Download Our App

Follow us

Home » ರಾಜ್ಯ » ಆಸ್ತಿ ತೆರಿಗೆದಾರರಿಗೆ ಗುಡ್ ನ್ಯೂಸ್​ : ಜುಲೈ ಅಂತ್ಯದವರೆಗೆ ಶೇ 5ರಷ್ಟು ರಿಯಾಯಿತಿ – ಬಿಬಿಎಂಪಿ

ಆಸ್ತಿ ತೆರಿಗೆದಾರರಿಗೆ ಗುಡ್ ನ್ಯೂಸ್​ : ಜುಲೈ ಅಂತ್ಯದವರೆಗೆ ಶೇ 5ರಷ್ಟು ರಿಯಾಯಿತಿ – ಬಿಬಿಎಂಪಿ

ಬೆಂಗಳೂರು : ಆಸ್ತಿ ತೆರಿಗೆಯನ್ನು ಸಮಯಕ್ಕೆ ಸರಿಯಾಗಿ ಪಾವತಿಸುವವರಿಗೆ ಶೇಕಡಾ 5ರಷ್ಟು ರಿಯಾಯಿತಿಯನ್ನು ನೀಡಲಾಗುತ್ತಿದೆ. ಆ ಮೂಲಕ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಬುಧವಾರ ಆಸ್ತಿ ತೆರಿಗೆ ಕಟ್ಟುವ ತೆರಿಗೆದಾರರಿಗೆ ಗುಡ್ ನ್ಯೂಸ್​ ನೀಡಿದೆ. ಅಷ್ಟೆ ಅಲ್ಲದೇ ಈ ಬಾರಿ ಅವಧಿಯನ್ನು ಮೇ 1ರಿಂದ ಜುಲೈ 31ರವರೆಗೆ ವಿಸ್ತರಣೆ ಮಾಡಿ ಪ್ರಕಟಣೆ ಹೊರಡಿಸಲಾಗಿದೆ.

ಬಿಬಿಎಂಪಿ ಮುಖ್ಯ ಆಯುಕ್ತರು ಹೊರಡಿಸಿದ ಸುತ್ತೋಲೆ ಪ್ರಕಾರ, ತೆರಿಗೆದಾರರು 2024-25ನೇ ಹಣಕಾಸು ವರ್ಷದ ಆಸ್ತಿ ತೆರಿಗೆಯನ್ನು ಏಪ್ರಿಲ್ 30 ರೊಳಗೆ ಪಾವತಿಸಿದರೆ ರಿಯಾಯಿತಿಯನ್ನು ಪಡೆಯಲು ಅರ್ಹರಾಗಿರುತ್ತಾರೆ. ಜೊತೆಗೆ ವಿನಾಯಿತಿ ನೀಡುವ ಸೌಲಭ್ಯವನ್ನು ಮೂರು ತಿಂಗಳವರೆಗೆ ವಿಸ್ತರಿಸಲಾಗಿದೆ.

ಇದೀಗ ಲೋಕಸಭಾ ಚುನಾವಣೆ ಘೋಷಣೆಯಾಗುವ ಹಿನ್ನೆಲೆಯಲ್ಲಿ ಪಾಲಿಕೆಯ ಕಂದಾಯ ವಿಭಾಗದ ಅಧಿಕಾರಿಗಳು ಚುನಾವಣೆ ಕಾರ್ಯದಲ್ಲಿ ತೊಡಗಿರುತ್ತಾರೆ. ಚಲನ್‌ ಸೃಜನೆ ಹಾಗೂ ಆನ್‌ಲೈನ್‌ನಲ್ಲಿ ಆಸ್ತಿ ತೆರಿಗೆಯನ್ನು ಸಕಾಲದಲ್ಲಿ ಪಾವತಿಸುವುದು ಕಷ್ಟಸಾಧ್ಯವಾಗಿರುತ್ತದೆ. ಹೀಗಾಗಿ, ಶೇ 5ರಷ್ಟು ರಿಯಾಯಿತಿಯನ್ನು ಜುಲೈ 31ರವರೆಗೆ ವಿಸ್ತರಿಸಲಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತರು ಸುತ್ತೋಲೆಯಲ್ಲಿ ತಿಳಿಸಿದ್ದಾರೆ.

ಹೊಸ ಪದ್ಧತಿ ಇಲ್ಲ – ಈಗಿರುವ ಆಸ್ತಿ ತೆರಿಗೆ ಪದ್ಧತಿಯೇ 2024–25ನೇ ಸಾಲಿಗೂ ಮುಂದುವರಿಯುತ್ತದೆ. ಮಾರ್ಗಸೂಚಿ ದರದ ಅನ್ವಯ ಆಸ್ತಿ ತೆರಿಗೆ ನಿರ್ಧರಿಸುವ ಹೊಸ ಪದ್ಧತಿ ಸದ್ಯಕ್ಕೆ ಜಾರಿಯಾಗುವ ಲಕ್ಷಣಗಳಿಲ್ಲ. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಹೊಸ ಪದ್ಧತಿ ಜಾರಿಗೆ ತಂದರೆ ತೊಂದರೆಯಾಗಬಹುದು ಎಂಬ ಲೆಕ್ಕಾಚಾರವಿದೆ’ ಎಂದು ಬಿಬಿಎಂಪಿ ಅಧಿಕಾರಿಗಳು ತಿಳಿಸಿದರು.

ಇದನ್ನೂ ಓದಿ : ಬೆಂಗಳೂರು : ಹಾಡಹಗಲೇ ಚಿನ್ನದಂಗಡಿಗೆ ನುಗ್ಗಿ ಮಾಲೀಕನ ಮೇಲೆ ಗುಂಡು ಹಾರಿಸಿದ ದುಷ್ಕರ್ಮಿಗಳು..!

Leave a Comment

DG Ad

RELATED LATEST NEWS

Top Headlines

ರೀಲ್ಸ್​​ಗಾಗಿ ಬಿಳಿ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು ಶವದಂತೆ ರಸ್ತೆಯಲ್ಲಿ ಮಲಗಿದ್ದ ವ್ಯಕ್ತಿ – ವಿಡಿಯೋ ವೈರಲ್..!

ಯುವಜನತೆ ರೀಲ್ಸ್​ ಹುಚ್ಚಿನಿಂದ ಅದೇನೋ ಸಾಹಸಗಳನ್ನು ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡಿರೋದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ಯುವಕ ರೀಲ್ಸ್​​ಗಾಗಿ ಬಿಳಿಯ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು

Live Cricket

Add Your Heading Text Here