ಬೆಂಗಳೂರು : ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ವಂಚಿಸಿದ ಆರೋಪದಡಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸಹೋದರನ ವಿರುದ್ದ ಪ್ರಕರಣ ದಾಖಲಾಗಿತ್ತು. ಇದೀಗ ಈ ಪ್ರಕರಣದಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸಹೋದರನಿಗೆ ಬಿಗ್ ರಿಲೀಫ್ ಸಿಕ್ಕಿದೆ.
ಪ್ರಕರಣ ರದ್ದು ಕೋರಿ ಗೋಪಾಲ ಜೋಶಿ ಪರ ಹೈಕೋರ್ಟ್ನ ಹಿರಿಯ ವಕೀಲ ಡಿ.ಆರ್.ರವಿಶಂಕರ್, ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠದ ಮುಂದೆ ಗುರುವಾರ ಮೆಮೊ ಸಲ್ಲಿಸಿದರು.
ಇಂದು ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠ, ಗೋಪಾಲ್ ಜೋಶಿ ವಿರುದ್ದದ ಕೇಸ್ ತನಿಖೆಗೆ ತಡೆ ನೀಡಿ ಆದೇಶ ಹೊರಡಿಸಿದೆ. ದಾಖಲೆಗಳ ಪರಿಶೀಲಿಸಿ ನ್ಯಾ.ಎಂ .ನಾಗಪ್ರಸನ್ನ ಕೇಸ್ಗೆ ತಡೆ ನೀಡಿದ್ದಾರೆ.
ಇದನ್ನೂ ಓದಿ : ಸೌತ್ ಎಂಡ್ ಸರ್ಕಲ್ನಲ್ಲಿ ಡಾ. ಪುನೀತ್ ರಾಜ್ಕುಮಾರ್ ಕಂಚಿನ ಪುತ್ಥಳಿ ಅನಾವರಣ..!
Post Views: 10