡಿಕೊಳ್ಳಬಹುದಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾದಂಡಾಧಿಕಾರಿ N.ಶಿವಶಂಕರ್ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ : ಅಗತ್ಯಬಿದ್ದರೆ ಮುಲಾಜಿಲ್ಲದೇ ಕುಮಾರಸ್ವಾಮಿಯನ್ನು ಅರೆಸ್ಟ್ ಮಾಡ್ತೀವಿ – ನೇರವಾಗಿ ವಾರ್ನಿಂಗ್ ಕೊಟ್ಟ ಸಿಎಂ ಸಿದ್ದರಾಮಯ್ಯ..!