ಬೆಂಗಳೂರು : ರಾಜ್ಯ ಸರ್ಕಾರದಿಂದ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ಮಾಡಿದ ಹಿನ್ನೆಲೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಟ್ವೀಟ್ ಮಾಡುವ ಮೂಲಕ ರಾಜ್ಯ ಸರ್ಕಾರವನ್ನ ಟೀಕಿಸಿದ್ದಾರೆ.
ಟ್ವೀಟ್ ಮಾಡುವ ಮೂಲಕ ರಾಜ್ಯ ಸರ್ಕಾರದ ವಿರುದ್ದ ಕಿಡಿಕಾರಿದ ಅವರು, ಅಭಿವೃದ್ಧಿ ಕೇಳ್ಬೇಡಿ. ತೊಗೊಳ್ರಪ್ಪ ಕೊಟ್ರು ಚೊಂಬು. ಬೆಲೆ ಏರಿಕೆಯ ಬಗ್ಗೆ ಉದ್ದುದ್ದ ಭಾಷಣ ಬಿಗಿದು, ಕೇಂದ್ರ ಸರ್ಕಾರದ ಮೇಲೆ ಬೊಟ್ಟು ತೋರಿಸಿ ಜನರ ದಿಕ್ಕು ತಪ್ಪಿಸುವ ರಾಜ್ಯ ಕಾಂಗ್ರೆಸ್ ಸರ್ಕಾರ ಎಂದು ವ್ಯಂಗ್ಯವಾಡಿದ್ದಾರೆ.
ಕೇಂದ್ರ ಇಂಧನದ ಬೆಲೆ ಕಡಿಮೆ ಮಾಡಿದ್ದರು. ಆದರೆ ರಾಜ್ಯದಲ್ಲಿ ಏಕಾಏಕಿ ಪೆಟ್ರೋಲ್, ಡೀಸೆಲ್ ಬೆಲೆಗಳನ್ನು ಏರಿಸಿ ಜನರಿಗೆ ಹೊರೆಮಾಡಿದೆ. ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರ, ದುರಾಡಳಿತ, ರೈತರ ಆತ್ಮಹತ್ಯೆ, ಹಗರಣಗಳ ಭಾಗ್ಯವನ್ನು ರಾಜ್ಯಕ್ಕೆ ನೀಡಿದೆ. ಅಧಿಕಾರ ವಹಿಸಿಕೊಂಡ ಕಳೆದ 1.5 ವರ್ಷಗಳಿಂದ ರಾಜ್ಯದಲ್ಲಿ ಅಭಿವೃದ್ಧಿಯಂತೂ ಇಲ್ಲವೇ ಇಲ್ಲ ಎಂದು ಗುಡುಗಿದ್ದಾರೆ.
ಇದನ್ನೂ ಓದಿ : ಡಿ ಬಾಸ್ ಹೆಸರಿನಲ್ಲಿ ಪುಂಡತನ ಮೆರೆದ ಕಿರಾತಕ ಅಭಿಮಾನಿಯ ಒದ್ದು ಒಳಗೆ ಹಾಕಿದ ಯಾದಗಿರಿ ಪೊಲೀಸರು..!