Download Our App

Follow us

Home » ರಾಜ್ಯ » ರಾಜ್ಯದಲ್ಲಿ ಬಿಯರ್ ದರ ಹೆಚ್ಚಳಕ್ಕೆ ಮುಂದಾದ ಸರ್ಕಾರ : ಹೆಚ್ಚುವರಿ ಅಬಕಾರಿ ಸುಂಕ ಏರಿಕೆಗೆ ಪ್ರಸ್ತಾಪ..!

ರಾಜ್ಯದಲ್ಲಿ ಬಿಯರ್ ದರ ಹೆಚ್ಚಳಕ್ಕೆ ಮುಂದಾದ ಸರ್ಕಾರ : ಹೆಚ್ಚುವರಿ ಅಬಕಾರಿ ಸುಂಕ ಏರಿಕೆಗೆ ಪ್ರಸ್ತಾಪ..!

ಬೆಂಗಳೂರು : ಕರ್ನಾಟಕ ಸರ್ಕಾರ ಮತ್ತೊಮ್ಮೆ ಬಿಯರ್ ಮೇಲೆ ಹೆಚ್ಚುವರಿ ಅಬಕಾರಿ ಸುಂಕ ವಿಧಿಸಲು ಮುಂದಾಗಿದೆ. ಹಾಗಾಗಿ 650 ML ಬಾಟಲಿನ ಬಿಯರ್​​ಗೆ 8 ರಿಂದ 10 ರೂ ಏರಿಕೆಗೆ ಸರ್ಕಾರ ಪ್ರಸ್ತಾಪಿಸಿದೆ. ಕರ್ನಾಟಕ ಅಬಕಾರಿ (ಸುಂಕಗಳು ಮತ್ತು ಶುಲ್ಕಗಳು) ನಿಯಮಕ್ಕೆ ತಿದ್ದುಪಡಿ 2024ರ ಕರಡನ್ನು ರಾಜ್ಯಪತ್ರದಲ್ಲಿ ಹೊರಡಿಸಿದೆ.

ಕರಡು ಅಧಿಸೂಚನೆಯ ಪ್ರಕಾರ, ಕರ್ನಾಟಕದಲ್ಲಿ ತಯಾರಿಸಲಾದ ಅಥವಾ ರಾಜ್ಯಕ್ಕೆ ಆಮದು ಮಾಡಿಕೊಳ್ಳುವ ಬಿಯರ್‌ ಬಾಟಲಿಯ ಮೇಲೆ ಹೆಚ್ಚುವರಿ ಅಬಕಾರಿ ಸುಂಕವನ್ನು ಶೇಕಡಾ 185 ರಿಂದ ಶೇಕಡಾ 195 ಕ್ಕೆ ಶೇಕಡಾ 10 ರಷ್ಟು ಹೆಚ್ಚಿಸಲಾಗುತ್ತದೆ.

ಒಂದು ವೇಳೆ ದರ ಹೆಚ್ಚಳ ಜಾರಿಗೆಯಾದ್ರೆ, ಆರು ತಿಂಗಳ ಅವಧಿಯಲ್ಲಿ ಇದು ಎರಡನೇ ಬಾರಿ ಮದ್ಯದ ಬೆಲೆಯಲ್ಲಿ ಮಾಡಿದ ಏರಿಕೆಯಾಗಲಿದೆ. ಕಳೆದ ವರ್ಷ ಜುಲೈನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾರತೀಯ ನಿರ್ಮಿತ ಮದ್ಯದ ಮೇಲೆ ಶೇ 20ರಷ್ಟು ಮತ್ತು ಬಿಯರ್ ಮೇಲೆ ಶೇ 175ರಿಂದ ಶೇ 185ಕ್ಕೆ ಹೆಚ್ಚುವರಿ ಅಬಕಾರಿ ಸುಂಕವನ್ನು ಹೆಚ್ಚಿಸಿದ್ದರು.

ರಾಜ್ಯ ಸರಕಾರಕ್ಕೆ ಅಬಕಾರಿ ಆದಾಯವೇ ನಿರ್ಣಾಯಕ. 2023-24ನೇ ಹಣಕಾಸು ವರ್ಷದಲ್ಲಿ ಕರ್ನಾಟಕವು ಅಬಕಾರಿಯಿಂದ 36,000 ಕೋಟಿ ರೂಪಾಯಿ ಆದಾಯ ಗಳಿಸುವ ಗುರಿಯನ್ನು ಹೊಂದಿದೆ.

ಇದನ್ನೂ ಓದಿ : ಮಂಡ್ಯ : ನಾಪತ್ತೆಯಾಗಿದ್ದ ಶಿಕ್ಷಕಿ ಶ*ವವಾಗಿ ಪತ್ತೆ..!

Leave a Comment

DG Ad

RELATED LATEST NEWS

Top Headlines

ರೀಲ್ಸ್​​ಗಾಗಿ ಬಿಳಿ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು ಶವದಂತೆ ರಸ್ತೆಯಲ್ಲಿ ಮಲಗಿದ್ದ ವ್ಯಕ್ತಿ – ವಿಡಿಯೋ ವೈರಲ್..!

ಯುವಜನತೆ ರೀಲ್ಸ್​ ಹುಚ್ಚಿನಿಂದ ಅದೇನೋ ಸಾಹಸಗಳನ್ನು ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡಿರೋದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ಯುವಕ ರೀಲ್ಸ್​​ಗಾಗಿ ಬಿಳಿಯ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು

Live Cricket

Add Your Heading Text Here