ಮಂಗಳೂರು : ಬಿಜೆಪಿ ಆಪರೇಷನ್ ಕಮಲ ಮೂಲಕ ಸರ್ಕಾರ ಕೆಡವಿತ್ತು. ಈಗ ರಾಜಭವನ ಬಳಸಿ ಸರ್ಕಾರ ಅಸ್ಥಿರ ಯತ್ನ ಮಾಡ್ತಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್ ಕಿಡಿಕಾರಿದ್ದಾರೆ.
ಮುಡಾ ಹಗರಣ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡದ ವಿಚಾರವಾಗಿ ಮಂಗಳೂರಿನಲ್ಲಿ ಮಾತನಾಡಿದ ಅವರು, ಸಂವಿಧಾನದ ಚೌಕಟ್ಟು ಬಿಟ್ಟು ರಾಜ್ಯಪಾಲರು ನಿರ್ಧರಿಸಿದ್ದಾರೆ. ಬಿಜೆಪಿ ನಿರ್ದೇಶನದಂತೆ ರಾಜ್ಯಪಾಲರು ಕೆಲಸ ಮಾಡಲು ಆಗಲ್ಲ. ರಾಜ್ಯಪಾಲರು ಬಿಜೆಪಿ ಅಧ್ಯಕ್ಷರಂತೆ ಕೆಲಸ ಮಾಡ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಇನ್ನು ವಾಮಮಾರ್ಗದ ಮೂಲಕ ಸರ್ಕಾರ ಅಸ್ಥಿರ ಯತ್ನ ನಡೆದಿದೆ. ಕಾನೂನು, ರಾಜಕೀಯವಾಗಿಯೇ ನಾವೆಲ್ಲಾ ಎದುರಿಸುತ್ತೇವೆ. ಯಡಿಯೂರಪ್ಪ ಚೆಕ್ ಮೂಲಕ ಹಣ ಪಡೆದುಕೊಂಡಿದ್ದರು. ಸಿಎಂ ಸಿದ್ದರಾಮಯ್ಯ ವಿರುದ್ಧದ ಆರೋಪ ಕಪೋಲ ಕಲ್ಪಿತ. ಸಾಂವಿಧಾನಿಕ ಹುದ್ದೆಯ ವಿರುದ್ಧ ನಾವು ಹೋರಾಡುತ್ತಿಲ್ಲ. ಆ ಸ್ಥಾನದಲ್ಲಿ ಕುಳಿತು ಮಾಡಿರುವ ತೀರ್ಮಾನ ವಿರೋಧಿಸುತ್ತೇವೆ ಎಂದು ಮಂಗಳೂರಿನಲ್ಲಿ ಕಾಂಗ್ರೆಸ್ ಮುಖಂಡ ಬಿ.ಕೆ.ಹರಿಪ್ರಸಾದ್ ಹೇಳಿಕೆ ನೀಡಿದ್ದಾರೆ.
ಇದನ್ನೂ ಓದಿ : ರೇಣುಕಾಸ್ವಾಮಿ ಕೊ*ಲೆ ಕೇಸ್ – 3 ದಿನದ ಒಳಗೆ ಪೊಲೀಸರ ಕೈಸೇರಲಿದೆ ಸಂಪೂರ್ಣ FSL ರಿಪೋರ್ಟ್..!