Download Our App

Follow us

Home » ಮೆಟ್ರೋ » ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್ – ಇಂದಿನಿಂದ ಈ ಮಾರ್ಗದಲ್ಲಿ ಹೆಚ್ಚುವರಿ ರೈಲು ಸೇವೆ ಆರಂಭ – ಎಲ್ಲೆಲ್ಲಿ?

ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್ – ಇಂದಿನಿಂದ ಈ ಮಾರ್ಗದಲ್ಲಿ ಹೆಚ್ಚುವರಿ ರೈಲು ಸೇವೆ ಆರಂಭ – ಎಲ್ಲೆಲ್ಲಿ?

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಬೃಹತ್ ಜಾಲ ಹೊಂದಿರುವ ನಮ್ಮ ಮೆಟ್ರೋ ಸೇವೆಗೆ ವ್ಯಾಪಕ ಸಂದನೆ ಸಿಕ್ಕಿದೆ. ಇದಕ್ಕೆ ಧನ್ಯವಾದ ತಿಳಿಸಿರುವ BMRCL ಇದೀಗ ನೇರಳೆ ಮಾರ್ಗ ರೈಲುಗಳ ಸಂಚಾರ ಸಮಯವನ್ನು ಬದಲಾವಣೆ ಮಾಡಿದೆ. ಅಲ್ಲದೇ ಮೆಜೆಸ್ಟಿಕ್​ನಿಂದ ಹೆಚ್ಚುವರಿ ರೈಲು ಸೇವೆ ನೀಡಿರುವುದಾಗಿ ತಿಳಿಸಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಬಿಎಂಆರ್‌ಸಿಎಲ್‌, ” ಜುಲೈ 6 ರಿಂದ ಜಾರಿಗೆ ಬರುವಂತೆ ನೇರಳೆ ಮಾರ್ಗದಲ್ಲಿ ವೇಳಾಪಟ್ಟಿ ಬದಲಾವಣೆ ಮಾಡಲಾಗಿದೆ. ನಾಡಪ್ರಭು ಕೆಂಪೇಗೌಡ ನಿಲ್ದಾಣ-ಮೆಜೆಸ್ಟಿಕ್‌ನಿಂದ ಪ್ರಸ್ತುತ 9 ರೈಲುಗಳ ಬದಲಾಗಿ ಹೆಚ್ಚುವರಿಯಾಗಿ 15 ರೈಲುಗಳನ್ನು ಪ್ರಯಾಣಿಕರ ಸೇವೆಗೆ ಒದಗಿಸಲಾಗುವುದು ” ಎಂದು ತಿಳಿಸಿದೆ.

ನಾಡಪ್ರಭು ಕೆಂಪೇಗೌಡ ನಿಲ್ದಾಣ-ಮೆಜೆಸ್ಟಿಕ್‌ನಿಂದ ಪ್ರಸ್ತುತ 9 ರೈಲುಗಳ ಬದಲಿಗೆ ಹೆಚ್ಚುವರಿ 15 ಮೆಟ್ರೋ ರೈಲುಗಳನ್ನು ಪ್ರಯಾಣಿಕರ ಸೇವೆಗೆ ಒದಗಿಸಲಾಗುತ್ತದೆ. ಈ 15 ರೈಲುಗಳಲ್ಲಿ 10 ರೈಲುಗಳು ಪಟ್ಟಂದೂರು, ಅಗ್ರಹಾರದ (ಐಟಿಪಿಎಲ್‌) ವರೆಗೆ, 4 ರೈಲುಗಳು ವೈಟ್‌ಫೀಲ್ಡ್‌ ಮತ್ತು 1 ರೈಲು ಬೈಯಪ್ಪನಹಳ್ಳಿ ಕಡೆಗೆ ಸಂಚರಿಸಲಿವೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಅದರಂತೆ ರೈಲುಗಳು ಕೆಂಪೇಗೌಡ ನಿಲ್ದಾಣದಿಂದ ಬೆಳಗ್ಗೆ 8:48 ಗಂಟೆಯಿಂದ 8:58, 9:18, 9:29, 9:39, 9:50, 10:00, 10:21, 10:39, 10:50, 11:00, 11:22 ಗಂಟೆಗೆ ಪೂರ್ವಕ್ಕೆ ಸಂಚರಿಸಲಿವೆ. ಅಲ್ಲದೇ ಮೆಜೆಸ್ಟಿಕ್‌ನಲ್ಲಿ 3.3 ನಿಮಿಷಗಳ ಆವರ್ತನದಲ್ಲಿ ಬೆಳಗ್ಗೆ 10:25 ಗಂಟೆ ವರೆಗೆ ನಿಯಮಿತವಾಗಿ ಸಾಗುವ ರೈಲು ಸೇವೆಯೂ ಲಭ್ಯವಿರಲಿದೆ.

ಹಸಿರು ಮಾರ್ಗದಲ್ಲಿ ಯಾವುದೇ ಬದಲಾವಣೆ ಇಲ್ಲ : ಹಸಿರು ಮಾರ್ಗದ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಸಾರ್ವಜನಿಕರು ತಮ್ಮ ಅನುಕೂಲಕರ ಪ್ರಯಾಣಕ್ಕಾಗಿ ಮೇಲಿನ ಬದಲಾವಣೆಯನ್ನು ಗಮನಿಸಿ ಪ್ರಯಾಣಿಸಲು ಕೋರಿದೆ.

ಇದನ್ನೂ ಓದಿ : ಚಾಮರಾಜಪೇಟೆ ಮೊರಾರ್ಜಿ ವಸತಿ ಶಾಲೆಗೆ ಸರ್ಪ್ರೈಸ್ ವಿಸಿಟ್ – ಕನ್ನಡ ಮೇಷ್ಟ್ರಾದ ಸಿಎಂ ಸಿದ್ದರಾಮಯ್ಯ..!

 

 

 

Leave a Comment

DG Ad

RELATED LATEST NEWS

Top Headlines

ಅಟ್ರಾಸಿಟಿ ಕೇಸ್​​ ಇದ್ರೂ ಅರೆಸ್ಟ್ ಆಗಿಲ್ಲ ಟೌನ್​ ಪ್ಲಾನಿಂಗ್​ ಆಫೀಸರ್ ಮಂಜೇಶ್ – FIR ಆಗಿದ್ರೂ ಸಸ್ಪೆಂಡ್‌ ಮಾಡದೆ ರಕ್ಷಣೆ ಮಾಡ್ತಿರೋದ್ಯಾಕೆ?

ಆನೇಕಲ್​​ : ಭೂ ವಿವಾದಕ್ಕೆ ಸಂಬಂಧಿಸಿದಂತೆ ಟೌನ್​ ಪ್ಲಾನಿಂಗ್​ ಆಫೀಸರ್ ಮಂಜೇಶ್​​​ ಜೆಸಿಬಿಯನ್ನೂ ತೆಗೆದುಕೊಂಡು ಹೋಗಿ ಟಾರ್ಚರ್ ಕೊಟ್ಟಿದ್ದ ಘಟನೆಯೊಂದು ನಡೆದಿತ್ತು. ಈ ಪ್ರಕರಣಕ್ಕೆ ಮಂಜೇಶ್​​​ ವಿರುದ್ದ

Live Cricket

Add Your Heading Text Here