ಬೆಂಗಳೂರು : ನಮ್ಮ ಮೆಟ್ರೋ ನಾಗಸಂದ್ರ ಟು ಮಾದಾವರ ಮಾರ್ಗ ಕೊನೆಗೂ ಸಂಚಾರಕ್ಕೆ ಸಿದ್ಧವಾಗಿದ್ದು, ಅಕ್ಟೋಬರ್ 4ರಂದು ರೈಲ್ವೆ ಸುರಕ್ಷತಾ ಆಯುಕ್ತರು ಮೆಟ್ರೋ ಸಂಚಾರಕ್ಕೆ ಗ್ರೀನ್ ಸಿಗ್ನಲ್ ನೀಡಿದ್ದಾರೆ.
ನೆಲಮಂಗಲ, ಮಾಕಳಿ, ತುಮಕೂರು ಮಾರ್ಗದ ನಿವಾಸಿಗಳ ಹಲವು ವರ್ಷಗಳ ಕನಸು ನನಸಾಗಿದ್ದು, ಎಂಟು ವರ್ಷಗಳಿಂದ ಕಾಮಗಾರಿ ನಡೆಯುತ್ತಲೇ ಇತ್ತು. ಆದರೆ ಮೆಟ್ರೋ ರೈಲು ಸಂಚಾರ ಶುರುವಾಗಿರಲೇ ಇಲ್ಲ. ಅದಕ್ಕೀಗ ಕಾಲ ಕೂಡಿ ಬಂದಿದ್ದು, ನಾಗಸಂದ್ರ ಟು ಮಾದಾವರ ಮಾರ್ಗದಲ್ಲಿ ಮೆಟ್ರೋ ಸಂಚಾರ ಆರಂಭವಾಗಲಿದೆ.
ನಮ್ಮ ಮೆಟ್ರೋದ ವಿಸ್ತರಿತ ಯೋಜನೆಯಾದ ನಾಗಸಂದ್ರ ಹಾಗೂ ಮಾದಾವರ ಮಾರ್ಗ ಉದ್ಘಾಟನೆಗೆ ಸಿದ್ದವಾಗಿದೆ. 298 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿದ್ದು, 3.14 ಕಿಮೀ ಮಾರ್ಗದಲ್ಲಿ ನಾಗಸಂದ್ರದಿಂದ ಮಾದಾವರ ನಡುವೆ ಮೂರು ನಿಲ್ದಾಣಗಳಿದ್ದು, ಮಂಜುನಾಥ ನಗರ, ಚಿಕ್ಕಬಿದರಕಲ್ಲು, ಮಾದಾವರ ಹೊಸದಾಗಿ ಹಸಿರು ಮಾರ್ಗಕ್ಕೆ ಸೇರ್ಪಡೆಯಾಗಲಿದೆ.
ಇದನ್ನೂ ಓದಿ : ಯುವತಿಯ ಖಾಸಗಿ ಅಂಗ ಸ್ಫರ್ಶಿಸಿ ವಿಕೃತಿ ಮೆರೆದ ಕಾಮುಕ – ವಿಡಿಯೋ ಮಾಡಿ ಕಣ್ಣೀರಿಟ್ಟ ಯುವತಿ..!
Post Views: 574