ಬಿಗ್ ಬಾಸ್ ಮನೆಗೆ ಉದ್ಯಮಿ, ರೈತ ಗೋಲ್ಡ್ ಸುರೇಶ್ ಕಾಲಿಟ್ಟಿದ್ದಾರೆ. ಬಿಗ್ ಬಾಸ್ ಕನ್ನಡ 11ರ 4ನೇ ಸ್ಪರ್ಧಿಯಾಗಿ ಗೋಲ್ಡ್ ಸುರೇಶ್ ಎಂಟ್ರಿ ಕೊಟ್ಟಿದ್ದಾರೆ. ಒಂದು ತಿಂಗಳಿನಿಂದ ಸಾಮಾಜಿಕ ಜಾಲತಾಣದಲ್ಲಿ ಬಿಗ್ಬಾಸ್ ಮನೆಗೆ ಅವರು ಹೋಗ್ತಾರೆ, ಇವರು ಹೋಗ್ತಾರೆ ಅಂತ ಕೆಲವೊಂದು ಹೆಸರುಗಳು ವೈರಲ್ ಆಗಿದ್ದವು. ಆದರೆ ನಿನ್ನೆ ರಾಜಾ ರಾಣಿ ಗ್ರ್ಯಾಂಡ್ ಫಿನಾಲೆ ವೇದಿಕೆ ಮೇಲೆ ಅಧಿಕೃತವಾಗಿ ಕೆಲ ಸ್ಪರ್ಧಿಗಳನ್ನು ರಿವೀಲ್ ಮಾಡಲಾಗಿದೆ.
ಇದೇ ಮೊದಲ ಬಾರಿಗೆ ಬಿಗ್ಬಾಸ್ ಶೋ ಶುರುವಾಗೋ ಮುನ್ನವೇ ಕೆಲ ಸ್ಪರ್ಧಿಗಳ ಹೆಸರನ್ನು ಹೇಳಲಾಗಿದೆ. ಅದರಲ್ಲೂ ಈ ಬಾರಿಯ ಬಿಗ್ಬಾಸ್ ಸೀಸನ್ 11ಕ್ಕೆ ಯಾರು ಊಹಿಸಲಾರದ ರೀತಿಯಲ್ಲಿ ಸ್ಪರ್ಧಿಗಳು ಎಂಟ್ರಿ ಕೊಡ್ತಾ ಇದ್ದಾರೆ. ಮೊದಲ ಸ್ಪರ್ಧಿಯಾಗಿ ಸತ್ಯ ಸೀರಿಯಲ್ ನಟಿ ಗೌತಮಿ ಜಾಧವ್ ಎಂಟ್ರಿ ಕೊಟ್ಟಿದ್ದರು. ಎರಡನೇ ಸ್ಪರ್ಧಿಯಾಗಿ ಅಚ್ಚರಿಯ ರೀತಿಯಲ್ಲಿ ಲಾಯರ್ ಜಗದೀಶ್ ಅವರು ಎಂಟ್ರಿ ಕೊಟ್ಟಿದ್ದಾರೆ. ಇನ್ನೂ ಯಾರು ಕೂಡ ಗೆಸ್ ಮಾಡದ ರೀತಿಯಲ್ಲಿ ಚೈತ್ರಾ ಕುಂದಾಪುರ ಅವರು ಎಂಟ್ರಿ ಕೊಟ್ಟಿದ್ದರು. ಬಳಿಕ 4ನೇ ಸ್ಪರ್ಧಿಯಾಗಿ ಬಿಗ್ಬಾಸ್ ಮನೆಗೆ ಕಾಲಿಡಲು ಸಜ್ಜಾಗಿದ್ದಾರೆ ಈ ಗೋಲ್ಡ್ ಸುರೇಶ್.
ಯಾರು ಈ ಗೋಲ್ಡ್ ಸುರೇಶ್? ಬಿಗ್ಬಾಸ್ ಪ್ರೋಮೋದಲ್ಲಿ ತೋರಿಸಿದ ಹಾಗೇ ಗೋಲ್ಡ್ ಸುರೇಶ್ ಅವರು ಉತ್ತರ ಕರ್ನಾಟಕದ ಮೂಲದವರಾಗಿದ್ದಾರೆ. ಅದರಲ್ಲೂ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ಆ್ಯಕ್ವೀವ್ ಆಗಿದ್ದಾರೆ. ಪಬ್ಲಿಕ್ ಫಿಗರ್ ಆಗಿರೋ ಗೋಲ್ಡ್ ಸುರೇಶ್ ಅವರಿಗೆ ಇನ್ಸ್ಟಾಗ್ರಾಮ್ ಖಾತೆಯಲ್ಲಿ 15 ಸಾವಿರಕ್ಕೂ ಹೆಚ್ಚು ಪಾಲೋವರ್ಸ್ ಹೊಂದಿದ್ದಾರೆ. ಗೋಲ್ಡ್ ಸುರೇಶ್ ಹುಟ್ಟಿದ್ದು ಬೆಳಗಾವಿ ಜಿಲ್ಲೆ ಅಥಣಿ ಗ್ರಾಮದಲ್ಲಿ. ತಮ್ಮ ಪ್ರಾಥಮಿಕ ಶಿಕ್ಷಣವನ್ನು ಮೈಸೂರಿನಲ್ಲಿ ಮುಗಿಸಿದ್ದಾರೆ. ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ತಾವು ಮಾಡಿದ ಸಾಧನೆ ಬಗ್ಗೆ ಹೇಳಿಕೊಂಡಿದ್ದಾರೆ. ಸದ್ಯ ಮೈಮೇಲೆ 2 ಕೋಟಿ ಬಂಗಾರವನ್ನು ಧರಿಸಿಕೊಂಡು ಬಿಗ್ಬಾಸ್ ಮನೆಗೆ ಎಂಟ್ರಿ ಕೊಟ್ಟಿದ್ದಾರೆ. ಮುಂದಿನ ದಿನಗಳಲ್ಲಿ ಬಿಗ್ಬಾಸ್ ಮನೆಯಲ್ಲಿ ಯಾವ ರೀತಿ ಕಮಾಲ್ ಮಾಡುತ್ತಾರೆ ಅಂತ ಕಾದು ನೋಡಬೇಕಿದೆ.
ಇದನ್ನೂ ಓದಿ : ಎಷ್ಟೊಂದು ಸಖತ್ ಆಗಿದೆ ಗೊತ್ತಾ ಈ ಬಾರಿಯ ಬಿಗ್ ಬಾಸ್ ಮನೆ – ಮೇಕಿಂಗ್ ವಿಡಿಯೋ ಔಟ್..!